ETV Bharat / city

ಅತ್ಯಾಚಾರ ಸಂತ್ರಸ್ತೆಯ ಗರ್ಭಪಾತಕ್ಕೆ ಸಮ್ಮತಿಸಿದ ಹೈಕೋರ್ಟ್.. ಗರ್ಭಧಾರಣೆ ಮಹಿಳೆಯ ವೈಯಕ್ತಿಕ ಹಕ್ಕು.. - Rape victims abortion

ವೈದ್ಯಕೀಯ ಗರ್ಭಪಾತ ಕಾಯಿದೆ 1971ರ ಸೆಕ್ಷನ್ 3ರ ಅಡಿ ಗರ್ಭ ಧರಿಸಿ 24 ವಾರಗಳು ಪೂರ್ಣಗೊಂಡಿದ್ದರೆ ಗರ್ಭಪಾತ ಮಾಡಲಾಗದು ಎಂದು ವೈದ್ಯಕೀಯ ಅಧಿಕಾರಿ ತಿಳಿಸಿದ್ದರು. ಇದನ್ನು ಪ್ರಶ್ನಿಸಿ ಸಂತ್ರಸ್ತೆ ಒಲ್ಲದ ಭ್ರೂಣವನ್ನು ತೆಗೆಸಲು ಅನುಮತಿ ಕೋರಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದಳು..

high court
ಅತ್ಯಾಚಾರ ಸಂತ್ರಸ್ತೆಯ ಗರ್ಭಪಾತಕ್ಕೆ ಸಮ್ಮತಿಸಿದ ಹೈಕೋರ್ಟ್
author img

By

Published : Nov 26, 2021, 2:34 PM IST

ಬೆಂಗಳೂರು : ಅತ್ಯಾಚಾರಕ್ಕೊಳಗಾದ ಅಪ್ರಾಪ್ತ ಸಂತ್ರಸ್ತೆಯ ಗರ್ಭಪಾತಕ್ಕೆ ಸಮ್ಮತಿ ನೀಡಿರುವ ಹೈಕೋರ್ಟ್, ಸಂತಾನೋತ್ಪತ್ತಿ ಆಯ್ಕೆ ಮಹಿಳೆಯ ವೈಯಕ್ತಿಕ ಸ್ವಾತಂತ್ರ್ಯದ ಭಾಗವಾಗಿದೆ. ಇದನ್ನು ಸಂವಿಧಾನದ ವಿಧಿ 21ರ ಅಡಿ ನೀಡಲಾಗಿದೆ ಎಂದು ಅಭಿಪ್ರಾಯಪಟ್ಟಿದೆ.

ಅತ್ಯಾಚಾರದ ಪರಿಣಾಮವಾಗಿ ಗರ್ಭ ಧರಿಸಿದ್ದ 16 ವರ್ಷದ ಅಪ್ರಾಪ್ತೆ ಗರ್ಭಪಾತಕ್ಕೆ ಅನುಮತಿಸದ ವೈದ್ಯಾಧಿಕಾರಿಗಳ ಕ್ರಮ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎನ್ ಎಸ್ ಸಂಜಯಗೌಡ ಅವರಿದ್ದ ಪೀಠ ಈ ಆದೇಶ ಹೊರಡಿಸಿದೆ.

ವೈದ್ಯಕೀಯ ಗರ್ಭಪಾತ ಕಾಯಿದೆ 1971ರ ಸೆಕ್ಷನ್ 3ರ ಅಡಿ ಗರ್ಭ ಧರಿಸಿ 24 ವಾರಗಳು ಪೂರ್ಣಗೊಂಡಿದ್ದರೆ ಗರ್ಭಪಾತ ಮಾಡಲಾಗದು ಎಂದು ವೈದ್ಯಕೀಯ ಅಧಿಕಾರಿ ತಿಳಿಸಿದ್ದರು. ಇದನ್ನು ಪ್ರಶ್ನಿಸಿ ಸಂತ್ರಸ್ತೆ ಒಲ್ಲದ ಭ್ರೂಣವನ್ನು ತೆಗೆಸಲು ಅನುಮತಿ ಕೋರಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದಳು.

ಅತ್ಯಾಚಾರಕ್ಕೊಳಗಾದ ಮತ್ತು ಅದರ ಕಾರಣದಿಂದಾಗಿ ಗರ್ಭಿಣಿಯಾಗಿರುವ ಅಪ್ರಾಪ್ತೆ ಸಾಕಷ್ಟು ನೊಂದಿರುತ್ತಾಳೆ. ಇಂತಹ ಸಂದರ್ಭದಲ್ಲಿ ಗರ್ಭಪಾತಕ್ಕೆ ಸಮ್ಮತಿಸದಿದ್ದರೆ ಅಪರಾಧದ ಹೊರೆಯನ್ನು ಆಕೆಯೇ ಹೊರಲು ಬಲವಂತ ಮಾಡಿದಂತಾಗುತ್ತದೆ. ಆಕೆಯ ಪರಿಕಲ್ಪನೆಯ ಸಂತಾನೋತ್ಪತ್ತಿ ಆಯ್ಕೆಗೆ ವಿರುದ್ದವಾಗಿ ಮಗುವಿಗೆ ಜನ್ಮ ನೀಡುವಂತೆ ಒತ್ತಾಯಿಸಲಾಗದು ಎಂದಿದೆ.

ಇದನ್ನೂ ಓದಿ: ಲಲಿತ ಮಹಲ್ ಬಳಿಯ ಹೆಲಿಪ್ಯಾಡ್ ರಾಜಮನೆತನಕ್ಕೆ ಸೇರಿದ್ದು ಎಂದ ಸುಪ್ರೀಂ.. ವಿವಾದದ ವಿವರ ಹೀಗಿದೆ!

ಇಂತಹ ವಿಚಾರಗಳಲ್ಲಿ ಆಕೆಯ ಅಪೇಕ್ಷೆಗೆ ವಿರುದ್ಧವಾಗಿ ನಡೆದುಕೊಳ್ಳುವುದು ಸಂವಿಧಾನದ 21ನೇ ವಿಧಿಯಡಿ ವೈಯಕ್ತಿಕ ಸ್ವಾತಂತ್ರ್ಯದ ಮೂಲಭೂತ ಹಕ್ಕಿನ ಸ್ಪಷ್ಟ ಉಲ್ಲಂಘನೆಯಾಗಲಿದೆ ಎಂದು ನ್ಯಾಯಾಲಯ ತಿಳಿಸಿದೆ.

ಸ್ತ್ರೀರೋಗ ತಜ್ಞರು, ಮನೋವಿಜ್ಞಾನಿ ಮತ್ತು ಇತರೆ ವೈದ್ಯರನ್ನು ಒಳಗೊಂಡ ವೈದ್ಯಕೀಯ ಮಂಡಳಿ ನೀಡಿರುವ ಅಭಿಪ್ರಾಯ ಪರಿಶೀಲಿಸಿದ ಪೀಠ, ಅರ್ಜಿದಾರರ ಗರ್ಭದಲ್ಲಿನ ಭ್ರೂಣವನ್ನು ತೆಗೆಸಲು ಅರ್ಹವಾಗಿದ್ದಾರೆ.

ಹಾಗಾಗಿ, ವೈದ್ಯಕೀಯ ಗರ್ಭಪಾತ ಕಾಯಿದೆ 1971ರ ನಿಬಂಧನೆಗಳು ಮತ್ತು ವೈದ್ಯಕೀಯ ಮಂಡಳಿಯ ಅಭಿಪ್ರಾಯಕ್ಕೆ ಬದ್ಧವಾಗಿ ಭ್ರೂಣವನ್ನು ತೆಗೆಯಬೇಕು ಎಂದು ಬೆಳಗಾವಿ ಆರೋಗ್ಯಾಧಿಕಾರಿಗೆ ಕೋರ್ಟ್​ ಆದೇಶಿಸಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.