ETV Bharat / city

ಪೋಕ್ಸೊ ಕಾಯ್ದೆ ಮತ್ತಷ್ಟು ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಸರ್ಕಾರಕ್ಕೆ ಹೈಕೋರ್ಟ್ ಆದೇಶ - ಪೋಕ್ಸೊ ಕಾಯ್ದೆಯ ತಿದ್ದುಪಡಿ

ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ 'ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ' ಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ.

ಹೈಕೋರ್ಟ್
ಹೈಕೋರ್ಟ್
author img

By

Published : May 8, 2021, 5:04 PM IST

ಬೆಂಗಳೂರು: ರಾಜ್ಯದಲ್ಲಿ ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ 'ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ' ಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ.

ಕುಂದಾಪುರದ ಹನುಮಂತ ಮೊಗವೀರ ಎಂಬಾತ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹಿರಿಯ ನ್ಯಾಯಮೂರ್ತಿ ಬಿ.ವಿ. ನಾಗರತ್ನ ಮತ್ತು ನ್ಯಾ. ಎಂ.ಜಿ. ಉಮಾ ಅವರಿದ್ದ ವಿಭಾಗೀಯ ಪೀಠ ಈ ಆದೇಶ ನೀಡಿದೆ. ವಿಚಾರಣೆ ವಿಳಂಬವಾಗಿದೆ ಎಂಬ ಕಾರಣಕ್ಕೆ ಜಾಮೀನು ನೀಡಬೇಕು ಎಂಬ ಕೋರಿಕೆಯನ್ನು ಪರಿಗಣಿಸಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟು ಅರ್ಜಿ ವಜಾ ಮಾಡಿದೆ.

ಅಲ್ಲದೇ, ಪ್ರಕರಣದಲ್ಲಿ ದೈಹಿಕವಾಗಿ ಹಾಗೂ ಮಾನಸಿಕವಾಗಿ ಹಿಂಸೆ ಅನುಭವಿಸಿದ್ದ ಸಂತ್ರಸ್ತ ಮಗುವಿಗೆ ನೆರವು ನೀಡುವಂತೆ ಆದೇಶಿಸಿರುವ ಪೀಠ, ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳ ತ್ವರಿತ ವಿಚಾರಣೆಗೆ ರಾಜ್ಯದಲ್ಲಿ ಹೆಚ್ಚುವರಿ ಕೋರ್ಟ್ ಗಳನ್ನು ಸ್ಥಾಪಿಸಲಾಗಿದೆ. ಆದರೆ, ಕಾಯ್ದೆಯಂತೆ ಮಕ್ಕಳ ಸಾಕ್ಷ್ಯ ಕೊಠಡಿ, ಮಕ್ಕಳ ಸ್ನೇಹಿ ನ್ಯಾಯಾಲಯ ಸೇರಿದಂತೆ ಅಗತ್ಯ ಮೂಲಸೌಕರ್ಯವನ್ನು ಸರ್ಕಾರ ಕಲ್ಪಿಸಿಕೊಡಬೇಕಿದೆ ಎಂದು ಪೀಠ ಹೇಳಿದೆ.

ನ್ಯಾಯಾಲಯ ನೀಡಿರುವ ನಿರ್ದೇಶನಗಳು

  • ಪೋಸ್ಕೋ ಪ್ರಕರಣಗಳ ತ್ವರಿತ ವಿಲೇವಾರಿಗೆ ರಾಜ್ಯ ಸರ್ಕಾರ ಅಗತ್ಯ ಸಂಖ್ಯೆಯ ವಿಶೇಷ ನ್ಯಾಯಾಲಯಗಳನ್ನು ಸ್ಥಾಪಿಸಬೇಕು.
  • ವಿಶೇಷ ನ್ಯಾಯಾಲಯಗಳಿಗೆ ಸರ್ಕಾರ ಮೂಲಸೌಕರ್ಯ ಮತ್ತು ಮಾನವ ಸಂಪನ್ಮೂಲ ಒದಗಿಸಬೇಕು.
  • ಪೋಕ್ಸೊ ಪ್ರಕರಣಗಳ ವಿಚಾರಣೆಗೆ ತರಬೇತಿ ಪಡೆದ ಅಭಿಯೋಜಕರನ್ನು ನಿಯೋಜಿಸಬೇಕು
  • ಸಂತ್ರಸ್ಥ ಮಕ್ಕಳ ಆರೈಕೆಗೆ ಜಿಲ್ಲಾಸ್ಪತ್ರೆಗಳಲ್ಲಿ ವಿಶೇಷ ಘಟಕಗಳನ್ನು ತೆರೆಯಬೇಕು ಮತ್ತು ಅಗತ್ಯಬಿದ್ದರೆ ಮಕ್ಕಳಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಬೇಕು ಮತ್ತು ಆ ವೆಚ್ಚವನ್ನು ಸರ್ಕಾರವೇ ಸಂಪೂರ್ಣವಾಗಿ ಭರಿಸಬೇಕು.
  • ವಿಶೇಷ ಕೋರ್ಟ್ ಗಳು ನಿಯಮದಂತೆ ತ್ವರಿತವಾಗಿ ಪ್ರಕರಣಗಳ ವಿಚಾರಣೆ ನಡೆಸಿ ಕೇಸುಗಳನ್ನು ಇತ್ಯರ್ಥಪಡಿಸಬೇಕು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.