ETV Bharat / city

ಕಾಡುಗೊಲ್ಲ ಹೆಸರು ಬದಲಾವಣೆ ಮಾಡದಂತೆ ಕೋರಿ ಅರ್ಜಿ: ಪರಿಗಣಿಸುವಂತೆ ಸರ್ಕಾರಕ್ಕೆ ಹೈಕೋರ್ಟ್ ಆದೇಶ - ಕಾಡುಗೊಲ್ಲ ಹೆಸರು ಬದಲಾವಣೆ

ಕರ್ನಾಟಕ ರಾಜ್ಯ ಕಾಡುಗೊಲ್ಲರ ಸಂಘದ ಉಪಾಧ್ಯಕ್ಷ ಸಿ.ಮಹಾಲಿಂಗಪ್ಪ ಸಲ್ಲಿಸಿದ್ದ ತಕರಾರು ಅರ್ಜಿ ವಿಚಾರಣೆ ನಡೆಸಿದ ನ್ಯಾ. ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಪೀಠ ಈ ಆದೇಶ ನೀಡಿದೆ.

Kadugollara Name change
Kadugollara Name change
author img

By

Published : Dec 18, 2021, 3:28 AM IST

ಬೆಂಗಳೂರು : ಕಾಡುಗೊಲ್ಲರ ಅಭಿವೃದ್ಧಿ ನಿಗಮದ ಹೆಸರು ಬದಲಾವಣೆ ಮಾಡದಂತೆ ಕೋರಿ ಕರ್ನಾಟಕ ರಾಜ್ಯ ಕಾಡುಗೊಲ್ಲರ ಸಂಘ ಸಲ್ಲಿಸಿರುವ ಮನವಿಯನ್ನು ಮೂರು ತಿಂಗಳಲ್ಲಿ ಪರಿಗಣಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ.

ಕರ್ನಾಟಕ ರಾಜ್ಯ ಕಾಡುಗೊಲ್ಲರ ಸಂಘದ ಉಪಾಧ್ಯಕ್ಷ ಸಿ.ಮಹಾಲಿಂಗಪ್ಪ ಸಲ್ಲಿಸಿದ್ದ ತಕರಾರು ಅರ್ಜಿ ವಿಚಾರಣೆ ನಡೆಸಿದ ನ್ಯಾ. ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಪೀಠ ಈ ಆದೇಶ ನೀಡಿದೆ. ರಾಜ್ಯ ಸರ್ಕಾರವು ಕಾಡುಗೊಲ್ಲರ ಅಭಿವೃದ್ಧಿ ನಿಗಮದ ಹೆಸರನ್ನು ‘ಗೊಲ್ಲ-ಕಾಡುಗೊಲ್ಲರ ಅಭಿವೃದ್ಧಿ ನಿಗಮ’ ಎಂಬುದಾಗಿ ಬದಲಾವಣೆ ಮಾಡಲು ಮುಂದಾಗಿದೆ. ವಾಸ್ತವವಾಗಿ ಗೊಲ್ಲ ಮತ್ತು ಕಾಡುಗೊಲ್ಲ ಸಮುದಾಯಗಳು ಒಂದೇ ಅಲ್ಲ. ಎರಡೂ ಬೇರೆ ಬೇರೆ ಸಮುದಾಯಗಳು. ಒಂದೊಮ್ಮೆ ಗೊಲ್ಲ-ಕಾಡುಗೊಲ್ಲರ ಅಭಿವೃದ್ಧಿ ನಿಗಮ ಎಂಬುದಾಗಿ ಹೆಸರು ಬದಲಿಸಿದರೆ ಕಾಡುಗೊಲ್ಲರಿಗೆ ಇರುವ ಸರ್ಕಾರಿ ಸೌಲಭ್ಯಗಳು ಗೊಲ್ಲ ಸಮುದಾಯದವರೊಂದಿಗೆ ಹಂಚಿಕೆ ಮಾಡಿಕೊಳ್ಳಬೇಕಾಗುತ್ತದೆ.

ಆದ್ದರಿಂದ ಕಾಡುಗೊಲ್ಲರ ಅಭಿವೃದ್ಧಿ ನಿಗಮದ ಹೆಸರು ಬದಲಾವಣೆ ಮಾಡದಂತೆ ಕೋರಿ ಸಂಘ 2021ರ ನ.30ರಂದು ಸಲ್ಲಿಸಿರುವ ಮನವಿ ಪರಿಗಣಿಸುವಂತೆ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಅರ್ಜಿದಾರರು ಕೋರಿದ್ದರು. ಕಾಡುಗೊಲ್ಲ ಮತ್ತು ಗೊಲ್ಲ ಎರಡು ಸಮುದಾಯಗಳು ಒಂದೆಯೇ ಅಥವಾ ಬೇರೆ ಬೇರೆಯೇ ಎಂಬ ವಿಚಾರವನ್ನು ರಾಜ್ಯ ಸರ್ಕಾರ ನಿರ್ಧಾರ ಮಾಡಬೇಕಿದೆ. ಇಂತಹ ವಿಚಾರಗಳಲ್ಲಿ ನ್ಯಾಯಾಲಯಗಳು ಮಧ್ಯ ಪ್ರವೇಶಿಸಬಾರದು ಎಂದು ಸರ್ಕಾರಿ ವಕೀಲರು ಆಕ್ಷೇಪಿಸಿದ್ದರು. ನಂತರ ನ್ಯಾಯಾಲಯವು ಕಾಲಮಿತಿ ನಿಗದಿಪಡಿಸಿದರೆ, ಆ ಅವಧಿಯೊಳಗೆ ಅರ್ಜಿದಾರರ ಮನವಿ ಪರಿಗಣಿಸಲಾಗುವುದು ಎಂದು ನ್ಯಾಯಾಲಯಕ್ಕೆ ಭರವಸೆ ನೀಡಿದ್ದರು.

ವಾದ-ಪ್ರತಿವಾದ ಆಲಿಸಿದ ಪೀಠ, ಮೂರು ತಿಂಗಳಲ್ಲಿ ಅರ್ಜಿದಾರರ ಮನವಿ ಪರಿಗಣಿಸಬೇಕು. ಈ ವಿಚಾರದಲ್ಲಿ ಅರ್ಜಿದಾರರದಿಂದ ಯಾವುದೇ ಮಾಹಿತಿ ಹಾಗೂ ದಾಖಲೆ ಪಡೆದುಕೊಳ್ಳಲು ಸರ್ಕಾರ ಮುಕ್ತವಾಗಿದೆ. ಆದರೆ, ಇದೇ ನೆಪದಲ್ಲಿ ಪ್ರಕರಣ ಪರಿಗಣಿಸುವಲ್ಲಿ ಯಾವುದೇ ವಿಳಂಬ ಮಾಡಬಾರದು ಎಂದು ಸ್ಪಷ್ಟಪಡಿಸಿ ಅರ್ಜಿ ಇತ್ಯರ್ಥಪಡಿಸಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.