ETV Bharat / city

ಶಾಸಕ ದುರ್ಯೋಧನ ಐಹೊಳೆ ವಿರುದ್ಧದ ಪ್ರಕರಣ ರದ್ದುಪಡಿಸಿದ ಹೈಕೋರ್ಟ್

author img

By

Published : Jun 14, 2021, 10:34 PM IST

2018ರ ವಿಧಾನಸಭೆ ಚುನಾವಣೆ ವೇಳೆ ಬಿಜೆಪಿ ಅಭ್ಯರ್ಥಿಯಾಗಿದ್ದ ದುರ್ಯೋಧನ ಐಹೊಳೆ ಪರ ಮತದಾರರಿಗೆ ಹಂಚಲು ಹಣ ಸಾಗಿಸುತ್ತಿರುವ ಮಾಹಿತಿ ಮೇರೆಗೆ ಚುನಾವಣಾಧಿಕಾರಿ ಕಬ್ಬೂರು ಗ್ರಾಮದಲ್ಲಿ ಬುಲೆರೋ ವಾಹನ ತಡೆದು ತಪಾಸಣೆ ನಡೆಸಿದ್ದರು. ಈ ಸಂಬಂಧ ವಿಚಾರಣೆ ನಡೆಸಲಾಗಿದ್ದು, ಹೈಕೋರ್ಟ್ ಪ್ರಕರಣ ರದ್ದುಪಡಿಸಿದೆ.

 High Court quashed the case against MLA Duryodhana Aihole

ಬೆಂಗಳೂರು: ವಿಧಾನಸಭೆ ಚುನಾವಣೆ ವೇಳೆ ಮತದಾರರಿಗೆ ಹಂಚಲು ಹಣ ಸಾಗಿಸುತ್ತಿದ್ದ ಆರೋಪದಡಿ ಬೆಳಗಾವಿಯ ರಾಯಬಾಗ್ ಕ್ಷೇತ್ರದ ಶಾಸಕ ದುರ್ಯೋಧನ ಐಹೊಳೆ ಹಾಗೂ ಇತರೆ ನಾಲ್ವರು ವ್ಯಕ್ತಿಗಳ ವಿರುದ್ಧ ದಾಖಲಿಸಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿ ಆದೇಶಿಸಿದೆ.

ಪ್ರಕರಣವನ್ನು ರದ್ದುಪಡಿಸುವಂತೆ ಕೋರಿ ಆನಂದ್ ಸಿದ್ರಾಮ್ ಅಕ್ಕಿಮರಡಿ ಮತ್ತಿತರರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಸುನಿಲ್ ದತ್ ಯಾದವ್ ಅವರಿದ್ದ ಏಕಸದಸ್ಯ ಪೀಠ, ಪೊಲೀಸರು ದಾಖಲಿಸಿದ್ದ ಎಫ್‍ಐಆರ್ ಹಾಗೂ ವಿಚಾರಣಾ ನ್ಯಾಯಾಲಯದ ಪ್ರಕ್ರಿಯೆಯನ್ನು ರದ್ದುಪಡಿಸಿ ಆದೇಶಿಸಿದೆ.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು ವಾದಿಸಿ, ಸಿಆರ್ ಪಿಸಿ ಸೆಕ್ಷನ್ 155 ಪ್ರಕಾರ ಅಸಂಜ್ಞೆಯ ಪ್ರಕರಣಗಳಲ್ಲಿ ಮ್ಯಾಜಿಸ್ಟ್ರೇಟ್ ಅನುಮತಿ ಪಡೆದುಕೊಳ್ಳಬೇಕು. ಆದರೆ, ಈ ಪ್ರಕರಣದಲ್ಲಿ ಮ್ಯಾಜಿಸ್ಟ್ರೇಟ್ ಅನುಮತಿ ಪಡೆದುಕೊಂಡಿಲ್ಲ. ಸಂಬಂಧಪಟ್ಟ ಚುನಾವಣಾಧಿಕಾರಿ ಖಾಸಗಿ ದೂರು ದಾಖಲಿಸುವ ಬದಲು ನೇರವಾಗಿ ಪೊಲೀಸರಿಗೆ ದೂರು ಕೊಟ್ಟಿದ್ದಾರೆ.

ಮ್ಯಾಜಿಸ್ಟ್ರೇಟ್ ಅನುಮತಿ ಪಡೆಯದ ಪ್ರಕರಣಗಳನ್ನು ರದ್ದುಪಡಿಸಬಹುದು ಎಂದು ಹೈಕೋರ್ಟ್ ಈ ಹಿಂದೆ ಆದೇಶಿಸಿದೆ ಎಂದಿದ್ದರು. ವಾದ ಪರಿಗಣಿಸಿರುವ ಪೀಠ, ಪ್ರಕರಣ ರದ್ದುಪಡಿಸಿದೆ.

ಪ್ರಕರಣದ ಹಿನ್ನೆಲೆ :

2018ರ ವಿಧಾನಸಭೆ ಚುನಾವಣೆ ವೇಳೆ ಬಿಜೆಪಿ ಅಭ್ಯರ್ಥಿಯಾಗಿದ್ದ ದುರ್ಯೋಧನ ಐಹೊಳೆ ಪರ ಮತದಾರರಿಗೆ ಹಂಚಲು ಹಣ ಸಾಗಿಸುತ್ತಿರುವ ಮಾಹಿತಿ ಮೇರೆಗೆ ಚುನಾವಣಾಧಿಕಾರಿ ಕಬ್ಬೂರು ಗ್ರಾಮದಲ್ಲಿ ಬುಲೆರೋ ವಾಹನ ತಡೆದು ತಪಾಸಣೆ ನಡೆಸಿದ್ದರು.

ಈ ವೇಳೆ, ವಾಹನದಲ್ಲಿ 96 ಸಾವಿರ ನಗದು ಹಾಗೂ ಬಿಜೆಪಿ ಕರಪತ್ರಗಳು ಸಿಕ್ಕಿದ್ದವು. ಈ ಸಂಬಂಧ ಚುನಾವಣಾಧಿಕಾರಿ ಚಿಕ್ಕೋಡಿ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದರು. ಪೊಲೀಸರು ನಾಲ್ವರ ವಿರುದ್ಧ ಎಫ್‍ಐಆರ್ ದಾಖಲಿಸಿಕೊಂಡಿದ್ದರು.

ಈ ವೇಳೆ, ಎಫ್‍ಐಆರ್ ನಲ್ಲಿ ದುರ್ಯೋಧನ ಐಹೊಳೆ ಹೆಸರು ಇರಲಿಲ್ಲ. ಬಳಿಕ ಸಲ್ಲಿಸಿದ್ದ ದೋಷಾರೋಪ ಪಟ್ಟಿಯಲ್ಲಿ ಅವರ ಹೆಸರು ಸೇರಿಸಲಾಗಿತ್ತು. ಪ್ರಕರಣವನ್ನು ಚಿಕ್ಕೋಡಿ ಜೆಎಂಎಫ್ ನ್ಯಾಯಾಲಯ ವಿಚಾರಣೆ ನಡೆಸುತ್ತಿತ್ತು. ಈ ಹಿನ್ನೆಲೆ ಆರೋಪಿಗಳು ಪ್ರಕರಣ ರದ್ದು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.