ETV Bharat / city

ಸಿಡಿ ಪ್ರಕರಣ ಸಿಬಿಐ ತನಿಖೆಗೆ ಒತ್ತಾಯಿಸಿ ಪಿಐಎಲ್ : ಸರ್ಕಾರ, ಎಸ್ಐಟಿಗೆ ಹೈಕೋರ್ಟ್ ನೋಟಿಸ್ - High Court notice

ಸಿಡಿ ಪ್ರಕರಣಕ್ಕೆ ಸಂಬಂದಿಸಿದಂತೆ ಸಿಬಿಐ ತನಿಖೆಗೆ ಒತ್ತಾಯಿಸಿ ವಕೀಲ ಎಸ್ ಉಮೇಶ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಕೆಲ ಕಾಲ ಅರ್ಜಿದಾರರ ಪರ ವಕೀಲರ ವಾದ ಆಲಿಸಿದ ಪೀಠವು ರಾಜ್ಯ ಸರ್ಕಾರ, ಎಸ್ಐಟಿ ಸೇರಿದಂತೆ ಎಲ್ಲ ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿ, ವಿಚಾರಣೆಯನ್ನು ಏಪ್ರಿಲ್ 17ಕ್ಕೆ ಮುಂದೂಡಿದೆ.

ನೋಟಿಸ್
ನೋಟಿಸ್
author img

By

Published : Apr 5, 2021, 5:26 PM IST

Updated : Apr 5, 2021, 6:08 PM IST

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಕೋರಿ ಸಲ್ಲಿಸಿರುವ ಅರ್ಜಿ ಸಂಬಂಧ ಹೈಕೋರ್ಟ್ ರಾಜ್ಯ ಸರ್ಕಾರ, ಗೃಹ ಇಲಾಖೆ ಹಾಗೂ ಎಸ್ಐಟಿಗೆ ನೋಟಿಸ್ ಜಾರಿ ಮಾಡಿದೆ.

ಈ ಕುರಿತು ವಕೀಲ ಎಸ್ ಉಮೇಶ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಕೆಲ ಕಾಲ ಅರ್ಜಿದಾರರ ಪರ ವಕೀಲರ ವಾದ ಆಲಿಸಿದ ಪೀಠ, ರಾಜ್ಯ ಸರ್ಕಾರ, ಎಸ್ಐಟಿ ಸೇರಿದಂತೆ ಎಲ್ಲ ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿ, ವಿಚಾರಣೆಯನ್ನು ಏಪ್ರಿಲ್ 17ಕ್ಕೆ ಮುಂದೂಡಿತು. ಇದೇ ವೇಳೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ತನಿಖಾ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಮುಂದಿನ ವಿಚಾರಣೆ ವೇಳೆ ಸಲ್ಲಿಸುವಂತೆ ನಿರ್ದೇಶಿಸಿತು.

ಅರ್ಜಿದಾರರ ಕೋರಿಕೆ - ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ದಿನದಿಂದ ದಿನಕ್ಕೆ ಹಾದಿ ತಪ್ಪುತ್ತಿದೆ. ಇದೇ ವಿಚಾರವಾಗಿ ಸದನದಲ್ಲೂ ಚರ್ಚೆ ಮಾಡಿ ಅಮೂಲ್ಯ ಸಮಯ ವ್ಯರ್ಥ ಮಾಡಲಾಗಿದೆ. ಆಡಳಿತ ಮತ್ತು ಪ್ರತಿಪಕ್ಷಗಳು ಪರಸ್ಪರ ಆರೋಪ ಪ್ರತ್ಯಾರೋಪದಲ್ಲಿ ತೊಡಗಿವೆ. ರಾಜ್ಯ ಸರ್ಕಾರದ ಆಡಳಿತ ಯಂತ್ರವೂ ದುರ್ಬಲಕೊಂಡಿದೆ. ಈ ಪ್ರಕರಣ ರಾಜಕೀಯ ಆಯಾಮ ಪಡೆದುಕೊಂಡಿರುವುದರಿಂದ ಎಸ್‌ಐಟಿ ಹಾಗೂ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಕೂಡ ಸೂಕ್ತ ತನಿಖೆ ನಡೆಸುತ್ತಿಲ್ಲ ಎಂದು ಉಲ್ಲೇಖಿಸಿದ್ದಾರೆ.

ಸಮರ್ಪಕ ತನಿಖೆ ನಡೆಸಲು ಮತ್ತು ತಪ್ಪಿತಸ್ಥರನ್ನು ಗುರುತಿಸಲು ಪ್ರಕರಣವನ್ನು ಸಿಬಿಐಗೆ ವಹಿಸಬೇಕು. ಇಲ್ಲವೇ, ಪ್ರಕರಣದ ತನಿಖೆಗೆಂದೇ ವಿಶೇಷ ತನಿಖಾ ತಂಡ ರಚಿಸಲು ಕೇಂದ್ರ ಸರ್ಕಾರಕ್ಕೆ ಆದೇಶಿಸಬೇಕು. ತನಿಖೆಯನ್ನು ಹೈಕೋರ್ಟ್ ಮೇಲ್ವಿಚಾರಣೆ ಮಾಡಬೇಕು. ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳು ಪ್ರತಿದಿನ ತಮ್ಮ ಇಚ್ಛಾನುಸಾರ ಸುದ್ದಿ ಪ್ರಸಾರ ಮಾಡುತ್ತಿದ್ದು, ಮಕ್ಕಳ ಮಾನಸಿಕ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಹೀಗಾಗಿ, ಸಿಡಿ ಪ್ರಕರಣದ ಸಂಬಂಧ ಸುದ್ದಿ ಪ್ರಸಾರ ಮಾಡದಂತೆ ಮಾಧ್ಯಮಗಳಿಗೂ ನಿರ್ದೇಶಿಸಬೇಕು ಎಂದು ಅರ್ಜಿದಾರರು ಮನವಿ ಮಾಡಿದ್ದಾರೆ.

ಇದನ್ನೂ ಓದಿ.. ಬಿಜೆಪಿಯಲ್ಲಿ ವಂಶಪಾರಂಪರ್ಯ ಇಲ್ಲ, ಬಿಎಸ್​ವೈ ಪಕ್ಷದ ನಾಯಕರೇ ಹೊರತು ಮಾಲೀಕರಲ್ಲ : ಸಿ ಟಿ ರವಿ

Last Updated : Apr 5, 2021, 6:08 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.