ETV Bharat / city

ಕೆಲಸದ ವೇಳೆ ಅಪಘಾತದಿಂದ ಸಾವು-ನೋವು.. ಕನಿಷ್ಠ ವೇತನ ಪರಿಗಣಿಸಿ ಪರಿಹಾರ ನೀಡಲು ಹೈಕೋರ್ಟ್ ಆದೇಶ - High Court

ಕಾನೂನಿನ ಲಾಭವು ಜನರಿಗೆ ಅದರಲ್ಲೂ ಉದ್ಯೋಗ ನಿರ್ವಹಣೆ ವೇಳೆ ಅಪಘಾತ ಉಂಟಾಗಿ ಸಾವು-ನೋವು ಸಂಭವಿಸಿದ ಪ್ರಕರಣಗಳ ಬಾಧಿತರಿಗೆ ದೊರೆಯಬೇಕು. ಹಾಗಾಗಿ, ಪರಿಹಾರ ಕ್ಲೇಮ್​ ಮಾಡುವಾಗ ಅಪಘಾತ ಸಂಭವಿಸಿದ ವೇಳೆ ಸರ್ಕಾರ ನಿಗದಿಪಡಿಸಿರುವ ಕನಿಷ್ಠ ವೇತನ ಪ್ರಮಾಣಕ್ಕಿಂತ ಕಡಿಮೆ ವೇತನ ಇತ್ತು ಎಂಬುದಾಗಿ ಬಾಧಿತರು ತಿಳಿಸಿದ್ದರೂ, ಪರಿಹಾರ ನಿಗದಿಗೆ ಕನಿಷ್ಠ ವೇತನ ಪ್ರಮಾಣವನ್ನೇ ಪರಿಗಣಿಸುವುದು ನ್ಯಾಯಾಲಯದ ಕರ್ತವ್ಯವಾಗಿದೆ ಎಂದು ಹೈಕೋರ್ಟ್ ಆದೇಶಿಸಿದೆ.

ಹೈಕೋರ್ಟ್
ಹೈಕೋರ್ಟ್
author img

By

Published : May 7, 2022, 7:11 AM IST

ಬೆಂಗಳೂರು: ಕೆಲಸದ ವೇಳೆ ಅಪಘಾತದಿಂದ ಸಾವು-ನೋವು ಸಂಭವಿಸಿದರೆ ಸಂತ್ರಸ್ತ ವ್ಯಕ್ತಿ ಸರ್ಕಾರ ನಿಗದಿಪಡಿಸಿದ ಕನಿಷ್ಠ ವೇತನಕ್ಕಿಂತ ಕಡಿಮೆ ಸಂಬಳ ಪಡೆಯುತ್ತಿದ್ದರೂ ಆತನಿಗೆ ಕನಿಷ್ಠ ವೇತನ ಪ್ರಮಾಣ ಪರಿಗಣಿಸಿಯೇ ಪರಿಹಾರ ನೀಡಬೇಕು ಎಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.

ವಾಹನ ಅಪಘಾತ ಪ್ರಕರಣದಲ್ಲಿ ಮೈಸೂರಿನ ಹೆಚ್‌.ಡಿ. ಕೋಟೆ ತಾಲೂಕಿನ ನಿವಾಸಿ ನಾಗೇಂದ್ರ ಎಂಬುವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪ್ರದೀಪ್‌ ಸಿಂಗ್‌ ಏರೂರ್‌ ಅವರಿದ್ದ ಪೀಠ ಈ ಆದೇಶ ಹೊರಡಿಸಿದೆ. ಕಾರ್ಮಿಕರ ಕನಿಷ್ಠ ವೇತನವನ್ನು 4 ರಿಂದ 8 ಸಾವಿರ ರೂಪಾಯಿಗೆ ಹೆಚ್ಚಿಸಿ 2010 ರ ಮೇ 31ರಂದು ಕೇಂದ್ರ ಸರ್ಕಾರ ಆದೇಶಿಸಿದೆ. ಈ ಆದೇಶಕ್ಕೆ ಅನುಗುಣವಾಗಿ ನಡೆದುಕೊಳ್ಳುವುದು ನ್ಯಾಯಾಲಯದ ಕರ್ತವ್ಯ. ಅಲ್ಲದೇ, ಕಾನೂನಿನ ಲಾಭವು ಜನರಿಗೆ ಅದರಲ್ಲೂ ಉದ್ಯೋಗ ನಿರ್ವಹಣೆ ವೇಳೆ ಅಪಘಾತ ಉಂಟಾಗಿ ಸಾವು-ನೋವು ಸಂಭವಿಸಿದ ಪ್ರಕರಣಗಳ ಬಾಧಿತರಿಗೆ ದೊರೆಯಬೇಕು. ಹಾಗಾಗಿ, ಪರಿಹಾರ ಕ್ಲೇಮ್​ ಮಾಡುವಾಗ ಅಪಘಾತ ಸಂಭವಿಸಿದ ವೇಳೆ ಸರ್ಕಾರ ನಿಗದಿಪಡಿಸಿರುವ ಕನಿಷ್ಠ ವೇತನ ಪ್ರಮಾಣಕ್ಕಿಂತ ಕಡಿಮೆ ವೇತನ ಇತ್ತು ಎಂಬುದಾಗಿ ಬಾಧಿತರು ತಿಳಿಸಿದ್ದರೂ, ಪರಿಹಾರ ನಿಗದಿಗೆ ಕನಿಷ್ಠ ವೇತನ ಪ್ರಮಾಣವನ್ನೇ ಪರಿಗಣಿಸುವುದು ನ್ಯಾಯಾಲಯದ ಕರ್ತವ್ಯವಾಗಿದೆ ಎಂದು ಆದೇಶಿಸಿದೆ.

ಪ್ರಕರಣದ ಹಿನ್ನೆಲೆ: ಮೈಸೂರಿನ ಎಚ್‌.ಡಿ ಕೋಟೆ ನಿವಾಸಿ ನಾಗೇಂದ್ರ ಎಂಬುವರು ಮಹದೇವಪ್ಪ ಎಂಬುವರ ಬಳಿ ಜೀಪ್‌ ಚಾಲಕನಾಗಿ ಕೆಲಸ ಮಾಡುತ್ತಿದ್ದರು. 2011ರ ಮೇ 1ರಂದು ನಾಗೇಂದ್ರ ಚಲಾಯಿಸುತ್ತಿದ್ದ ಜೀಪ್‌ಗೆ ಮತ್ತೊಂದು ವಾಹನ ಡಿಕ್ಕಿ ಹೊಡೆದು ಎಡಗಣ್ಣಿನ ದೃಷ್ಟಿಯನ್ನು ಸಂಪೂರ್ಣವಾಗಿ ಕಳೆದುಕೊಂಡಿದ್ದರು. ಇದೇ ಕಾರಣಕ್ಕೆ ಅವರನ್ನು ಉದ್ಯೋಗದಿಂದ ತೆಗೆದುಹಾಕಲಾಗಿತ್ತು. ನಂತರ ಪರಿಹಾರಕ್ಕಾಗಿ ಮೋಟಾರು ವಾಹನಗಳ ನ್ಯಾಯಾಧಿಕರಣಕ್ಕೆ ಅವರು ಅರ್ಜಿ ಸಲ್ಲಿಸಿದ್ದರು.

ಎಡಗಣ್ಣಿನ ದೃಷ್ಟಿ ಕಳೆದುಕೊಂಡು ಉದ್ಯೋಗ ವಂಚಿತನಾದ ಕಾರಣ ನಾಗೇಂದ್ರ ಶೇ.100ರಷ್ಟುಆದಾಯ ಸಂಪಾದನೆ ಸಾಮರ್ಥ್ಯ ಕಳೆದುಕೊಂಡಿದ್ದಾರೆ ಎಂದು ತೀರ್ಮಾನಿಸಿದ ನ್ಯಾಯಾಧಿಕರಣ, ಸಂತ್ರಸ್ತನಿಗೆ ಒಟ್ಟು 7,88,423 ಪರಿಹಾರ ಘೋಷಿಸಿತ್ತು. 2018ರ ಜುಲೈ 13 ರಂದು ಪರಿಹಾರ ಪಾವತಿಸುವಂತೆ ಜೀಪ್‌ ಮಾಲಿಕ ಹಾಗೂ ವಿಮಾ ಸಂಸ್ಥೆಗೆ ಆದೇಶಿಸಿತ್ತು. ಈ ಆದೇಶ ರದ್ದುಪಡಿಸುವಂತೆ ವಿಮಾ ಕಂಪನಿ ಮತ್ತು ಪರಿಹಾರ ಮೊತ್ತ ಹೆಚ್ಚಳ ಕೋರಿ ನಾಗೇಂದ್ರ ಹೈಕೋರ್ಟ್​ಗೆ ಪ್ರತ್ಯೇಕ ಮೇಲ್ಮನವಿ ಅರ್ಜಿಗಳನ್ನು ಸಲ್ಲಿಸಿದ್ದರು.

ಆದೇಶದ ವಿವರ: ವಾದ-ಪ್ರತಿ ವಾದ ಆಲಿಸಿದ ಹೈಕೋರ್ಚ್‌, 2011ರಲ್ಲಿ ಜೀಪ್‌ ಚಲಾಯಿಸುವಾಗ ನಾಗೇಂದ್ರ ಅಪಘಾತಕ್ಕೆ ಗುರಿಯಾಗಿ ಎಡಗಣ್ಣಿನ ದೃಷ್ಟಿಯನ್ನು ಸಂಪೂರ್ಣವಾಗಿ ಕಳೆದುಕೊಂಡಿದ್ದಾರೆ. ಇದರಿಂದ ಅವರು ಚಾಲನಾ ವೃತ್ತಿ ಮುಂದುವರೆಸಲು ಆಗದ ಕಾರಣ ಉದ್ಯೋಗ ಸಹ ಕಳೆದುಕೊಂಡರು. ಹಾಗಾಗಿ, ಅವರು ಶೇ.100ರಷ್ಟುಆದಾಯ ಸಂಪಾದನೆ ಸಾಮರ್ಥ್ಯ ಕಳೆದುಕೊಡಿದ್ದಾರೆ ಎಂಬುದಾಗಿ ಪರಿಗಣಿಸಬೇಕಿದೆ. ಅಪಘಾತ ಸಂಭವಿಸಿದಾಗ ಅವರಿಗೆ 25 ವರ್ಷ. ತಮ್ಮ ಮಾಸಿಕ ವೇತನ 6 ಸಾವಿರ ರೂಪಾಯಿ ಇತ್ತೆಂದು ಸ್ವತಃ ನಾಗೇಂದ್ರ ತಿಳಿಸಿದ್ದಾರೆ. ಆದರೆ, 2010ರಲ್ಲಿ ಕೇಂದ್ರ ಸರ್ಕಾರವು ಕನಿಷ್ಠ ವೇತನವನ್ನು 8 ಸಾವಿರ ರೂಪಾಯಿಗೆ ನಿಗದಿಪಡಿಸಿರುವ ಕಾರಣ ಆದನ್ನು ಆಧರಿಸಿಯೇ ಪ್ರಕರಣದಲ್ಲಿ ಪರಿಹಾರ ಗೊತ್ತುಪಡಿಸಲಾಗುತ್ತಿದೆ ಎಂದು ಅಭಿಪ್ರಾಯಪಟ್ಟು, ಪರಿಹಾರ ಮೊತ್ತವನ್ನು 10,41,168 ರೂ.ಗೆ ಹೆಚ್ಚಿಸಿ ಆದೇಶಿಸಿದೆ.

ಇದನ್ನೂ ಓದಿ: ವೈರ್​ನಿಂದ ಕತ್ತು ಬಿಗಿದು ಪ್ರಿಯತಮೆ ತಾಯಿಯ ಕೊಲೆ.. ಕೆಲ ಗಂಟೆಗಳಲ್ಲೇ ಆರೋಪಿ ಅರೆಸ್ಟ್​

ETV Bharat Logo

Copyright © 2024 Ushodaya Enterprises Pvt. Ltd., All Rights Reserved.