ETV Bharat / city

ಒಸಿಐ ವಿದ್ಯಾರ್ಥಿಗಳಿಗೂ ಸಿಇಟಿಗೆ ಅವಕಾಶ ನೀಡಲು ಹೈಕೋರ್ಟ್ ಆದೇಶ - OCI offers students the option of engineering, architecture, ayurveda and other professional course seats

ಭಾರತೀಯ ಸಾಗರೋತ್ತರ ನಾಗರಿಕರು (ಒಸಿಐ) ಕಾರ್ಡ್ ಹೊಂದಿರುವ ವಿದ್ಯಾರ್ಥಿಗಳಿಗೆ ಎಂಜಿನಿಯರಿಂಗ್, ಆರ್ಕಿಟೆಕ್ಚರ್, ಆಯುರ್ವೇದ ಮತ್ತು ಇತರ ವೃತ್ತಿಪರ ಕೋರ್ಸ್‌ ಸೀಟುಗಳ ಆಯ್ಕೆಗೆ ಸಾಮಾನ್ಯ ಕೆಟಗರಿ ಅಡಿ ಪರೀಕ್ಷೆ ಮತ್ತು ಕೌನ್ಸೆಲಿಂಗ್‌ನಲ್ಲಿ ಭಾಗವಹಿಸಲು ಒಸಿಐ ವಿದ್ಯಾರ್ಥಿಗಳಿಗೂ ಅವಕಾಶ ನೀಡಬೇಕು ಎಂದು ಕೋರ್ಟ್​ ಆದೇಶಿಸಿದೆ.

High Court order
ಹೈಕೋರ್ಟ್ ಆದೇಶ
author img

By

Published : May 3, 2022, 7:59 PM IST

ಬೆಂಗಳೂರು: ಭಾರತೀಯ ಸಾಗರೋತ್ತರ ನಾಗರಿಕರು (ಒಸಿಐ) ಕಾರ್ಡ್ ಹೊಂದಿರುವ ವಿದ್ಯಾರ್ಥಿಗಳಿಗೆ ಎಂಜಿನಿಯರಿಂಗ್ ಕೋರ್ಸ್‌ಗಳಿಗೆ ಪ್ರವೇಶ ಕಲ್ಪಿಸುವ ಸಾಮಾನ್ಯ ಪ್ರವೇಶ ಪರೀಕ್ಷೆ ಸಿಇಟಿ-2022 ಕ್ಕೆ ನೋಂದಾಯಿಸಿಕೊಳ್ಳಲು, ಪರೀಕ್ಷೆ ಬರೆಯಲು ಹಾಗೂ ಕೌನ್ಸಿಲಿಂಗ್ ಗೆ ಹಾಜರಾಗಲು ಅವಕಾಶ ನೀಡುವಂತೆ ಹೈಕೋರ್ಟ್ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ(ಕೆಇಎ) ಆದೇಶಿಸಿದೆ.

ವಿವೇಕ್ ಗೌತಮ್, ಸೃಷ್ಟಿ ಸೋಸಲೆ ಮತ್ತಿತರೆ ವಿದ್ಯಾರ್ಥಿಗಳು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆರ್.ದೇವದಾಸ್ ಮತ್ತು ನ್ಯಾಯಮೂರ್ತಿ ಕೆ.ಎಸ್ ಹೇಮಲೇಖಾ ಅವರಿದ್ದ ರಜಾ ಕಾಲದ ವಿಭಾಗೀಯಪೀಠ ಈ ಮಧ್ಯಂತರ ಆದೇಶ ನೀಡಿದೆ.

ಪೀಠ ಮಧ್ಯಂತರ ಆದೇಶದಲ್ಲಿ: ಒಸಿಐ ವಿದ್ಯಾರ್ಥಿಗಳಿಗೆ ಅವಕಾಶ ನೀಡುವ ಕುರಿತಂತೆ ಕೇಂದ್ರ ಸರ್ಕಾರ ಹೊರಡಿಸಿರುವ ಅಧಿಸೂಚನೆಯನ್ನು ಸುಪ್ರೀಂ ಕೋರ್ಟ್ ಇನ್ನೂ ನಿರ್ಣಯಿಸಿಲ್ಲ. ಅಲ್ಲದೇ, ಒಸಿಐ ವಿದ್ಯಾರ್ಥಿಗಳನ್ನೂ ಭಾರತೀಯ ನಾಗರಿಕರಿಗೆ ಸಮಾನವಾಗಿ ಪರಿಗಣಿಸುವಂತೆ ಡಾ. ರಾಧಿಕಾ ತಪ್ಪೇಟ ವರ್ಸಸ್ ಭಾರತ ಸರ್ಕಾರ ಪ್ರಕರಣದಲ್ಲಿ ಮಧ್ಯಂತರ ಆದೇಶದ ಮೂಲಕ ಹೇಳಿದೆ. ಅದರಂತೆ, ಎಂಜಿನಿಯರಿಂಗ್, ಆರ್ಕಿಟೆಕ್ಚರ್, ಆಯುರ್ವೇದ ಮತ್ತು ಇತರ ವೃತ್ತಿಪರ ಕೋರ್ಸ್‌ ಸೀಟುಗಳ ಆಯ್ಕೆಗೆ ಸಾಮಾನ್ಯ ಕೆಟಗರಿ ಅಡಿ ಪರೀಕ್ಷೆ ಮತ್ತು ಕೌನ್ಸೆಲಿಂಗ್‌ನಲ್ಲಿ ಭಾಗವಹಿಸಲು ಒಸಿಐ ವಿದ್ಯಾರ್ಥಿಗಳಿಗೂ ಅವಕಾಶ ನೀಡಬೇಕು ಎಂದು ಸ್ಪಷ್ಟಪಡಿಸಿದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಿಇಟಿ-2022 ಕ್ಕೆ ಅರ್ಜಿಗಳನ್ನು ಆಹ್ವಾನಿಸಿದ್ದು, ಅದರಲ್ಲಿ ಯಾವುದೇ ಅಭ್ಯರ್ಥಿಯು ಭಾರತದ ಪ್ರಜೆಯಾಗದ ಹೊರತು ಸರ್ಕಾರಿ ಸಾಮಾನ್ಯ ಕೋಟಾದ ಸೀಟುಗಳಿಗೆ ಪ್ರವೇಶ ಪಡೆಯಲು ಅರ್ಹರಾಗಿರುವುದಿಲ್ಲ ಎಂದು ಹೇಳದೆ. ಇದು ಕಾನೂನು ಬಾಹಿರ ಕ್ರಮ ಎಂದು ಆಕ್ಷೇಪಿಸಿರುವ ವಿದ್ಯಾರ್ಥಿಗಳು ಹೈಕೋರ್ಟ್ ಮೊರೆ ಹೋಗಿದ್ದಾರೆ. ಇದೇ ವಿಚಾರವಾಗಿ ಕಳೆದ ವರ್ಷ ಕೆಲ ವಿದ್ಯಾರ್ಥಿಗಳು ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ವೇಳೆ ಹೈಕೋರ್ಟ್ ಸರ್ಕಾರದ ನೀತಿಗೆ ಸಂಬಂಧಿಸಿದ ವಿಚಾರಗಳಲ್ಲಿ ನ್ಯಾಯಾಲಯ ಮಧ್ಯಪ್ರವೇಶಿಸುವುದು ಸೂಕ್ತವಲ್ಲ ಎಂದು ಅಭಿಪ್ರಾಯಪಟ್ಟು ವಿದ್ಯಾರ್ಥಿಗಳ ಮನವಿ ಪರಿಗಣಿಸಲು ನಿರಾಕರಿಸಿತ್ತು.

ಇದನ್ನೂ ಓದಿ: ಕಮಿಷನ್ ಪಡೆದೂ, ಬಿಲ್ ಹಣ ನೀಡಿಲ್ಲ: ಪ್ರಧಾನಿಗೆ ಕಾರಟಗಿ ಕಾಂಟ್ರಾಕ್ಟರ್ ಪತ್ರ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.