ಬೆಂಗಳೂರು: ರಾಜ್ಯದಲ್ಲಿ ಖಾಲಿ ಇರುವ 21 ಜಿಲ್ಲಾ ನ್ಯಾಯಾಧೀಶರ (District Judge) ಹುದ್ದೆಗಳಿಗೆ ನೇಮಕ ಸಂಬಂಧ ಹೈಕೋರ್ಟ್ (High Court) ಅಧಿಸೂಚನೆ ಹೊರಡಿಸಿದೆ. 18 ಬ್ಯಾಕ್ ಲಾಗ್ ಹುದ್ದೆಗಳು ಹಾಗೂ 3 ಹೊಸ ಹುದ್ದೆಗಳು ಇದರಲ್ಲಿ ಸೇರಿವೆ.
ಕಾನೂನು ಪದವಿ ಪಡೆದು 7 ವರ್ಷ ವಕೀಲರಾಗಿ ಸೇವೆ ಸಲ್ಲಿಸಿರುವ ಅರ್ಹ ಅಭ್ಯರ್ಥಿಗಳು ಡಿಸೆಂಬರ್ 12ಕ್ಕೆ ಮೊದಲು ಅರ್ಜಿಗಳನ್ನು ಆನ್ಲೈನ್ ಮೂಲಕ ಸಲ್ಲಿಸುವಂತೆ ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ವಯೋಮಿತಿ ಸಾಮಾನ್ಯ ವರ್ಗಕ್ಕೆ 45 ವರ್ಷವಿದ್ದರೆ, ಎಸ್ಸಿ-ಎಸ್ಟಿ ಸಮುದಾಯದ ಅಭ್ಯರ್ಥಿಗಳಿಗೆ 48 ವರ್ಷ ನಿಗದಿಪಡಿಸಲಾಗಿದೆ.
ಆಯ್ಕೆ ಪ್ರಕ್ರಿಯೆ ಮೂರು ಹಂತಗಳಲ್ಲಿ ನಡೆಯಲಿದೆ. ಪೂರ್ವಭಾವಿ ಪರೀಕ್ಷೆ, ಮುಖ್ಯ ಪರೀಕ್ಷೆ ನಂತರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ. ವೇತನ 51 ಸಾವಿರದಿಂದ 63,070 ವರೆಗೆ ಇರಲಿದೆ. ಹೆಚ್ಚಿನ ಮಾಹಿತಿಗೆ ಹೈಕೋರ್ಟ್ (High Court) ವೆಬ್ ಸೈಟ್ಗೆ ಭೇಟಿ ನೀಡಬಹುದಾಗಿದೆ.
ಇದನ್ನೂ ಓದಿ: ನವದೆಹಲಿ - ಝಾನ್ಸಿ ತಾಜ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ: ಪ್ರಯಾಣಿಕರು ಬಚಾವ್