ETV Bharat / city

ಡಾ.ಬಾಬು ಜಗಜೀವನ್ ರಾಮ್ ಪ್ರತಿಮೆ ಅನಾವರಣಕ್ಕೆ ಹೈಕೋರ್ಟ್ ಹಸಿರು ನಿಶಾನೆ - ಜಗಜೀವನ್​ ರಾಮ್ ಪ್ರತಿಮೆ ಅನಾವರಣಕ್ಕೆ ಹೈಕೋರ್ಟ್​ ಅಸ್ತು

ಮೈಸೂರಿನ ಟಿ.ನರಸೀಪುರ ಪುರಸಭೆಯ ಹೊಸ ತಿರುಮಕೂಡಲು ಗ್ರಾಮದ ವಾರ್ಡ್ ಸಂಖ್ಯೆ 2ರಲ್ಲಿ ಪ್ರತಿಷ್ಠಾಪಿಸಲಾಗಿರುವ ಡಾ.ಬಾಬು ಜಗಜೀವನ್ ರಾಮ್ ಪ್ರತಿಮೆ ಅನಾವರಣಕ್ಕೆ ಉಂಟಾಗಿದ್ದ ತೊಡಕನ್ನು ಹೈಕೋರ್ಟ್ ನಿವಾರಣೆ ಮಾಡಿದೆ.

high-court-green
ಹೈಕೋರ್ಟ್ ಹಸಿರು ನಿಶಾನೆ
author img

By

Published : May 2, 2022, 10:15 PM IST

ಬೆಂಗಳೂರು: ಮೈಸೂರಿನ ಟಿ.ನರಸೀಪುರ ಪುರಸಭೆಯ ಹೊಸ ತಿರುಮಕೂಡಲು ಗ್ರಾಮದ ವಾರ್ಡ್ ಸಂಖ್ಯೆ 2ರಲ್ಲಿ ಪ್ರತಿಷ್ಠಾಪಿಸಲಾಗಿರುವ ಡಾ.ಬಾಬು ಜಗಜೀವನ್ ರಾಮ್ ಪ್ರತಿಮೆ ಅನಾವರಣಕ್ಕೆ ಹೈಕೋರ್ಟ್ ಹಸಿರು ನಿಶಾನೆ ತೋರಿದೆ. ಪ್ರತಿಮೆ ಸ್ಥಾಪನೆಗೆ ಸಂಬಂಧಪಟ್ಟ ಪ್ರಾಧಿಕಾರದಿಂದ ಅಗತ್ಯ ಪರವಾನಗಿ ಪಡೆಯದ ಹಿನ್ನೆಲೆಯಲ್ಲಿ ಪ್ರತಿಮೆ ಅನಾವರಣಗೊಳಿಸದಂತೆ ತಡೆಯಾಜ್ಞೆ ಕೋರಿ ಎಸ್. ಕರಿಯಪ್ಪ ಸೇರಿದಂತೆ ಟಿ.ನರಸೀಪುರ ತಾಲೂಕಿನ 13 ಮಂದಿ ನಿವಾಸಿಗಳು ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.

ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆರ್.ದೇವದಾಸ್ ಅವರಿದ್ದ ಪೀಠ, ಹೊರ ತಿರುಮಕೂಡಲು ಗ್ರಾಮದ ವಾರ್ಡ್ ಸಂಖ್ಯೆ 2ರಲ್ಲಿ ಡಾ. ಬಾಬು ಜಗಜೀವನ್ ರಾಮ್ ಅವರ ಪ್ರತಿಮೆ ಸ್ಥಾಪಿಸಲಾಗಿದೆ. ಪ್ರತಿಮೆ ಅನಾವರಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈಗಾಗಲೇ ಕಾರ್ಯಕ್ರಮದ ಆಹ್ವಾನ ಪತ್ರಿಕೆ ಹಂಚಲಾಗಿದ್ದು ಕಾರ್ಯಕ್ರಮಕ್ಕೆ ವಿವಿಧ ರಾಜಕೀಯ ಪಕ್ಷಗಳ ನಾಯಕರನ್ನು ಆಹ್ವಾನಿಸಲಾಗಿದೆ.

ಈ ಹಂತದಲ್ಲಿ ಪ್ರತಿಮೆ ಸ್ಥಾಪಿಸಿರುವ ಬೈರಾಪುರ ಗ್ರಾಮದ ಹಸಿರು ಕ್ರಾಂತಿ ಹರಿಕಾರ ಡಾ.ಬಾಬು ಜಗಜೀವನ್ ರಾಮ್ ಯುವಕರ ಸಂಘದ ವಾದ ಆಲಿಸದೆ ಪ್ರತಿಮೆ ಅನಾವರಣಗೊಳಿಸದಂತೆ ನ್ಯಾಯಾಲಯ ಆದೇಶ ಹೊರಡಿಸಿದರೆ, ಅದು ಇತರ ಪರಿಣಾಮಗಳಿಗೆ ದಾರಿ ಮಾಡಿಕೊಡುತ್ತದೆ ಎಂದು ಅಭಿಪ್ರಾಯಪಟ್ಟಿದೆ. ಅಲ್ಲದೇ, ಅಗತ್ಯ ಪರವಾನಗಿ ಪಡೆಯದೇ ಪ್ರತಿಮೆ ಸ್ಥಾಪನೆ ಮಾಡಲು ಸಾಧ್ಯವಿಲ್ಲ ಎಂಬುದಾಗಿ ನ್ಯಾಯಾಲಯಕ್ಕೆ ಮನವರಿಕೆಯಾದರೆ ಆ ಸಂದರ್ಭದಲ್ಲಿ ಪ್ರತಿಮೆ ತೆರವುಗೊಳಿಸುವಂತೆ ಸಂಘಕ್ಕೆ ನಿರ್ದೇಶಿಸಬಹುದು. ಹಾಗಾಗಿ, ಪ್ರತಿಮೆ ಅನಾವರಣಕ್ಕೆ ಈ ಹಂತದಲ್ಲಿ ತಡೆಯಾಜ್ಞೆ ನೀಡಲಾಗದು ಎಂದು ತಿಳಿಸಿ ಮಧ್ಯಂತರ ಆದೇಶ ಹೊರಡಿಸಿದೆ.

ಅಲ್ಲದೆ, ಪ್ರತಿಮೆಯನ್ನು ಅನಾವರಣಗೊಳಿಸಿದರೂ ಅದು ಅರ್ಜಿ ಕುರಿತು ಹೈಕೋರ್ಟ್ ಹೊರಡಿಸುವ ಅಂತಿಮ ಆದೇಶಕ್ಕೆ ಒಳಪಟ್ಟಿರುತ್ತದೆ ಎಂದು ಆದೇಶದಲ್ಲಿ ಪೀಠ ಸ್ಪಷ್ಟಪಡಿಸಿದೆ.

ಓದಿ: ಹೆಂಡ್ತಿ ಕೊಂದ ಆರೋಪದ ಮೇಲೆ ಗಂಡನಿಗೆ ಜೈಲುಶಿಕ್ಷೆ.. ಪ್ರೇಮಿ​​ ಜೊತೆ ಪ್ರತ್ಯಕ್ಷವಾದ ಮಹಿಳೆ!

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.