ETV Bharat / city

ಅಪರೂಪದ ಕಾಯಿಲೆಯಿಂದ ಬಳಲುತ್ತಿರುವ ಮಗುವಿನ ಚಿಕಿತ್ಸೆಗೆ ನೆರವು ಕೋರಿ ಅರ್ಜಿ : ಕೇಂದ್ರಕ್ಕೆ ಹೈಕೋರ್ಟ್ ನೋಟಿಸ್

ಚಿಕಿತ್ಸೆಗೆ ಅಂದಾಜು ₹16 ಕೋಟಿ ವೆಚ್ಚವಾಗಲಿದೆ. ಕ್ರೌಡ್ ಫಂಡಿಂಗ್ ಮೂಲಕ 8 ಕೋಟಿ ರೂ. ಸಂಗ್ರಹಿಸಲಾಗಿದೆ. ಮಗುವಿನ ಆರೋಗ್ಯ ದಿನದಿಂದ ದಿನಕ್ಕೆ ಕ್ಷೀಣಿಸುತ್ತಿದೆ. 24 ತಿಂಗಳು ತುಂಬುವುದರೊಳಗೆ ಚಿಕಿತ್ಸೆ ಕೊಡಿಸಬೇಕು. ಇಲ್ಲದಿದ್ದರೆ, ಜೀವಕ್ಕೇ ಅಪಾಯವಿದೆ. ಆದ್ದರಿಂದ ಮಗುವಿನ ಚಿಕಿತ್ಸೆಗೆ ಅಗತ್ಯವಿರುವ ಬಾಕಿ ಹಣವನ್ನು ಶೀಘ್ರವಾಗಿ ಒದಗಿಸಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿದರು..

High Court
ಹೈಕೋರ್ಟ್
author img

By

Published : Sep 27, 2021, 10:44 PM IST

ಬೆಂಗಳೂರು : ಬೆನ್ನುಮೂಳೆ ಸ್ನಾಯುಗಳ ಕ್ಷೀಣತೆ (ಸ್ಪೈನಲ್ ಮಸ್ಕ್ಯುಲರ್ ಆಸ್ಟ್ರೊಫಿ ಟೈಪ್-1) ಕಾಯಿಲೆಯಿಂದ ಬಳಲುತ್ತಿರುವ ಬೆಂಗಳೂರಿನ 17 ತಿಂಗಳ ಮಗುವಿನ ಚಿಕಿತ್ಸೆಗೆ ಆರ್ಥಿಕ ನೆರವು ಕೋರಿ ಸಲ್ಲಿಸಿರುವ ಅರ್ಜಿ ಸಂಬಂಧ ನಿಲುವು ತಿಳಿಸುವಂತೆ ಹೈಕೋರ್ಟ್ ಕೇಂದ್ರ ಸರ್ಕಾರಕ್ಕೆ ನಿರ್ದೇಶಿಸಿದೆ.

ಅಪರೂಪದ ಕಾಯಿಲೆಯಿಂದ ಬಳಲುತ್ತಿರುವ ಮಗುವಿನ ತಂದೆ ನವೀನ್ ಎಂಬುವರು ಸಲ್ಲಿಸಿರುವ ಅರ್ಜಿಯನ್ನು ನ್ಯಾ. ಕೃಷ್ಣ ಎಸ್ ದೀಕ್ಷಿತ್ ಅವರಿದ್ದ ಪೀಠ ವಿಚಾರಣೆ ನಡೆಸಿತು. ಈ ವೇಳೆ ಅರ್ಜಿದಾರರ ಪರ ವಕೀಲರು ವಾದಿಸಿ ಮಗು ಅನುವಂಶೀಯ ಕಾಯಿಲೆಯಿಂದ ಬಳಲುತ್ತಿದ್ದು, ಅದರ ಚಿಕಿತ್ಸೆಗೆ ಭಾರತದಲ್ಲಿ ಯಾವುದೇ ಔಷಧ ಲಭ್ಯವಿಲ್ಲ. ಚಿಕಿತ್ಸೆಗೆ ಅಮೆರಿಕದಿಂದಲೇ ಚುಚ್ಚುಮದ್ದು ಆಮದು ಮಾಡಿಕೊಳ್ಳಬೇಕು.

ಚಿಕಿತ್ಸೆಗೆ ಅಂದಾಜು ₹16 ಕೋಟಿ ವೆಚ್ಚವಾಗಲಿದೆ. ಕ್ರೌಡ್ ಫಂಡಿಂಗ್ ಮೂಲಕ 8 ಕೋಟಿ ರೂ. ಸಂಗ್ರಹಿಸಲಾಗಿದೆ. ಮಗುವಿನ ಆರೋಗ್ಯ ದಿನದಿಂದ ದಿನಕ್ಕೆ ಕ್ಷೀಣಿಸುತ್ತಿದೆ. 24 ತಿಂಗಳು ತುಂಬುವುದರೊಳಗೆ ಚಿಕಿತ್ಸೆ ಕೊಡಿಸಬೇಕು. ಇಲ್ಲದಿದ್ದರೆ, ಜೀವಕ್ಕೇ ಅಪಾಯವಿದೆ. ಆದ್ದರಿಂದ ಮಗುವಿನ ಚಿಕಿತ್ಸೆಗೆ ಅಗತ್ಯವಿರುವ ಬಾಕಿ ಹಣವನ್ನು ಶೀಘ್ರವಾಗಿ ಒದಗಿಸಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿದರು.

ಕೇಂದ್ರ ಸರ್ಕಾರದ ಪರ ವಕೀಲರು ವಾದಿಸಿ, ಅಪರೂಪದ ಕಾಯಿಲೆಗಳ ಚಿಕಿತ್ಸೆಗೆ ಪ್ರತ್ಯೇಕ ನೀತಿ ಇದೆ. ಈ ಬಗ್ಗೆ ವೈದ್ಯಕೀಯ ತಜ್ಞರು ತೀರ್ಮಾನಿಸಬೇಕು ಎಂದರು. ವಾದ-ಪ್ರತಿವಾದ ಆಲಿಸಿದ ಪೀಠ, ಇದು ಮಗುವಿನ ಜೀವದ ಪ್ರಶ್ನೆಯಾಗಿದೆ.

ಹೀಗಾಗಿ, ಚಿಕಿತ್ಸೆಗೆ ಆರ್ಥಿಕ ನೆರವು ಒದಗಿಸುವ ಬಗ್ಗೆ ಶೀಘ್ರ ನಿಲುವು ತಿಳಿಸಬೇಕು ಎಂದು ಕೇಂದ್ರಕ್ಕೆ ನಿರ್ದೇಶಿಸಿ ವಿಚಾರಣೆಯನ್ನು ಅ.1ಕ್ಕೆ ಮುಂದೂಡಿತು. ಇದೇ ವೇಳೆ ಅರ್ಜಿಯಲ್ಲಿನ ಎಲ್ಲ ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿತು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.