ETV Bharat / city

ಕಾಯ್ದೆ ಹಿಂದೆ ವಿದೇಶಿ ಕೈವಾಡ ಆರೋಪ; ಅಧಿಕಾರಿಗೆ ದಂಡ ವಿಧಿಸುವ ಎಚ್ಚರಿಕೆ ನೀಡಿದ ಹೈಕೋರ್ಟ್ - ಹೈಕೋರ್ಟ್ ಎಚ್ಚರಿಕೆ

ಪರಿಸರ ಸಂರಕ್ಷಣೆ ಕಾಯ್ದೆಯಲ್ಲಿ ವಿದೇಶಿ ಕೈವಾಡ ಇದೆ ಎಂದು ಆರೋಪಿಸಿ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಯೊಬ್ಬರು ಸಲ್ಲಿಸಿರುವ ಆಕ್ಷೇಪಣಾ ಅರ್ಜಿಗೆ ದಂಡ ವಿಧಿಸುವುದಾಗಿ ಹೈಕೋರ್ಟ್ ಎಚ್ಚರಿಕೆ ನೀಡಿದೆ.

HighCourt
ಹೈಕೋರ್ಟ್
author img

By

Published : Jan 19, 2021, 7:19 PM IST

Updated : Jan 19, 2021, 7:43 PM IST

ಬೆಂಗಳೂರು: ಪರಿಸರ ಸಂರಕ್ಷಣೆ ಕಾಯ್ದೆ ರೂಪಿಸುವಾಗ ಸಂಸತ್ತು ವಿದೇಶಿ ಶಕ್ತಿಗಳ ಪ್ರಭಾವಕ್ಕೆ ಒಳಗಾಗಿದೆ ಎಂದು ಲಿಖಿತ ಆಕ್ಷೇಪಣೆ ಸಲ್ಲಿಸಿರುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗೆ ದಂಡ ವಿಧಿಸುವುದಾಗಿ ಹೈಕೋರ್ಟ್ ಎಚ್ಚರಿಕೆ ನೀಡಿದೆ.

100ಕಿ.ಮೀ ವರೆಗಿನ ರಾಷ್ಟ್ರೀಯ ಹೆದ್ದಾರಿಗಳ ವಿಸ್ತರಣೆಗೆ ಪರಿಸರ ಪರಿಣಾಮ ಅಧ್ಯಯನ (ಇಐಎ) ಬದಿಗಿಡಲು ಮುಂದಾಗಿರುವ ಸರ್ಕಾರದ ನಿರ್ಧಾರ ಪ್ರಶ್ನಿಸಿ ಯುನೈಟೆಡ್ ಕನ್ಸರ್ವೇಷನ್ ಟ್ರಸ್ಟ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್ ಓಕಾ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ಈ ವೇಳೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಪರ ಹಾಜರಾದ ಹಿರಿಯ ವಕೀಲ ಉದಯ್ ಹೊಳ್ಳ ಅವರು ವಾದಿಸಿ, ಪಿಐಎಲ್​ಗೆ ಆಕ್ಷೇಪಣೆ ಸಲ್ಲಿಸುವ ವೇಳೆ ಅಂತಹ ಹೇಳಿಕೆ ದಾಖಲಿಸಿರುವುದು ಸರಿ ಅನ್ನಿಸುವುದಿಲ್ಲ. ತ್ವರಿತವಾಗಿ ಆಕ್ಷೇಪಣೆ ಸಲ್ಲಿಸುವ ಭರದಲ್ಲಿ ಹಾಗೆ ಹೇಳಲಾಗಿದೆ. ಇದರಲ್ಲಿ ಅಧಿಕಾರಿಗಳ ಪಾತ್ರವಿಲ್ಲ. ಹೀಗಾಗಿಯೇ, ಲಿಖಿತ ಆಕ್ಷೇಪಣೆ ಸಲ್ಲಿಸಿದ ವಕೀಲರನ್ನು ಪ್ರಕರಣದಿಂದ ಕೈಬಿಡಲಾಗಿದೆ ಎಂದು ವಿವರಿಸಿದರು.

ಇದನ್ನೂ ಓದಿ: ಆರೋಪಿ ಪರ ವಕಾಲತ್ತು ವಹಿಸದಂತೆ ನಿರ್ಬಂಧಿಸುವ ಅಧಿಕಾರ ಸಿಕ್ಕಿದ್ದೇಗೆ?: ವಕೀಲರ ಸಂಘಕ್ಕೆ ಹೈಕೋರ್ಟ್ ಪ್ರಶ್ನೆ

ಇದಕ್ಕೆ ಆಕ್ಷೇಪಿಸಿದ ಪೀಠ, ವಕೀಲರು ಹೇಳಿಕೆ ಸಿದ್ದಪಡಿಸಿದ್ದರೆಂದು ಹೇಳುತ್ತೀರಿ. ವಕೀಲರು ಸಿದ್ದಪಡಿಸಿದ ಹೇಳಿಕೆಗೆ ಸಹಿ ಮಾಡಿದ ಮೇಲೆ ಅಧಿಕಾರಿ ಜವಾಬ್ದಾರರಾಗುತ್ತಾರೆ. ಇಂತಹ ಆರೋಪ ಮಾಡಿದ್ದಕ್ಕೆ ಸೂಕ್ತ ಸ್ಪಷ್ಟನೆ ನೀಡದಿದ್ದರೆ ಅಧಿಕಾರಿಗೆ ದಂಡ ವಿಧಿಸಲಾಗುವುದು ಎಂದು ಎಚ್ಚರಿಕೆ ನೀಡಿತು.

ಉದಯ್ ಹೊಳ್ಳ ಅವರು ಮನವಿ ಮಾಡಿ, ಆಕ್ಷೇಪಣೆಗೆ ಸಂಬಂಧಿಸಿದಂತೆ ವಿವರಣೆ ನೀಡಿ, ಪ್ರಮಾಣಪತ್ರ ಸಲ್ಲಿಸಲು ಒಂದು ವಾರ ಕಾಲಾವಕಾಶ ನೀಡುವಂತೆ ಕೋರಿದರು. ಇದಕ್ಕೆ ಸಮ್ಮತಿಸಿದ ಪೀಠ, ವಿಚಾರಣೆಯನ್ನು ಫೆಬ್ರವರಿ 2ಕ್ಕೆ ಮುಂದೂಡಿತು.

Last Updated : Jan 19, 2021, 7:43 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.