ಬೆಂಗಳೂರು: ಬಾಲ ನ್ಯಾಯ ಕಾಯ್ದೆ ಪ್ರಕಾರ ಕಾನೂನ ಸಂಘರ್ಷಕ್ಕೆ ಸಿಲುಕಿರುವ ಮಕ್ಕಳ ಪ್ರಕರಣಗಳ ನಿರ್ವಹಣೆಗೆ ಪ್ರತಿ ಜಿಲ್ಲೆಗೆ ಒಂದೊಂದು ಹೆಚ್ಚುವರಿ ಬಾಲ ನ್ಯಾಯ ಮಂಡಳಿ ರಚಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ.
ರಾಜ್ಯದಲ್ಲಿ ಬಾಲ ನ್ಯಾಯ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ತರುವ ವಿಚಾರವಾಗಿ ಹೈಕೋರ್ಟ್ ಸ್ವಯಂ ಪ್ರೇರಿತವಾಗಿ ದಾಖಲಿಸಿಕೊಂಡಿರುವ ಹಾಗೂ ಬಚಪನ್ ಬಚಾವೋ ಆಂದೋಲನ್ ಸ್ವಯಂಸೇವಾ ಸಂಸ್ಥೆ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ ನೇತೃತ್ವದ ವಿಭಾಗೀಯ ಪೀಠ ಈ ಆದೇಶ ನೀಡಿದೆ.
ಬಾಲ ನ್ಯಾಯ ಮಂಡಳಿಗಳು ನಿಯಮಿತವಾಗಿ ಕಾರ್ಯನಿರ್ವಹಿಸುವಂತೆ ರಾಜ್ಯ ಸರ್ಕಾರ ನೋಡಿಕೊಳ್ಳಬೇಕು. ಬಾಲ ನ್ಯಾಯ ಕಾಯ್ದೆ ಅನುಸರಿಸಿ ಎಲ್ಲಾ ಬಾಲ ನ್ಯಾಯ ಮಂಡಳಿಗಳ ಕಚೇರಿಗಳನ್ನು ಸಮಾನ ರೀತಿಯಲ್ಲಿ ವಿನ್ಯಾಸಗೊಳಿಸಬೇಕು. ಜೊತೆಗೆ ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಜೊತೆಗೆ ಸಮಾಲೋಚಿಸಿದ ಬಳಿಕ ಅವುಗಳಿಗೆ ಮೂಲಸೌಕರ್ಯ ಹಾಗೂ ಮಾನವ ಸಂಪನ್ಮೂಲ ಒದಗಿಸಲು ಏಕರೂಪ ನೀತಿ ಅನುಸರಿಸಬೇಕು. ಮೂಲಸೌಕರ್ಯ ಮತ್ತು ಮಾನವ ಸಂಪನ್ಮೂಲ ಒದಗಿಸುವುದರ ಬಗ್ಗೆ ಹೈಕೋರ್ಟ್ ಅಂತಿಮ ಮಾರ್ಗಸೂಚಿ ಹೊರಡಿಸುವವರೆಗೆ ಸರ್ಕಾರ ಸಪರ್ಮಕ ಪ್ರಮಾಣದಲ್ಲಿ ಮೂಲಸೌಕರ್ಯಗಳನ್ನು ಒದಗಿಸಬೇಕು ಎಂದು ಹೈಕೋರ್ಟ್ ಹೇಳಿದೆ.
ಬಾಲ ನ್ಯಾಯ ಕಾಯ್ದೆ ಅನುಷ್ಠಾನ ಮತ್ತು ಮೇಲ್ವಿಚಾರಣೆಗೆ ಸಂಬಂಧಿಸಿದಂತೆ ಮಕ್ಕಳ ಹಕ್ಕುಗಳ ರಕ್ಷಣೆ ಆಯೋಗ ಯಾವುದಾದರೂ ಕ್ರಮಗಳನ್ನು ಕೈಗೊಂಡಿದೆಯೇ ಎಂಬ ಬಗ್ಗೆ ಒಂದು ತಿಂಗಳಲ್ಲಿ ಮಾಹಿತಿ ಸಲ್ಲಿಸುವಂತೆ ಸರ್ಕಾರಕ್ಕೆ ನಿರ್ದೇಶಿಸಿದೆ. ಬಾಲ ನ್ಯಾಯ ಕಾಯ್ದೆಯಡಿ ಕಾರ್ಯಾಚರಿಸುತ್ತಿರುವ ಸಂಸ್ಥೆಗಳ ಕಾರ್ಯನಿರ್ವಹಣೆ ಮತ್ತು ಮಕ್ಕಳಿಗೆ ಸಂಬಂಧಿಸಿದ ನೀತಿಗಳ ಜಾರಿ ಬಗ್ಗೆ ಸಾಮಾಜಿಕ ಲೆಕ್ಕ ಪರಿಶೋಧನೆ ನಡೆಸಲು ಪರಿಗಣಿಸುವಂತೆ, ಎಲ್ಲಾ ಬಾಲ ನ್ಯಾಯ ಮಂಡಳಿಗಳಲ್ಲಿ ವಿಡಿಯೋ ಕಾನ್ಫರೆನ್ಸ್ ನಡೆಸಲು ಬೇಕಾಗುವ ಮೂಲಭೂತಸೌಕರ್ಯಗಳನ್ನು ಒದಗಿಸಲು ಸರ್ಕಾರಕ್ಕೆ ಸೂಚಿಸಿದ ಹೈಕೋರ್ಟ್ ಇದರ ಅನುಪಾಲನ ವರದಿಯನ್ನು ಒಂದು ತಿಂಗಳಲ್ಲಿ ಸಲ್ಲಿಸಲು ನಿರ್ದೇಶಿಸಿದೆ.
ಬಾಲ ನ್ಯಾಯ ಕಾಯ್ದೆ ಪರಿಣಾಮಕಾರಿ ಅನುಷ್ಠಾನಕ್ಕೆ ಹೈಕೋರ್ಟ್ ಸೂಚನೆ - ಬಾಲ ನ್ಯಾಯ ಕಾಯ್ದೆ ಅನುಷ್ಠಾನಕ್ಕೆ ಹೈಕೋರ್ಟ್ ಸೂಚನೆ