ETV Bharat / city

ಆರೋಗ್ಯ ಸೇತು ಆ್ಯಪ್ ಕಡ್ಡಾಯ ವಿಚಾರ; ಆಕ್ಷೇಪಣೆ ಸಲ್ಲಿಸಲು ಕೇಂದ್ರಕ್ಕೆ ಗಡುವು ವಿಧಿಸಿದ ಹೈಕೋರ್ಟ್

author img

By

Published : Oct 5, 2020, 6:12 PM IST

ಆರೋಗ್ಯ ಸೇತು ಆ್ಯಪ್ ಬಳಕೆ ಕಡ್ಡಾಯ ವಿಚಾರವನ್ನು ಪ್ರಶ್ನಿಸಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಅಕ್ಟೋಬರ್ 19 ರೊಳಗೆ ಆಕ್ಷೇಪಣೆ ಸಲ್ಲಿಸಬೇಕು ಎಂದು ಹೈಕೋರ್ಟ್ ಕೇಂದ್ರ ಸರ್ಕಾರಕ್ಕೆ ಗಡುವು ನೀಡಿದೆ.

High Court has set a deadline for the Center to file objections to the use of the Arogya Setu App
ಆರೋಗ್ಯ ಸೇತು ಆ್ಯಪ್ ಬಳಕೆ ವಿಚಾರ : ಆಕ್ಷೇಪಣೆ ಸಲ್ಲಿಸಲು ಕೇಂದ್ರಕ್ಕೆ ಗಡುವು ವಿಧಿಸಿದ ಹೈಕೋರ್ಟ್

ಬೆಂಗಳೂರು: ಆರೋಗ್ಯ ಸೇತು ಆ್ಯಪ್ ಬಳಕೆ ಕಡ್ಡಾಯ ವಿಚಾರವನ್ನು ಪ್ರಶ್ನಿಸಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಮುಂದಿನ 10 ದಿನಗಳಲ್ಲಿ ಆಕ್ಷೇಪಣೆ ಸಲ್ಲಿಸಬೇಕು ಎಂದು ಹೈಕೋರ್ಟ್ ಕೇಂದ್ರ ಸರ್ಕಾರಕ್ಕೆ ಗಡುವು ನೀಡಿದೆ.

ಆರೋಗ್ಯ ಸೇತು ಆ್ಯಪ್ ಬಳಕೆ ಕಡ್ಡಾಯಗೊಳಿಸಲಾಗಿದೆ ಎಂದು ಆಕ್ಷೇಪಿಸಿ ನಗರದ ಅನಿವರ್ ಎಂಬುವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಈ ವೇಳೆ ಕೇಂದ್ರದ ಪರ ವಕೀಲ ಕುಮಾರ್ ಅವರು ಆಕ್ಷೇಪಣೆ ಸಲ್ಲಿಸಲು ಮತ್ತಷ್ಟು ಕಾಲಾವಕಾಶ ನೀಡಬೇಕು ಎಂದು ಮನವಿ ಮಾಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಪೀಠ, ಈಗಾಗಲೇ ವಿಳಂಬವಾಗಿದೆ. ಹೀಗಾಗಿ ಮುಂದಿನ 10 ದಿನಗಳಲ್ಲಿ ಪ್ರತಿಕ್ರಿಯೆ ನೀಡಬೇಕು. ಇದೇ ಕೊನೆಯ ಅವಕಾಶ, ಮತ್ತೆ ಹೆಚ್ಚುವರಿ ಸಮಯ ನೀಡುವುದಿಲ್ಲ ಎಂದು ನಿರ್ದೇಶಿಸಿ, ವಿಚಾರಣೆಯನ್ನು ಅಕ್ಟೋಬರ್ 19ಕ್ಕೆ ಮುಂದೂಡಿತು.

ಅರ್ಜಿದಾರರ ಕೋರಿಕೆ: ಕೊರೊನಾ ಸೋಂಕು ನಿಯಂತ್ರಿಸಲು ಸಂಪರ್ಕಗಳನ್ನು ಪತ್ತೆ ಹಚ್ಚಲು ಆರೋಗ್ಯ ಸೇತು ಮೊಬೈಲ್ ಆ್ಯಪ್ ರೂಪಿಸಲಾಗಿದ್ದು, ಇದನ್ನು ಎಲ್ಲರೂ ಕಡ್ಡಾಯವಾಗಿ ಬಳಸುವಂತೆ ಕೇಂದ್ರ ಸೂಚಿಸಿದೆ. ಆದರೆ ಭಾರತದಲ್ಲಿ ಶೇ 35ರಷ್ಟು ವಯಸ್ಕ ಜನ ಮಾತ್ರ ಸ್ಮಾರ್ಟ್ ಫೋನ್ ಬಳಕೆ ಮಾಡುತ್ತಾರೆ. ಹೀಗಾಗಿ, ಆ್ಯಪ್ ಅನ್ನು ಎಲ್ಲರೂ ಬಳಸಲು ಸಾಧ್ಯವಿಲ್ಲ. ಮುಖ್ಯವಾಗಿ ಕೇಂದ್ರ ಸರ್ಕಾರದ ಈ ನಿರ್ಧಾರ ವ್ಯಕ್ತಿಯ ಖಾಸಗಿತನದ ಹಕ್ಕಿಗೆ ವಿರುದ್ಧವಾಗಿದೆ. ಹೀಗಾಗಿ ಕೇಂದ್ರದ ಆದೇಶ ರದ್ದುಗೊಳಿಸಬೇಕು ಮತ್ತು ಆರೋಗ್ಯ ಸೇತು ಆ್ಯಪ್ ಬಳಕೆಯನ್ನು ಐಚ್ಛಿಕಗೊಳಿಸಬೇಕೇ ವಿನಃ ಕಡ್ಡಾಯಗೊಳಿಸಬಾರದು ಎಂದು ಅರ್ಜಿದಾರರು ಮನವಿ ಮಾಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.