ETV Bharat / city

ಕೋವಿಡ್ ರೋಗಿಗಳಿಗೆ ಬಳಸಿದ ಸಾಮಗ್ರಿಗಳ ವಿಲೇವಾರಿ: ಬಿಬಿಎಂಪಿ ವರದಿ ಕೇಳಿದ ಹೈಕೋರ್ಟ್ - ಕೋವಿಡ್ ರೋಗಿಗಳಿಗೆ ಬಳಸಿದ ಸಾಮಗ್ರಿಗಳ ವಿಲೇವಾರಿ

ಕೊರೊನಾ ರೋಗಿಗಳಿಗೆ ಬಳಸಿದ ಮಾಸ್ಕ್ ಮತ್ತು ಗ್ಲೌಸ್​​​​ಗಳನ್ನು ಪ್ರತ್ಯೇಕವಾಗಿ ವಿಂಗಡಿಸಿ, ವೈಜ್ಞಾನಿಕ ರೀತಿಯಲ್ಲಿ ವಿಲೇವಾರಿ ಮಾಡಬೇಕು. ಈ ಸಂಬಂಧ ಬಿಬಿಎಂಪಿ ಯಾವೆಲ್ಲಾ ಕ್ರಮಗಳನ್ನು ಕೈಗೊಂಡಿದೆ ಎಂಬುದರ ವಿವರಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ಪಾಲಿಕೆ ಪರ ವಕೀಲರಿಗೆ ಸೂಚಿಸಿತು.

High Court
ಹೈಕೋರ್ಟ್
author img

By

Published : Nov 5, 2020, 3:53 PM IST

ಬೆಂಗಳೂರು: ಕೊರೊನಾ ಸೋಂಕಿತ ರೋಗಿಗಳಿಗೆ ಬಳಸಿದ ಸಾಮಗ್ರಿಗಳ ವಿಲೇವಾರಿಗೆ ಯಾವೆಲ್ಲಾ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂಬುದರ ಬಗ್ಗೆ ಮಾಹಿತಿ ನೀಡುವಂತೆ ಹೈಕೋರ್ಟ್ ಬಿಬಿಎಂಪಿಗೆ ಸೂಚಿಸಿದೆ.

ಕೊರೊನಾ ನಿರ್ವಹಣೆಗೆ ಸಂಬಂಧಿಸಿದಂತೆ ಸಲ್ಲಿಸಿರುವ ಪಿಐಎಲ್​​​ಗಳನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಈ ವೇಳೆ ಅರ್ಜಿದಾರರ ಪರ ವಕೀಲರು ಪಾಲಿಕೆ ಕೋವಿಡ್-19ನಿಂದಾಗಿ ಉತ್ಪತ್ತಿಯಾಗುತ್ತಿರುವ ತ್ಯಾಜ್ಯದ ವಿಲೇವಾರಿಗೆ ಸಮರ್ಪಕ ಕ್ರಮಗಳನ್ನು ಕೈಗೊಂಡಿಲ್ಲ. ಮಾಸ್ಕ್, ಗ್ಲೌಸ್ ಹಾಗೂ ಪಿಪಿಇ ಕಿಟ್​​​​ಗಳನ್ನು ಎಲ್ಲೆಂದರಲ್ಲಿ ಬಿಸಾಡಲಾಗುತ್ತಿದೆ ಎಂದು ಆರೋಪಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಪೀಠ, ಕೋವಿಡ್-19 ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಬಳಸಿದ ಮಾಸ್ಕ್, ಗ್ಲೌಸ್ ಹಾಗೂ ಇನ್ನಿತರ ವಸ್ತುಗಳನ್ನು ಬಯೋ ಮೆಡಿಕಲ್ ತ್ಯಾಜ್ಯ ನಿರ್ವಹಣೆ ನಿಯಮ-2016ರ ಅನ್ವಯ ವೈಜ್ಞಾನಿಕ ರೀತಿಯಲ್ಲಿ ವಿಲೇವಾರಿ ಮಾಡಬೇಕು. ರೋಗಿಗಳಿಗೆ ಬಳಸಿದ ಮಾಸ್ಕ್ ಮತ್ತು ಗ್ಲೌಸ್​​​​ಗಳನ್ನು ಪ್ರತ್ಯೇಕವಾಗಿ ವಿಂಗಡಿಸಿ, ವೈಜ್ಞಾನಿಕ ರೀತಿಯಲ್ಲಿ ವಿಲೇವಾರಿ ಮಾಡಬೇಕು. ಈ ಸಂಬಂಧ ಬಿಬಿಎಂಪಿ ಯಾವೆಲ್ಲಾ ಕ್ರಮಗಳನ್ನು ಕೈಗೊಂಡಿದೆ ಎಂಬುದರ ವಿವರಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ಪಾಲಿಕೆ ಪರ ವಕೀಲರಿಗೆ ಸೂಚಿಸಿತು.

ಅಲ್ಲದೆ, ಕೋವಿಡ್-19 ಹಿನ್ನೆಲೆಯಲ್ಲಿ ಕ್ವಾರಂಟೈನ್​​​ನಲ್ಲಿ ಇದ್ದವರು, ಚಿಕಿತ್ಸೆ ಪಡೆದವರು ಮತ್ತು ಸೋಂಕಿತರು ಬಳಸಿರುವ ವಸ್ತುಗಳ ವಿಲೇವಾರಿ ಕುರಿತಂತೆ ಕೇಂದ್ರ ಪರಿಸರ ಮಾಲಿನ್ಯ ಮಂಡಳಿ ಕೂಡ ನಿಯಮಗಳನ್ನು ರೂಪಿಸಿದೆ. ಆ ನಿಯಮಗಳನ್ನು ಪಾಲಿಕೆ ಅನುಸರಿಸುತ್ತಿದೆಯೇ ಇಲ್ಲವೇ ಎಂಬುದನ್ನು ಸ್ಪಷ್ಟಪಡಿಸುವಂತೆ ತಿಳಿಸಿ, ವಿಚಾರಣೆ ಮುಂದೂಡಿತು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.