ETV Bharat / city

ವಿಪತ್ತು ನಿರ್ವಹಣಾ ಕಾಯ್ದೆ ಅನುಷ್ಠಾನಗೊಳಿಸಲು ಸರ್ಕಾರ ವಿಫಲ: ಹೈಕೋರ್ಟ್ ಗರಂ

ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ, ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ರಚನೆಯಾಗಿ ಅಧಿಸೂಚನೆ ಹೊರಡಿಸಿದ ತಕ್ಷಣವೇ ರಾಜ್ಯ ಮತ್ತು ಜಿಲ್ಲಾ ಮಟ್ಟದ ವಿಪತ್ತು ಸ್ಪಂದನಾ ನಿಧಿ ಹಾಗೂ ವಿಪತ್ತು ಉಪಶಮನ ನಿಧಿಗಳ ಸ್ಥಾಪನೆಯಾಗಬೇಕು. ಆದರೆ, ಈವರೆಗೆ ಈ ನಾಲ್ಕು ನಿಧಿಗಳ ಸ್ಥಾಪನೆಯಾಗಿಲ್ಲ ಎಂದು ಹೈಕೋರ್ಟ್​ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿತು.

high-court
ಹೈಕೋರ್ಟ್
author img

By

Published : Jan 7, 2021, 8:35 PM IST

Updated : Jan 7, 2021, 8:50 PM IST

ಬೆಂಗಳೂರು: ವಿಪತ್ತು ನಿರ್ವಹಣಾ ಕಾಯ್ದೆ-2005 ಅನ್ನು ಅನುಷ್ಠಾನಗೊಳಿಸುವಲ್ಲಿ ವಿಫಲವಾಗಿದೆ ಎಂದು ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿರುವ ಹೈಕೋರ್ಟ್, ಈ ಕುರಿತು ಪ್ರಮಾಣಪತ್ರ ಸಲ್ಲಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ನಿರ್ದೇಶಿಸಿದೆ.

ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಈ ನಿರ್ದೇಶನ ನೀಡಿದೆ. ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು, ಕಾಯ್ದೆ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಸರ್ಕಾರ ಕೈಗೊಂಡಿರುವ ಕ್ರಮಗಳ ಕುರಿತ ಲಿಖಿತ ಮಾಹಿತಿ ಸಲ್ಲಿಸಿದರು.

ಇದನ್ನೂ ಓದಿ...ಕೇಬಲ್ ಸಮಸ್ಯೆ ಸರಿಪಡಿಸಿ: ಬಿಬಿಎಂಪಿ ಆಯುಕ್ತರಿಗೆ ಹೈಕೋರ್ಟ್ ತಾಕೀತು

ವರದಿ ಗಮನಿಸಿದ ಪೀಠ, ಕಾಯ್ದೆಯ ಪರಿಣಾಮಕಾರಿ ಅನುಷ್ಠಾನ ಕುರಿತು 2019ರಿಂದ ಇಲ್ಲಿವರೆಗೆ ಹೈಕೋರ್ಟ್ ಹಲವು ನಿರ್ದೇಶನಗಳನ್ನು ನೀಡಿದೆ. ಆದರೆ, ಸರ್ಕಾರದ ಕ್ರಮಗಳು ಮಾತ್ರ ನಿರಾಶಾದಾಯಕವಾಗಿವೆ. 16 ವರ್ಷಗಳ ಹಿಂದಿನ ವಿಪತ್ತು ನಿರ್ವಹಣಾ ಕಾಯ್ದೆ ಇಲ್ಲಿಯತನಕ ಸಮರ್ಪಕವಾಗಿ ಅನುಷ್ಠಾನಗೊಂಡಿಲ್ಲ ಎಂಬುದೇ ದೊಡ್ಡ ವಿಪತ್ತು ಎಂದು ಬೇಸರ ವ್ಯಕ್ತಪಡಿಸಿತು.

ಇದನ್ನೂ ಓದಿ: 'ಬಿಎಸ್​ವೈ ಸರ್ಕಾರ ಅಧಿಕಾರಕ್ಕೆ ಬಂದಾಗ ಪ್ರವಾಹ, ಬರ, ಕೊರೊನಾ ಎದುರಾದವು'

ಅಲ್ಲದೇ, ಕಾಯ್ದೆಯ ಸೆಕ್ಷನ್-28ರ ಪ್ರಕಾರ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ, ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ರಚನೆಯಾಗಿ ಅಧಿಸೂಚನೆ ಹೊರಡಿಸಿದ ತಕ್ಷಣವೇ ರಾಜ್ಯ ಮತ್ತು ಜಿಲ್ಲಾ ಮಟ್ಟದ ವಿಪತ್ತು ಸ್ಪಂದನಾ ನಿಧಿ ಹಾಗೂ ವಿಪತ್ತು ಉಪಶಮನ ನಿಧಿಗಳ ಸ್ಥಾಪನೆಯಾಗಬೇಕು. ಆದರೆ, ಈವರೆಗೆ ಈ ನಾಲ್ಕು ನಿಧಿಗಳ ಸ್ಥಾಪನೆಯಾಗಿಲ್ಲ. ಅವುಗಳೆಲ್ಲವೂ ಕಾಗದಗಳಲ್ಲಿ ಮಾತ್ರ ಅಸ್ತಿತ್ವದಲ್ಲಿವೆ. ಕಾಯ್ದೆಗೆ ಈವರೆಗೆ ನಿಯಮಗಳನ್ನೂ ರೂಪಿಸಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿತು. ಹಾಗೆಯೇ, ಕಾಯ್ದೆಯ ಅನುಷ್ಠಾನ, ನಿಧಿಗಳ ಸ್ಥಾಪನೆ ಕುರಿತು ಮುಂದಿನ ಒಂದು ತಿಂಗಳಲ್ಲಿ ಪ್ರಮಾಣಪತ್ರ ಸಲ್ಲಿಸುವಂತೆ ಮುಖ್ಯ ಕಾರ್ಯದರ್ಶಿಗೆ ಹೈಕೋರ್ಟ್ ತಾಕೀತು ಮಾಡಿ, ವಿಚಾರಣೆಯನ್ನು ಜ.27ಕ್ಕೆ ಮುಂದೂಡಿತು.

Last Updated : Jan 7, 2021, 8:50 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.