ETV Bharat / city

ಪಬ್ಲಿಕ್ ಪ್ರಾಸಿಕ್ಯೂಟರ್ ನೇಮಕ ವಿಚಾರ.. ಸ್ಕ್ರೀನಿಂಗ್ ಕಮಿಟಿ ಅಂತಿಮಗೊಳಿಸಲು ಹೈಕೋರ್ಟ್ ಸೂಚನೆ..

ಜನಪ್ರತಿನಿಧಿಗಳ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ಕ್ಷಿಪ್ರ ವಿಚಾರಣೆಗೆ ಸಂಬಂಧಿಸಿದಂತೆ ಹೈಕೋರ್ಟ್ ದಾಖಲಿಸಿಕೊಂಡಿರುವ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು..

High Court notice to government  finalize screening committee
ಪಬ್ಲಿಕ್ ಪ್ರಾಸಿಕ್ಯೂಟರ್ ನೇಮಕ ವಿಚಾರ: ಸ್ಕ್ರೀನಿಂಗ್ ಕಮಿಟಿ ಅಂತಿಮಗೊಳಿಸಲು ಹೈಕೋರ್ಟ್ ಸೂಚನೆ
author img

By

Published : Feb 2, 2021, 7:54 PM IST

ಬೆಂಗಳೂರು : ಜನಪ್ರತಿನಿಧಿಗಳ ವಿರುದ್ಧದ ಕ್ರಿಮಿನಲ್ ಪ್ರಕರಣಗಳಲ್ಲಿ ಸಮರ್ಥವಾಗಿ ವಾದ ಮಂಡಿಸಬಲ್ಲ ಸರ್ಕಾರಿ ಅಭಿಯೋಜಕರನ್ನು ಆಯ್ಕೆ ಮಾಡುವ ಸ್ಕ್ರೀನಿಂಗ್ ಕಮಿಟಿಯಲ್ಲಿ ರಾಜ್ಯ ಅಡ್ವೊಕೇಟ್ ಜನರಲ್ ಅಥವಾ ಹೆಚ್ಚುವರಿ ಅಡ್ವೊಕೇಟ್ ಜನರಲ್ ಇಬ್ಬರಲ್ಲಿ ಒಬ್ಬರನ್ನು ಸೇರಿಸಿ ಎರಡು ವಾರಗಳಲ್ಲಿ ಆದೇಶ ಹೊರಡಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ.

ಜನಪ್ರತಿನಿಧಿಗಳ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ಕ್ಷಿಪ್ರ ವಿಚಾರಣೆಗೆ ಸಂಬಂಧಿಸಿದಂತೆ ಹೈಕೋರ್ಟ್ ದಾಖಲಿಸಿಕೊಂಡಿರುವ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ಈ ವೇಳೆ ಸರ್ಕಾರದ ಪರ ವಕೀಲರು ಸಲ್ಲಿಸಿದ್ದ ವರದಿ ಪರಿಶೀಲಿಸಿದ ಪೀಠ, ನ್ಯಾಯಾಲಯ ಈ ಹಿಂದಿನ ವಿಚಾರಣೆ ವೇಳೆ ಸ್ಕ್ರೀನಿಂಗ್ ಕಮಿಟಿಯಲ್ಲಿ ರಾಜ್ಯ ಅಡ್ವೊಕೇಟ್ ಜನರಲ್ ಅವರನ್ನು ಸೇರಿಸುವಂತೆ ನಿರ್ದೇಶಿಸಿತ್ತು. ಆದರೆ, ಸರ್ಕಾರ ಎಜಿ ಸೇರಿಸುವ ಅಗತ್ಯವಿಲ್ಲ.

ಬದಲಿಗೆ ಎಎಜಿ ಸೇರಿಸಬಹುದು ಎಂದಿದೆ. ಹೀಗಾಗಿ, ರಾಜ್ಯ ಸರ್ಕಾರ ಮುಂದಿನ ಎರಡು ವಾರಗಳಲ್ಲಿ ಎಜಿ ಅಥವಾ ಎಎಜಿ ಇಬ್ಬರಲ್ಲಿ ಒಬ್ಬರನ್ನು ಸಮಿತಿಗೆ ಸೇರಿಸಿ ಆದೇಶ ಹೊರಡಿಸಬೇಕು ಎಂದು ನಿರ್ದೇಶಿಸಿ ವಿಚಾರಣೆಯನ್ನು ಫೆಬ್ರವರಿ 26ಕ್ಕೆ ಮುಂದೂಡಿತು.

ಪ್ರಕರಣದ ಹಿನ್ನೆಲೆ : ಜನಪ್ರತಿನಿಧಿಗಳ ವಿರುದ್ಧದ ಪ್ರಕರಣಗಳ ವಿಚಾರಣೆಯಲ್ಲಿ ವಿಳಂಬವಾಗುತ್ತಿದೆ ಎಂದು ಆಕ್ಷೇಪಿಸಿ ಸುಪ್ರೀಂಕೋರ್ಟ್​ನಲ್ಲಿ ಪಿಐಎಲ್ ಅರ್ಜಿ ಸಲ್ಲಿಕೆಯಾಗಿದೆ. ಈ ಅರ್ಜಿ ವಿಚಾರಣೆ ನಡೆಸುತ್ತಿರುವ ಸುಪ್ರೀಂಕೋರ್ಟ್, ಶಾಸಕರು ಹಾಗೂ ಸಂಸದರ ವಿರುದ್ಧ ದಾಖಲಾಗಿರುವ ಅರ್ಜಿಗಳ ಕ್ಷಿಪ್ರ ವಿಚಾರಣೆ ನಡೆಸಲು ಪೂರಕವಾಗಿ ಹೈಕೋರ್ಟ್​ಗಳು ಕ್ರಮ ಕೈಗೊಳ್ಳುವಂತೆ ಸೂಚಿಸಿದೆ.

ಅದರಂತೆ ಹೈಕೋರ್ಟ್ ಈ ಸಂಬಂಧ ಸ್ವಯಂ ಪ್ರೇರಿತ ಪಿಐಎಲ್ ಅರ್ಜಿ ದಾಖಲಿಸಿಕೊಂಡಿತ್ತು. ಅದರಂತೆ ಅರ್ಜಿ ವಿಚಾರಣೆ ನಡೆಸಲಾಗುತ್ತಿದ್ದು, ಹೈಕೋರ್ಟ್ ಹಿಂದಿನ ವಿಚಾರಣೆ ವೇಳೆ ಜನಪ್ರತಿನಿಧಿಗಳ ವಿರುದ್ಧದ ಕ್ರಿಮಿನಲ್ ಪ್ರಕರಣಗಲ್ಲಿ ವಾದ ಮಂಡಿಸಲು ಸಮರ್ಥ ವಕೀಲರನ್ನು ನಿಯೋಜಿಸಬೇಕು.

ಓದಿ: ಪಬ್ಲಿಕ್ ಪ್ರಾಸಿಕ್ಯೂಟರ್ ನೇಮಕ ವಿಚಾರ: ಸ್ಕ್ರೀನಿಂಗ್ ಸಮಿತಿಯಲ್ಲಿ ಎಜಿ ಸೇರಿಸಲು ಹೈಕೋರ್ಟ್ ಸೂಚನೆ

ಪ್ರಾಸಿಕ್ಯೂಷನ್ ಪರ ವಾದಿಸಲು ಹೆಚ್ಚು ದಕ್ಷ ಮತ್ತು ಪ್ರಾಮಾಣಿಕ ವಕೀಲರನ್ನು ಪಿಪಿಗಳಾಗಿ ಆಯ್ಕೆ ಮಾಡಬೇಕು. ಇವರ ಆಯ್ಕೆಗೆ ವಿಶೇಷ ನಿಯಮಗಳನ್ನು ಅನುಸರಿಸಬೇಕು ಎಂದು ನಿರ್ದೇಶಿಸಿತ್ತು. ಅದರಂತೆ ರಾಜ್ಯ ಸರ್ಕಾರ ವಿಶೇಷ ನ್ಯಾಯಾಲಯದಲ್ಲಿ ಪ್ರಾಸಿಕ್ಯೂಷನ್ ಪರ ವಾದಿಸಲು ಅರ್ಹ ಪಿಪಿಗಳನ್ನು ಆಯ್ಕೆ ಮಾಡಲು 2021ರ ಜನವರಿ 8ರಂದು ಸ್ಕ್ರೀನಿಂಗ್ ಸಮಿತಿ ರಚಿಸಿ ಆದೇಶ ಹೊರಡಿಸಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.