ETV Bharat / city

ಕಾರ್ಮಿಕರು 2 ಸಾವಿರ ರೂ. ಪರಿಹಾರಕ್ಕೆ ಕಮಿಷನ್​ ಕೊಡ್ತಿದಾರೆ: ಹೈಕೋರ್ಟ್​​​ ಮುಂದೆ ಸತ್ಯ ಬಿಚ್ಚಿಟ್ಟ ಕೆಎಸ್ಎಲ್ಎಸ್ಎ

ಕಾರ್ಮಿಕರಿಗೆ ನೆರವು ನೀಡಲು ಸರ್ಕಾರ ಘೋಷಿಸಿರುವ ಪ್ಯಾಕೇಜ್ ಪರಿಹಾರ ಹಣ ಪಡೆದುಕೊಳ್ಳಲು ಸಮಸ್ಯೆಯಾಗುತ್ತಿರುವ ಕುರಿತು ಹಾಗೂ ಸೇವಾ ಸಿಂಧು ಕೇಂದ್ರಗಳಲ್ಲಿ ಕಮಿಷನ್ ಹಣಕ್ಕೆ ಬೇಡಿಕೆ ಇಡುತ್ತಿರುವ ಕುರಿತು ಕೆಎಸ್ಎಲ್ಎಸ್ಎ ಗೆ ಹಲವು ದೂರು ಬಂದಿದ್ದವು.

high-court-order-on-covid-relief-for-employees
ಕಾರ್ಮಿಕರು 2 ಸಾವಿರ ರೂ. ಪರಿಹಾರಕ್ಕೆ ಕಮಿಷನ್​ ಕೊಡ್ತಿದಾರೆ: ಹೈಕೋರ್ಟ್​​​ ಮುಂದೆ ಸತ್ಯ ಬಿಚ್ಚಿಟ್ಟ ಕೆಎಸ್ಎಲ್ಎಸ್ಎ
author img

By

Published : Jun 30, 2021, 2:44 AM IST

ಬೆಂಗಳೂರು : ಕೋವಿಡ್ ಹಿನ್ನೆಲೆಯಲ್ಲಿ ರಾಜ್ಯದ ಅಸಂಘಟಿತ ಕಾರ್ಮಿಕರಿಗೆ ರಾಜ್ಯ ಸರ್ಕಾರ ಘೋಷಿಸಿರುವ 2 ಸಾವಿರ ರೂಪಾಯಿ ಪರಿಹಾರಕ್ಕೆ ಅರ್ಜಿ ಸಲ್ಲಿಸಲು ಬರುವ ಕಾರ್ಮಿಕರಿಂದ ಸೇವಾ ಸಿಂಧು ಕೇಂದ್ರಗಳಲ್ಲಿ ಕಮಿಷನ್ ರೂಪದಲ್ಲಿ ತಲಾ 150ರಿಂದ 250 ರೂಪಾಯಿವರೆಗೆ ವಸೂಲು ಮಾಡಲಾಗುತ್ತಿದೆ ಎಂದು ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರ(ಕೆಎಸ್ಎಲ್ಎಸ್ಎ) ಹೈಕೋರ್ಟ್​​ಗೆ ವರದಿ ನೀಡಿದೆ.

ಗೃಹ ಕಾರ್ಮಿಕರಿಗೂ ಕೋವಿಡ್ ಪರಿಹಾರ ನೀಡಲು ನಿರ್ದೇಶಿಸಬೇಕು ಎಂದು ಕೋರಿ ಸಲ್ಲಿಸಿರುವ ಪಿಐಎಲ್ ವಿಚಾರಣೆ ನಡೆಸುತ್ತಿರುವ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ನೇತೃತ್ವದ ವಿಭಾಗೀಯ ಪೀಠಕ್ಕೆ ಕೆಎಸ್ಎಲ್ಎಸ್ಎ ಈ ಲಿಖಿತ ಮಾಹಿತಿ ಸಲ್ಲಿಸಿದೆ.

ಕಾರ್ಮಿಕರಿಗೆ ನೆರವು ನೀಡಲು ಸರ್ಕಾರ ಘೋಷಿಸಿರುವ ಪ್ಯಾಕೇಜ್ ಪರಿಹಾರ ಹಣ ಪಡೆದುಕೊಳ್ಳಲು ಸಮಸ್ಯೆಯಾಗುತ್ತಿರುವ ಕುರಿತು ಹಾಗೂ ಸೇವಾ ಸಿಂಧು ಕೇಂದ್ರಗಳಲ್ಲಿ ಕಮಿಷನ್ ಹಣಕ್ಕೆ ಬೇಡಿಕೆ ಇಡುತ್ತಿರುವ ಕುರಿತು ಕೆಎಸ್ಎಲ್ಎಸ್ಎ ಗೆ ಹಲವು ದೂರು ಬಂದಿದ್ದವು.

ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಹಾಸನ, ರಾಮನಗರ, ಮೈಸೂರು, ಬೆಳಗಾವಿ, ಶಿವಮೊಗ್ಗ ಮತ್ತು ಬೀದರ್‌ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಗಳ ಸದಸ್ಯ ಕಾರ್ಯದರ್ಶಿಗಳಿಗೆ ಈ ಸಂಬಂಧ ವಿಚಾರಣೆ ನಡೆಸುವಂತೆ ಸೂಚಿಸಿದ್ದೆವು. ಆ ಪ್ರಕಾರ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಗಳು ಪರಿಶೀಲಿಸಿ ವರದಿ ಸಲ್ಲಿಸಿವೆ.

ಈ ವೇಳೆ ಕಾರ್ಮಿಕರಿಂದ ಕಮಿಷನ್​ಗೆ ಬೇಡಿಕೆ ಇಟ್ಟಿರುವುದು ಕಂಡು ಬಂದಿದೆ. ಹೀಗಾಗಿ ಅಸಂಘಟಿತ ವಲಯದ ಕಾರ್ಮಿಕರು ಸರ್ಕಾರದ ನೆರವು ಪಡೆದುಕೊಳ್ಳಲು ಕಾರ್ಮಿಕ ಇಲಾಖೆ ಅರ್ಜಿ ಸಲ್ಲಿಸುವುದಕ್ಕೆ ಸೂಕ್ತವಾದ ವ್ಯವಸ್ಥೆ ರೂಪಿಸಬೇಕು ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ: 65 ಇನ್ಸ್​ಪೆಕ್ಟರ್​ಗಳನ್ನು ಎತ್ತಂಗಡಿ ಮಾಡಿದ ರಾಜ್ಯ ಪೊಲೀಸ್ ಇಲಾಖೆ

ಈ ವರದಿ ಪರಿಶೀಲಿಸಿದ ಪೀಠ, 2 ಸಾವಿರದಂತಹ ಸಣ್ಣ ಮೊತ್ತದ ಪರಿಹಾರ ಪಡೆಯಲು ಕಾರ್ಮಿಕರು ಈ ಪರಿ ಕಷ್ಟಪಡಬೇಕೇ?. ನೋಂದಣಿ ಪ್ರಕ್ರಿಯೆಯೂ ಕ್ಲಿಷ್ಟವಾಗಿದ್ದು, ಅರ್ಹ ಫಲಾನುಭವಿ ಕಾರ್ಮಿಕರು ಸೌಲಭ್ಯದಿಂದ ವಂಚಿತರಾಗುವ ಅಪಾಯವಿದೆ ಎಂದು ಬೇಸರ ವ್ಯಕ್ತಪಡಿಸಿದೆ. ಅಲ್ಲದೇ, ಕಾರ್ಮಿಕ ಇಲಾಖೆಯು ಈ ಸಂಬಂಧ ಕೂಡಲೇ ಗಮನಹರಿಸಬೇಕು. ಮುಂದಿನ ವಿಚಾರಣೆ ವೇಳೆ ಕಾರ್ಮಿಕ ಇಲಾಖೆಯ ಕಾರ್ಯದರ್ಶಿ ವಿಡಿಯೊ ಕಾನ್ಫರೆನ್ಸ್‌ ಮೂಲಕ ಹಾಜರಿದ್ದು ವಿವರಣೆ ನೀಡಬೇಕು ಎಂದು ನಿರ್ದೇಶಿಸಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.