ETV Bharat / city

ಆನ್‌ಲೈನ್‌ ಗೇಮಿಂಗ್‌ ಪ್ರಶ್ನಿಸಿದ್ದ ಪಿಐಎಲ್ ವಜಾಗೊಳಿಸಿದ ಹೈಕೋರ್ಟ್‌ - online gaming

ಆನ್‌ಲೈನ್ ಗೇಮಿಂಗ್‌ಗೆ ಸೂಕ್ತ ನಿಯಮಾವಳಿ ರೂಪಿಸುವವರೆಗೆ ರಾಜ್ಯದಲ್ಲಿ ಅವುಗಳನ್ನು ರದ್ದುಪಡಿಸುವಂತೆ ಸರ್ಕಾರಕ್ಕೆ ನಿರ್ದೇಶನ ಕೋರಿ ದಾವಣಗೆರೆಯ ಡಿ.ಆರ್.ಶಾರದಾ ಎಂಬುವರು ಹೈಕೋರ್ಟ್​ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.

ಹೈಕೋರ್ಟ್
ಹೈಕೋರ್ಟ್
author img

By

Published : Nov 2, 2021, 3:40 PM IST

ಬೆಂಗಳೂರು: ರಾಜ್ಯದಲ್ಲಿ ಆನ್‌ಲೈನ್ ಬೆಟ್ಟಿಂಗ್ ಮತ್ತು ಗ್ಯಾಂಬ್ಲಿಂಗ್ ನಿಷೇಧಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿ ಆದೇಶಿಸಿದೆ.

ಸೂಕ್ತ ನಿಯಮಾವಳಿ ರೂಪಿಸುವವರೆಗೆ ರಾಜ್ಯದಲ್ಲಿ ಆನ್​ಲೈನ್ ಗೇಮ್ ರದ್ದುಪಡಿಸುವಂತೆ ಸರ್ಕಾರಕ್ಕೆ ನಿರ್ದೇಶನ ಕೋರಿ ದಾವಣಗೆರೆಯ ಡಿ.ಆರ್.ಶಾರದಾ ಎಂಬುವರು ಹೈಕೋರ್ಟ್​ಗೆ ಪಿಐಎಲ್‌ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ಪೀಠದ ಅರ್ಜಿ ವಜಾಗೊಳಿಸಿತು.

ರಾಜ್ಯ ಸರ್ಕಾರದ ಪರ ವಕೀಲರು ಲಿಖಿತ ಮಾಹಿತಿ ಸಲ್ಲಿಸಿ, ರಾಜ್ಯ ಸರ್ಕಾರವು ಕರ್ನಾಟಕ ಪೊಲೀಸ್ ಕಾಯ್ದೆಗೆ ತಿದ್ದುಪಡಿ ತಂದು ಎಲ್ಲಾ ಸ್ವರೂಪದ ಆನ್‌ಲೈನ್ ಗ್ಯಾಂಬ್ಲಿಂಗ್ ಹಾಗೂ ಬೆಟ್ಟಿಂಗ್ ನಿಷೇಧ ಮಾಡಿ ಆದೇಶ ಹೊರಡಿಸಿದೆ. ಹೀಗಾಗಿ, ಅರ್ಜಿ ವಿಚಾರಣೆ ಮಾನ್ಯತೆ ಕಳೆದುಕೊಂಡಿದೆ ಎಂದು ತಿಳಿಸಿದ್ದರು.

ಈ ವಾದ ಸಮ್ಮತಿಸಿರುವ ಪೀಠ, ರಾಜ್ಯದಲ್ಲಿ ಆನ್‌ಲೈನ್ ಬೆಟ್ಟಿಂಗ್ ಮತ್ತು ಗ್ಯಾಂಬ್ಲಿಂಗ್ ನಿಷೇಧಕ್ಕೆ ಸರ್ಕಾರ ಕಾಯ್ದೆ ತಿದ್ದುಪಡಿ ತಂದಿದೆ. ಇದರಿಂದ ಅರ್ಜಿ ವಿಚಾರಣಾ ಮಾನ್ಯತೆ ಕಳೆದುಕೊಂಡಿದೆ ಎಂದು ತಿಳಿಸಿ, ಅರ್ಜಿ ವಜಾ ಮಾಡಿತು.

ಇದೇ ವೇಳೆ ಅರ್ಜಿದಾರ ಪರ ವಕೀಲ ಶ್ರೀಧರ್ ಪ್ರಭು ಮಂಡಿಸಿದ ವಾದವನ್ನು ಪರಿಗಣಿಸಿರುವ ಪೀಠ, ತಿದ್ದುಪಡಿ ತಂದಿರುವುದು ನಿಜವಾದರೂ ಆನ್‌ಲೈನ್ ಗ್ಯಾಬ್ಲಿಂಗ್ ಮತ್ತು ಬೆಟ್ಟಿಂಗ್ ನಿಯಂತ್ರಣಕ್ಕೆ ಸೂಕ್ತ ವ್ಯವಸ್ಥೆ ಇಲ್ಲ. ಈ ಬಗ್ಗೆ ಸರ್ಕಾರ ಗಮನ ಹರಿಸಬೇಕು ಎಂದು ಸೂಚಿಸಿದೆ.

ಕಳೆದ 2020ರ ಡಿಸೆಂಬರ್​ನಲ್ಲಿ ಹೈಕೋರ್ಟ್​ಗೆ ಪಿಐಎಲ್ ಸಲ್ಲಿಸಲಾಗಿತ್ತು. ಈ ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್, ರಾಜ್ಯ ಸರ್ಕಾರ ಸೂಕ್ತ ನಿರ್ಧಾರ ಕೈಗೊಳ್ಳುವಂತೆ ನಿರ್ದೇಶಿಸಿತ್ತು. ಹೈಕೋರ್ಟ್ ಹಲವು ನಿರ್ದೇಶನಗಳನ್ನು ನೀಡಿದ ಬಳಿಕ ಸರ್ಕಾರ ಜೂಜು ನಿಯಂತ್ರಣಕ್ಕಾಗಿ ಕರ್ನಾಟಕ ಪೊಲೀಸ್ ಕಾಯ್ದೆಗೆ ತಿದ್ದುಪಡಿ ತಂದು, ಆನ್ ಲೈನ್ ಗೇಮ್ ನಿಷೇಧಿಸಿದೆ.

ಇದನ್ನೂ ಓದಿ: ಸಿಂದಗಿಯಲ್ಲಿ ಬಿಜೆಪಿ ಜಯಗಳಿಸಿದೆ : ಸಂಸದ ಬಿ.ವೈ.ರಾಘವೇಂದ್ರ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.