ETV Bharat / city

ಐಎಎಸ್ ಅಧಿಕಾರಿ ಮಂಜುನಾಥ್ ಜಾಮೀನು ಅರ್ಜಿ: ಆಕ್ಷೇಪಣೆ ಸಲ್ಲಿಸಲು ಎಸಿಬಿಗೆ ಹೈಕೋರ್ಟ್ ಆದೇಶ - ಐಎಎಸ್ ಅಧಿಕಾರಿ ಮಂಜುನಾಥ್ ಲಂಚ ಪ್ರಕರಣ

ಬೆಂಗಳೂರು ನಗರ ಜಿಲ್ಲಾಧಿಕಾರಿಯಾಗಿದ್ದ ಮಂಜುನಾಥ್ ಮೇಲಿನ ಲಂಚ ಪ್ರಕರಣ ಸಂಬಂಧ ಆಕ್ಷೇಪಣೆಗಳಿದ್ದಲ್ಲಿ ಸಲ್ಲಿಸುವಂತೆ ಎಸಿಬಿಗೆ ಹೈಕೋರ್ಟ್ ಆದೇಶಿಸಿದೆ.

High Court
ಹೈಕೋರ್ಟ್
author img

By

Published : Jul 29, 2022, 6:48 AM IST

ಬೆಂಗಳೂರು: ಭೂ ವ್ಯಾಜ್ಯಕ್ಕೆ ಸಂಬಂಧಿಸಿದ ಲಂಚ ಪ್ರಕರಣದ ಆರೋಪದಲ್ಲಿ ಬಂಧಿತರಾಗಿರುವ ಐಎಎಸ್ ಅಧಿಕಾರಿ ಮಂಜುನಾಥ್ ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡುವುದಕ್ಕೆ ಸಂಬಂಧಿಸಿದಂತೆ ಆಕ್ಷೇಪಣೆಗಳಿದ್ದರೆ ಸಲ್ಲಿಸುವಂತೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ಕ್ಕೆ ಹೈಕೋರ್ಟ್ ತಿಳಿಸಿದೆ. ನ್ಯಾಯಮೂರ್ತಿ ಕೆ.ನಟರಾಜನ್‌ ಜಾಮೀನು ಅರ್ಜಿ ವಿಚಾರಣೆ ನಡೆಸಿದ್ದು, ಆಗಸ್ಟ್ 1 ರೊಳಗೆ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿದರು.

ನ್ಯಾಯಾಲಯದಲ್ಲಿ ಹಿರಿಯ ವಕೀಲ ಚಂದ್ರಮೌಳಿ ಅವರು ಐಎಎಸ್ ಅಧಿಕಾರಿ ಮಂಜುನಾಥ್‌ ಪರ ವಾದಿಸಿ ಜಾಮೀನು ಮಂಜೂರು ಮಾಡುವಂತೆ ಮನವಿ ಮಾಡಿದರು. ಭೂ ವ್ಯಾಜ್ಯ ಪ್ರಕರಣದಲ್ಲಿ ಬೆಂಗಳೂರು ನಗರ ಜಿಲ್ಲಾಧಿಕಾರಿಯಾಗಿದ್ದ ಮಂಜುನಾಥ್ ಪಾತ್ರವಿಲ್ಲವೆಂದು ಕೋರ್ಟ್‌ಗೆ ಮನವರಿಕೆ ಮಾಡಿಕೊಡುವ ಪ್ರಯತ್ನ ಮಾಡಿದರು.

ಇದನ್ನೂ ಓದಿ: ಲಂಚ ಪ್ರಕರಣ: ಬಂಧಿತ ಐಎಎಸ್ ಅಧಿಕಾರಿಯ ಜಾಮೀನು ಅರ್ಜಿ ತಿರಸ್ಕೃತ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.