ETV Bharat / city

ಬೀದಿ ದೀಪ ಅಳವಡಿಸಲು ಕೋರಿದ್ದ ವಕೀಲರಿಗೆ ವಿಧಿಸಿದ್ದ 50 ಸಾವಿರ ದಂಡ ಕೈಬಿಟ್ಟ ಹೈಕೋರ್ಟ್

ರಾಷ್ಟ್ರೀಯ ಹೆದ್ದಾರಿಯಲ್ಲಿ ಬೀದಿ ದೀಪ ಅಳವಡಿಸಿಲ್ಲ ಎಂದು ಆಕ್ಷೇಪಿಸಿ PIL ಸಲ್ಲಿಸಿದ್ದ ವಕೀಲರೊಬ್ಬರಿಗೆ ವಿಧಿಸಿದ್ದ ದಂಡವನ್ನು ಹೈಕೋರ್ಟ್ ಕೈಬಿಟ್ಟಿದೆ..

high court
high court
author img

By

Published : Oct 1, 2021, 5:24 PM IST

ಬೆಂಗಳೂರು : ನೆಲಮಂಗಲದಿಂದ ತುಮಕೂರು ನಡುವಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೀದಿ ದೀಪ ಅಳವಡಿಸಿಲ್ಲ ಎಂದು ಆಕ್ಷೇಪಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದ ವಕೀಲರೊಬ್ಬರಿಗೆ ವಿಧಿಸಿದ್ದ 50 ಸಾವಿರ ರೂ. ದಂಡವನ್ನು ಹೈಕೋರ್ಟ್ ಕೈಬಿಟ್ಟಿದೆ.

ಈ ಕುರಿತು ವಕೀಲ ಎಲ್ ರಮೇಶ್ ನಾಯಕ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹಂಗಾಮಿ ಸಿಜೆ ಎಸ್ ಸಿ ಶರ್ಮಾ ಅವರ ನೇತೃತ್ವದ ವಿಭಾಗೀಯ ಪೀಠವು 2021ರ ಸೆ.22ರಂದು ವಜಾಗೊಳಿಸಿತ್ತು.

ಹೆದ್ದಾರಿಯಲ್ಲಿ ಕಡ್ಡಾಯವಾಗಿ ಬೀದಿ ದೀಪ ಅಳವಡಿಸಬೇಕು ಎಂಬುದನ್ನು ಪ್ರತಿಪಾದಿಸುವ ನಿಯಮಗಳು ಮತ್ತು ಆ ಕುರಿತ ದಾಖಲೆಗಳನ್ನು ಅರ್ಜಿದಾರರು ನ್ಯಾಯಾಲಯಕ್ಕೆ ಒದಗಿಸಿಲ್ಲ. ಟೋಲ್ ಪಾವತಿ ವಿಚಾರದಲ್ಲಿ ಟೋಲ್ ಸಂಗ್ರಹ ಸಂಸ್ಥೆ ವಿರುದ್ಧ ಅರ್ಜಿದಾರರಿಗೆ ಅಸಮಾಧಾನವಿದ್ದು, ಎಫ್‌ಐಆರ್ ಸಹ ದಾಖಲಿಸಿದ್ದಾರೆ.

ಮತ್ತೊಂದೆಡೆ ಹೈಕೋರ್ಟ್‌ಗೆ ಪಿಐಎಲ್ ಸಲ್ಲಿಸಿದ್ದಾರೆ. ಇದು ಕಾನೂನಿನ ದುರ್ಬಳಕೆ ಎಂದು ಅಭಿಪ್ರಾಯ ಪಟ್ಟು ಅರ್ಜಿದಾರ ವಕೀಲರಿಗೆ 25 ಸಾವಿರ ರೂ. ದಂಡ ವಿಧಿಸಿತ್ತು. ಇದಕ್ಕೆ ಆಕ್ಷೇಪಿಸಿದ್ದ ವಕೀಲ ರಮೇಶ್ ನಾಯಕ್, ಹೆದ್ದಾರಿಯಲ್ಲಿ ಬೀದಿ ದೀಪ ಅಳವಡಿಸುವ ಸಂಬಂಧ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ಹೆದ್ದಾರಿ ನಿರ್ವಹಣೆ ಗುತ್ತಿಗೆ ಪಡೆದಿರುವ ಜೆಎಎಸ್‌ಎಸ್ ಟೋಲ್ ರೋಡ್ ಕಂಪನಿ ನಡುವೆ ಒಪ್ಪಂದವಿದೆ. ಕಾಲಾವಕಾಶ ನೀಡಿದರೆ ದಾಖಲೆ ಸಲ್ಲಿಸಲಾಗುವುದು.

ಸಾರ್ವಜನಿಕ ಹಿತಾಸಕ್ತಿಯಿಂದಲೇ ಅರ್ಜಿ ದಾಖಲಿಸಲಾಗಿದೆ. ಈ ಸಂಬಂಧ ನನ್ನ ವಿರುದ್ಧ ವಿಚಾರಣೆಗೂ ಆದೇಶಿಸಬಹುದು. ಸ್ವ ಹಿತಾಸಕ್ತಿಯಿಂದ ಅರ್ಜಿ ದಾಖಲಿಸಿರುವುದು ಸಾಬೀತಾದರೆ 50 ಸಾವಿರ ರೂ. ದಂಡ ಬೇಕಾದರೂ ಪಾವತಿಸುತ್ತೇನೆ ಎಂದಿದ್ದರು.

ಈ ಹೇಳಿಕೆ ಮೇರೆಗೆ ಹೈಕೋರ್ಟ್ ದಂಡದ ಮೊತ್ತವನ್ನು 50 ಸಾವಿರ ರೂ.ಗೆ ಹೆಚ್ಚಿಸಿ, ಅದನ್ನು 30 ದಿನಗಳಲ್ಲಿ ಕರ್ನಾಟಕ ವಕೀಲರ ಗುಮಾಸ್ತರ ಕಲ್ಯಾಣ ನಿಧಿಗೆ ಪಾವತಿಸಬೇಕು ಎಂದು ನಿರ್ದೇಶಿಸಿತ್ತು. ಆ ಬಳಿಕ ದಂಡ ವಿಧಿಸಿದ್ದ ಕ್ರಮ ಪ್ರಶ್ನಿಸಿ ವಕೀಲ ರಮೇಶ್ ನಾಯಕ್ ಸೆ.27ರಂದು ಪುನರ್ ಪರಿಶೀಲನಾ ಅರ್ಜಿ ಸಲ್ಲಿಸಿದ್ದರು. ಅದನ್ನು ಪರಿಗಣಿಸಿರುವ ಪೀಠ ಅರ್ಜಿದಾರರಿಗೆ ವಿಧಿಸಿದ್ದ ದಂಡವನ್ನು ಕೈಬಿಟ್ಟಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.