ಬೆಂಗಳೂರು: ಹೈಕೋರ್ಟ್ ಹೆಚ್ಚುವರಿ ನ್ಯಾಯಾಧೀಶರಾಗಿ ನೇಮಕಗೊಂಡಿರುವ ಐವರು ನ್ಯಾಯಮೂರ್ತಿಗಳು ಇಂದು ಪ್ರಮಾಣವಚನ ಸ್ವೀಕರಿಸಿದರು. ರಾಜಭವನದ ಗಾಜಿನ ಮನೆ ಆವರಣದಲ್ಲಿ ಸರಳ ಸಮಾರಂಭ ನಡೆಯಿತು.
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಹೆಚ್ಚುವರಿ ನ್ಯಾಯಾಧೀಶರಾಗಿ ನೇಮಕಗೊಂಡಿರುವ ನ್ಯಾ. ಅನಿಲ್ ಭೀಮಸೇನ ಕಟ್ಟಿ, ನ್ಯಾ.ಗುರುಸಿದ್ಧಯ್ಯ ಬಸವರಾಜ, ನ್ಯಾ.ಚಂದ್ರಶೇಖರ್ ಮೃತ್ಯುಂಜಯ ಜೋಶಿ, ನ್ಯಾ. ಉಮೇಶ್ ಮಂಜುನಾಥ್ ಭಟ್ ಅಡಿಗ ಹಾಗೂ ನ್ಯಾ.ತಲಕಾಡು ಗಿರಿಗೌಡ ಶಿವಶಂಕರೇ ಗೌಡ ಅವರಿಗೆ ಪ್ರಮಾಣ ವಚನ ಬೋಧಿಸಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯ ಉಚ್ಛ ನ್ಯಾಯಾಲಯದ ಪ್ರಭಾರಿ ಮುಖ್ಯ ನ್ಯಾಯಾಧೀಶ ನ್ಯಾ. ಅಲೋಕ್ ಅರಾಧೆ ಉಪಸ್ಥಿತರಿದ್ದರು.
ಇದನ್ನೂ ಓದಿ :ಸಿದ್ದರಾಮಯ್ಯ ವೋಟಿಗಾಗಿ ಸಾವರ್ಕರ್ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡುತ್ತಿದ್ದಾರೆ: ಆರಗ ಜ್ಞಾನೇಂದ್ರ