ETV Bharat / city

ಗಿಡ ನೆಟ್ಟ ನಂತರವೇ ರಸ್ತೆ ಗುತ್ತಿಗೆದಾರನಿಗೆ ಹಣ ಬಿಡುಗಡೆ ಮಾಡಿ: ಹೈಕೋರ್ಟ್ ಆದೇಶ

ಮರಗಳನ್ನು ಕತ್ತರಿಸಿದ್ದಕ್ಕೆ ಪ್ರತಿಯಾಗಿ ಗಿಡಗಳನ್ನು ನೆಟ್ಟ ನಂತರವೇ ಗುತ್ತಿಗೆದಾರನಿಗೆ ಬಿಲ್ ಬಿಡುಗಡೆ ಮಾಡಬೇಕು. ಅರಣ್ಯ ಇಲಾಖೆ ವಿಧಿಸಿರುವ ಷರತ್ತುಗಳ ಅನ್ವಯ ಅರಣ್ಯೀಕರಣ ಕೆಲಸ ನಡೆದಿದೆಯೇ ಎಂಬುದನ್ನು ಪರಿಶೀಲಿಸಬೇಕು ಎಂದು ಹೈಕೋರ್ಟ್ ಆದೇಶಿಸಿದೆ.

high-court-order-on-road-extension-in-uttarakannada
ಗಿಡ ನೆಟ್ಟ ನಂತರವೇ ರಸ್ತೆ ಗುತ್ತಿಗೆದಾರನಿಗೆ ಹಣ ಬಿಡುಗಡೆ ಮಾಡಿ: ಹೈಕೋರ್ಟ್ ಆದೇಶ
author img

By

Published : Sep 24, 2021, 2:35 AM IST

Updated : Sep 24, 2021, 3:34 AM IST

ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯ ಕುಮಟಾ ಮತ್ತು ಹೊನ್ನಾವರ ನಡುವೆ ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕಾಮಗಾರಿಗೆ ಸಮ್ಮತಿಸಿರುವ ಹೈಕೋರ್ಟ್, ಕಾಮಗಾರಿಗಾಗಿ ಕತ್ತರಿಸುವ ಮರಗಳಿಗೆ ಪ್ರತಿಯಾಗಿ ಗಿಡಗಳನ್ನು ನೆಟ್ಟ ನಂತರವೇ ಗುತ್ತಿಗೆದಾರನಿಗೆ ಬಿಲ್ ಬಿಡುಗಡೆ ಮಾಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ಆದೇಶಿಸಿದೆ.

ಹೆದ್ದಾರಿ ಅಗಲೀಕರಣಕ್ಕಾಗಿ ಮರಗಳನ್ನು ಕತ್ತರಿಸಲು ಮುಂದಾಗಿರುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಕ್ರಮ ಪ್ರಶ್ನಿಸಿ ಅರುಣ್ ಜಿ. ಮೆಸ್ತಾ ಮತ್ತಿತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹಂಗಾಮಿ ಸಿಜೆ ಎಸ್.ಸಿ.ಶರ್ಮಾ ನೇತೃತ್ವದ ವಿಭಾಗೀಯ ಪೀಠ ಈ ಆದೇಶ ಮಾಡಿದೆ.

ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಹಿನ್ನೆಲೆಯಲ್ಲಿ ಕತ್ತರಿಸುವ ಮರಗಳಿಗೆ ಪ್ರತಿಯಾಗಿ ಮರಗಳನ್ನು ನೆಡುವ ಸಂಬಂಧ ನ್ಯಾಯಾಲಯ ಕಾಲ ಕಾಲಕ್ಕೆ ನಿರ್ದೇಶನ ನೀಡಿದೆ. ಒಟ್ಟು 6,334 ಮರಗಳನ್ನು ಕತ್ತರಿಸಬೇಕಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಮರಗಳನ್ನು ಕತ್ತರಿಸುವ ಮತ್ತು ಪರಿಹಾರ ರೂಪವಾಗಿ ಗಿಡಗಳನ್ನು ನೆಡುವ ವಿಚಾರದಲ್ಲಿ ಸಂಪೂರ್ಣ ವಿವರಗಳನ್ನು ನೀಡಿ ಪ್ರಮಾಣ ಪತ್ರ ಸಲ್ಲಿಸಿದೆ.

ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರಮಾಣ ಪತ್ರ ಸಲ್ಲಿಸಿ, ಮರಗಳನ್ನು ಕತ್ತರಿಸುವ ಮತ್ತು ಅರಣ್ಯೀಕರಣದ ಬಗ್ಗೆ ಮಾಹಿತಿ ನೀಡಿದ್ದಾರೆ. ಸದ್ಯ ಮರಗಳನ್ನು ಕತ್ತರಿಸಲು ಅರಣ್ಯ ಇಲಾಖೆಯ ಮರ ಅಧಿಕಾರಿ ಮತ್ತು ಉಪ ಅರಣ್ಯ ಸಂರಕ್ಷಣಾಧಿಕಾರಿ ಈಗಾಗಲೇ ಅನುಮತಿ ನೀಡಿದ್ದು, ಕಾಮಗಾರಿ ನಡೆಯುತ್ತಿದೆ. ಇದರಿಂದ ಕಾಮಗಾರಿಯನ್ನು ನಡೆಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಮುಕ್ತವಾಗಿದೆ. ಅದರಂತೆ ಯೋಜನೆ ಮುಂದುವರಿಸಬಹುದು ಎಂದು ಸೂಚಿಸಿರುವ ಪೀಠ, ಕಾಮಗಾರಿ ನಡೆಸುವ ಜೊತೆಯಲ್ಲಿಯೇ ಪರಿಹಾರ ರೂಪದಲ್ಲಿ ಗಿಡಗಳನ್ನು ನೆಡಬೇಕು ಎಂದು ಆದೇಶಿಸಿದೆ.

ಅಲ್ಲದೆ, ಮರಗಳನ್ನು ಕತ್ತರಿಸಿದ್ದಕ್ಕೆ ಪ್ರತಿಯಾಗಿ ಗಿಡಗಳನ್ನು ನೆಟ್ಟ ನಂತರವೇ ಗುತ್ತಿಗೆದಾರನಿಗೆ ಬಿಲ್ ಬಿಡುಗಡೆ ಮಾಡಬೇಕು. ಅರಣ್ಯ ಇಲಾಖೆ ವಿಧಿಸಿರುವ ಷರತ್ತುಗಳ ಅನ್ವಯ ಅರಣ್ಯೀಕರಣ ಕೆಲಸ ನಡೆದಿದೆಯೇ ಎಂಬುದನ್ನು ಅಧಿಕಾರಿ ಪರಿಶೀಲನೆ ನಡೆಸಿ ದೃಢೀಕರಣ ಪತ್ರ ವಿತರಿಸಬೇಕು.

ಅರಣ್ಯೀಕರಣ ಕುರಿತು ಪ್ರಗತಿ ವರದಿಯನ್ನು ಹೆದ್ದಾರಿ ಪ್ರಾಧಿಕಾರ ನ್ಯಾಯಾಲಯಕ್ಕೆ ಸಲ್ಲಿಸಬೇಕು. ಒಂದು ವೇಳೆ ಅರಣ್ಯ ಇಲಾಖೆಯ ಅನುಮತಿ ಪ್ರಕಾರವೇ ಅರಣ್ಯೀಕರಣ ನಡೆಸದಿದ್ದರೆ ಆ ಬಗ್ಗೆ ನ್ಯಾಯಾಲಯದ ಗಮನಕ್ಕೆ ತರಲು ಅರ್ಜಿದಾರರು ಮುಕ್ತರಾಗಿದ್ದಾರೆ ಎಂದು ನಿರ್ದೇಶಿಸಿದ ನ್ಯಾಯಪೀಠ, ವಿಚಾರಣೆಯನ್ನು ಎರಡು ತಿಂಗಳ ಕಾಲ ಮುಂದೂಡಿತು.

ಕುಮಟಾ ಮತ್ತು ಹೊನ್ನವಾರ ನಡುವಿನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಆರು ಕಿ.ಮೀ ಉದ್ದದ ರಸ್ತೆಯನ್ನು ನಾಲ್ಕು ಪಥದೊಂದಿಗೆ ಅಗಲೀಕರಣ ಮಾಡಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಯೋಜನೆ ಹಮ್ಮಿಕೊಂಡಿತ್ತು. ಅದಕ್ಕಾಗಿ ಮರಗಳನ್ನು ಕತ್ತರಿಸಲು ಉದ್ದೇಶಿಸಿರುವುದನ್ನು ಪ್ರಶ್ನಿಸಿ ಅರ್ಜಿದಾರರು ಹೈಕೋರ್ಟ್ ಮೆಟ್ಟಿಲೇರಿದ್ದರು.

ಇದನ್ನೂ ಓದಿ: ಶಿರೂರು ಮಠಕ್ಕೆ ಅಪ್ರಾಪ್ತ ಪೀಠಾಧಿಪತಿ ನೇಮಕ ಪ್ರಶ್ನಿಸಿ ಪಿಐಎಲ್ : ತೀರ್ಪು ಕಾಯ್ದಿರಿಸಿದ ಹೈಕೋರ್ಟ್

Last Updated : Sep 24, 2021, 3:34 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.