ETV Bharat / city

ಫ್ರೀಡಂ ಪಾರ್ಕ್ ಹೊರತುಪಡಿಸಿ ಬೆಂಗಳೂರು ನಗರದ ಯಾವುದೇ ಭಾಗದಲ್ಲಿ ಪ್ರತಿಭಟನೆ ನಡೆಸುವಂತಿಲ್ಲ: ಹೈಕೋರ್ಟ್​​ - ಬೆಂಗಳೂರು ನಗರದಲ್ಲಿ ಪ್ರತಿಭಟನೆ ನಡೆಸದಂತೆ ಹೈಕೋರ್ಟ್ ತಾಕೀತು

ಕಾಂಗ್ರೆಸ್ ಪಾದಯಾತ್ರೆಗೆ ಹೈಕೋರ್ಟ್​ ಅಸಮಾಧಾನ ವ್ಯಕ್ತಪಡಿಸಿದ್ದು, ಫ್ರೀಡಂ ಪಾರ್ಕ್ ಹೊರತುಪಡಿಸಿ ಬೆಂಗಳೂರು ನಗರದಲ್ಲಿ ಇನ್ಮುಂದೆ ಯಾವುದೇ ಪ್ರತಿಭಟನೆಗಳನ್ನು ಕೈಗೊಳ್ಳದಂತೆ ಆದೇಶ ಹೊರಡಿಸಿದೆ.

high-court-on-congress-padayatra
ಕಾಂಗ್ರೆಸ್ ಪಾದಯಾತ್ರೆಗೆ ಹೈಕೋರ್ಟ್​ ಅಸಮಾಧಾನ: ಬೆಂಗಳೂರು ನಗರದಲ್ಲಿ ಪ್ರತಿಭಟನೆ ನಡೆಸದಂತೆ ತಾಕೀತು
author img

By

Published : Mar 3, 2022, 1:06 PM IST

Updated : Mar 3, 2022, 2:56 PM IST

ಬೆಂಗಳೂರು: ಫ್ರೀಡಂಪಾರ್ಕ್ ಹೊರತುಪಡಿಸಿ ರಾಜಧಾನಿ ಬೆಂಗಳೂರಿನ ಯಾವುದೇ ಭಾಗದಲ್ಲಿಯೂ ರಾಜಕೀಯ ಪಕ್ಷಗಳು ಹಾಗೂ ಸಂಘಟನೆಗಳು ಪ್ರತಿಭಟನೆ ನಡೆಸಬಾರದು ಎಂದು ಹೈಕೋರ್ಟ್ ಕಟ್ಟಪ್ಪಣೆ ಮಾಡಿದೆ.

ರಾಜಕೀಯ ಪಕ್ಷಗಳು ಹಾಗೂ ಸಂಘಟನೆಗಳು ಪ್ರತಿ ಬಾರಿ ಪಾದಯಾತ್ರೆ-ಪ್ರತಿಭಟನೆ ಕೈಗೊಂಡಾಗಲೂ ಜನಸಾಮಾನ್ಯರು ತೀವ್ರ ಸಂಕಷ್ಟಕ್ಕೆ ಸಿಲುಕುತ್ತಿರುವ ಹಿನ್ನೆಲೆಯಲ್ಲಿ ಹೈಕೋರ್ಟ್ ಈ ಆದೇಶ ಹೊರಡಿಸಿದೆ.

ಈ ಕುರಿತಂತೆ ಹೈಕೋರ್ಟ್ ದಾಖಲಿಸಿಕೊಂಡಿರುವ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಹಾಗೂ ನ್ಯಾಯಮೂರ್ತಿ ಎಸ್.ಆರ್ ಕೃಷ್ಣ ಕುಮಾರ್ ಅವರಿದ್ದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ವಿಚಾರಣೆ ಆರಂಭವಾಗುತ್ತಿದ್ದಂತೆ ಇಂದಿನ ಪ್ರತಿಭಟನೆ ಕುರಿತು ಪ್ರಸ್ತಾಪಿಸಿದ ನ್ಯಾಯಮೂರ್ತಿ ಎಸ್.ಆರ್ ಕೃಷ್ಣಕುಮಾರ್, ನಗರದಲ್ಲಿ ಪ್ರತಿಭಟನೆ 'ಪಾದಯಾತ್ರೆಗಳನ್ನು ತಡೆಯಲು ಸಾಧ್ಯವಿಲ್ಲವೇ?, ಇಂದು ಮೇಕ್ರಿ ಸರ್ಕಲ್ ಅರಮನೆ ರಸ್ತೆ ದಾಟಿ ಬರಲು ನಮಗೇ ಒಂದು ಗಂಟೆ ಸಮಯ ಹಿಡಿಯಿತು. ಏನಾದರೂ ಕ್ರಮ ಕೈಗೊಳ್ಳಬೇಕಲ್ಲವೇ?' ಎಂದರು.

ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಸರ್ಕಾರದ ಪರ ವಕೀಲರನ್ನು ಪ್ರಶ್ನಿಸಿ, ಪ್ರತಿಭಟನೆ-ಪಾದಯಾತ್ರೆಗಳಿಗೆ ನಿರ್ದಿಷ್ಟ ಜಾಗವನ್ನೇಕೆ ನಿಗದಿ ಮಾಡಬಾರದು?, ರಸ್ತೆಯಲ್ಲಿ ಪ್ರತಿಭಟನೆ ಮಾಡಿದರೆ ಜನರು ಏನು ಮಾಡಬೇಕು?, ಅವರು ಯಾವುದಕ್ಕಾದರೂ ಪ್ರತಿಭಟನೆ ಮಾಡಲಿ. ಫ್ರೀಡಂ ಪಾರ್ಕ್​​​ನಲ್ಲಿ ಮಾಡಲಿ. ಪ್ರತಿಭಟನೆಗಳಿಂದ ಜನಸಾಮಾನ್ಯರಿಗೆ ತೊಂದರೆ ಉಂಟುಮಾಡುವವರ ವಿರುದ್ಧ ಯಾವ ರೀತಿ ಕ್ರಮ ಕೈಗೊಳ್ಳಬಹುದು? ಎಂದರು.

ಈ ಪ್ರಶ್ನೆಗೆ ಸರ್ಕಾರದ ಪರ ವಕೀಲರು ಉತ್ತರಿಸಿ, ಕರ್ನಾಟಕ ಪೊಲೀಸ್ ಕಾಯ್ದೆ-1963ರ ಸೆಕ್ಷನ್ 31(1)(ಒ) ಅಡಿ ಪೊಲೀಸ್ ಆಯುಕ್ತರು ಕ್ರಮ ಕೈಗೊಳ್ಳಬಹುದು ಎಂದರು.

ವಾದ ಆಲಿಸಿದ ಪೀಠ, ರಾಜಕೀಯ ಅಥವಾ ರಾಜಕೀಯೇತರ ಸಂಘಟನೆಗಳು ಪಾದಯಾತ್ರೆ-ಪ್ರತಿಭಟನೆಗಳನ್ನು ನಿಯಮಾನುಸಾರ ನಡೆಸಬಹುದು. ಆದರೆ, ಈ ಪ್ರತಿಭಟನೆಗಳಿಂದ ನಗರದ ಜನಸಾಮಾನ್ಯರ ಸಂಚಾರ ಹಾಗೂ ದಿನನಿತ್ಯದ ಚಟುವಟಿಕೆಗಳಿಗೆ ತೀವ್ರ ತೊಂದರೆ ಉಂಟಾಗುತ್ತಿದೆ. ಹೀಗಾಗಿ. ಯಾವುದೇ ರಾಜಕೀಯ ಪಕ್ಷ ಅಥವಾ ಸಂಘಟನೆ ಫ್ರೀಡಂ ಪಾರ್ಕ್ ಹೊರತುಪಡಿಸಿ ಬೆಂಗಳೂರು ನಗರದ ಯಾವುದೇ ಭಾಗದಲ್ಲಿ ಪ್ರತಿಭಟನೆ ನಡೆಸುವಂತಿಲ್ಲ ಎಂದು ಆದೇಶಿಸಿತು.

ಅಲ್ಲದೇ, ಪ್ರತಿಭಟನೆ-ಪಾದಯಾತ್ರೆಗಳಿಂದ ನಗರದ ಜನರಿಗೆ ತೊಂದರೆಯಾಗದಂತೆ ಸರ್ಕಾರ ನಿಯಮಗಳನ್ನು ರೂಪಿಸಿದ್ದು, ಅವುಗಳನ್ನು ಪಾಲಿಸಬೇಕು. ನಿಯಮಗಳನ್ನು ಉಲ್ಲಂಘಿಸಿ ಪ್ರತಿಭಟನೆ ನಡೆಸಿದರೆ ಕರ್ನಾಟಕ ಪೊಲೀಸ್ ಕಾಯ್ದೆ-1963 ಸೆಕ್ಷನ್ 103 ಹಾಗೂ ಐಪಿಸಿ ಸೆಕ್ಷನ್ 188 ಅಡಿ ಕ್ರಮ ಕೈಗೊಂಡು ನ್ಯಾಯಾಲಯಕ್ಕೆ ವರದಿ ಸಲ್ಲಿಸಬೇಕು ಎಂದು ನಿರ್ದೇಶಿಸಿ, ವಿಚಾರಣೆಯನ್ನು ಏಪ್ರಿಲ್ ಮೊದಲ ವಾರಕ್ಕೆ ಮುಂದೂಡಿತು.

ಇದನ್ನೂ ಓದಿ: ಕೊನೆ ದಿನದ ಮೇಕೆದಾಟು ಪಾದಯಾತ್ರೆ ಆರಂಭ: ದೊಡ್ಡ ಮಟ್ಟದ ಸಂಚಾರ ದಟ್ಟಣೆ ಸಾಧ್ಯತೆ

ಕಾನೂನು ಉಲ್ಲಂಘನೆ ಮಾಡಿದಲ್ಲಿ ಐಪಿಸಿ ಸೆಕ್ಷನ್ 188 ಹಾಗೂ ಕರ್ನಾಟಕ ಪೊಲೀಸ್ ಕಾಯ್ದೆ-1963ರ ಅಡಿ ಸಂಬಂಧಪಟ್ಟ ಪೊಲೀಸ್ ಠಾಣೆಯ ಇನ್ಸ್​​ಪೆಕ್ಟರ್​​ಗೆ ಕಾನೂನುರಿತ್ಯಾ ಕ್ರಮ ಕೈಗೊಳ್ಳಲು ಆದೇಶ ಹೊರಡಿಸಲಾಗಿದೆ.

Last Updated : Mar 3, 2022, 2:56 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.