ETV Bharat / city

ಪ್ರತಿ ಜಿಲ್ಲೆಯಲ್ಲ, ಗ್ರಾಮಗಳಲ್ಲಿ ಗೋಶಾಲೆ ಆರಂಭಿಸಿ : ಹೈಕೋರ್ಟ್

ರಾಜ್ಯದ ಪ್ರತಿ ಜಿಲ್ಲೆಯಲ್ಲೂ ಗೋಶಾಲೆ ಆರಂಭಿಸುತ್ತೇವೆ ಎಂಬ ಸರ್ಕಾರದ ಹೇಳಿಕೆಗೆ ಬೇಸರ ವ್ಯಕ್ತಪಡಿಸಿರುವ ಹೈಕೋರ್ಟ್, ರಾಜ್ಯದ ಪ್ರತಿ ಗಾಮದಲ್ಲೂ ಗೋಶಾಲೆ ಆರಂಭಿಸಬೇಕು ಎಂದು ಮೌಖಿಕವಾಗಿ ಸೂಚಿಸಿದೆ..

high-court
ಹೈಕೋರ್ಟ್
author img

By

Published : Jan 28, 2022, 8:39 PM IST

ಬೆಂಗಳೂರು : ರಾಜ್ಯದ ಪ್ರತಿ ಜಿಲ್ಲೆಯಲ್ಲೂ ಗೋಶಾಲೆ ಆರಂಭಿಸುತ್ತೇವೆ ಎಂಬ ಸರ್ಕಾರದ ಹೇಳಿಕೆಗೆ ಬೇಸರ ವ್ಯಕ್ತಪಡಿಸಿರುವ ಹೈಕೋರ್ಟ್, ರಾಜ್ಯದ ಪ್ರತಿ ಗಾಮದಲ್ಲೂ ಗೋಶಾಲೆ ಆರಂಭಿಸಬೇಕು ಎಂದು ಮೌಖಿಕವಾಗಿ ಸೂಚಿಸಿದೆ.

ರಾಜ್ಯದಲ್ಲಿರುವ ಗೋಶಾಲೆಗಳಿಗೆ ಅಗತ್ಯ ಪ್ರಮಾಣದಲ್ಲಿ ಮೇವು, ನೀರು ಒದಗಿಸುವಂತೆ ಹಾಗೂ ತಾಲೂಕಿಗೆ ಒಂದರಂತೆ ಗೋಶಾಲೆ ಆರಂಭಿಸಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಹೈಕೋರ್ಟ್ ಕಾನೂನು ಸೇವೆಗಳ ಸಮಿತಿ ಸಲ್ಲಿಸಿರುವ ಪಿಐಎಲ್ ವಿಚಾರಣೆ ನಡೆಸಿದ ಸಿಜೆ ರಿತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿದೆ.

ರಾಜ್ಯದ ಪ್ರತಿಯೊಂದು ಜಿಲ್ಲೆಯಲ್ಲೂ ಗೋಶಾಲೆ ಅರಂಭಿಸುವುದಾಗಿ ಸರ್ಕಾರ ಆದೇಶ ಹೊರಡಿಸಿದೆ. ಆದರೆ, ಜಿಲ್ಲೆಗೊಂದರಂತೆ ಗೋಶಾಲೆ ಆರಂಭಿಸಿದರೆ ಸಾಕಾಗುವುದಿಲ್ಲ. ಇತರೆ ರಾಜ್ಯಗಳಲ್ಲಿರುವಂತೆ ಪ್ರತಿ ಗ್ರಾಮದಲ್ಲೂ ಗೋ ಶಾಲೆ ತೆರೆಯಬೇಕು ಎಂದಿದೆ.

ಓದಿ: ಬಿಜೆಪಿ ಕಚೇರಿಯಲ್ಲಿ ಸಿಎಂಗೆ ಮುಜುಗರ : ಕತ್ತಲಲ್ಲಿ ಭಾಷಣ ಮಾಡಿದ ಬಸವರಾಜ ಬೊಮ್ಮಾಯಿ

ಅಲ್ಲದೆ, ರಾಜ್ಯದಲ್ಲಿ ಎಷ್ಟು ಗೋಶಾಲೆಗಳಿವೆ. ಅವುಗಳ ನಿರ್ವಹಣೆ ಹೇಗಿದೆ. ಭವಿಷ್ಯದಲ್ಲಿ ಎಷ್ಟು ಗೋಶಾಲೆ ಆರಂಭಿಸಲಾಗುತ್ತದೆ. ಅವುಗಳ ನಿರ್ವಹಣೆ ಹೇಗೆ?. ಗೋಶಾಲೆಯೊಂದಕ್ಕೆ ಒದಗಿಸುವ ಹಣವೆಷ್ಟು?. ಮೇವು-ನೀರು ಪೂರೈಕೆ ಹೇಗೆ?. ಗೋಶಾಲೆಯಲ್ಲಿ ಎಷ್ಟು ಪ್ರಾಣಿಗಳನ್ನು ಇರಿಸಲಾಗುತ್ತದೆ ಎಂಬ ಹಲವು ಅಂಶಗಳ ಮೇಲ್ವಿಚಾರಣೆ ಹಾಗೂ ನಿರ್ವಹಣೆ ಮಾಡಲು ಮಾರ್ಗಸೂಚಿಗಳು ಅಗತ್ಯವಾಗಿರುತ್ತದೆ.

ಅಂತಹ ಮಾರ್ಗಸೂಚಿಗಳನ್ನು ಏಕರೂಪವಾಗಿ ಅಳವಡಿಸಿಕೊಂಡಾಗ ಮಾತ್ರ ಗೋಶಾಲೆಗಳನ್ನು ಸಮರ್ಪಕವಾಗಿ ನಿರ್ವಹಣೆ ಮಾಡಲು ಸಾಧ್ಯವಾಗುತ್ತದೆ ಎಂದು ಅಭಿಪ್ರಾಯಪಟ್ಟಿದೆ.

ಮುಂದಿನ ವಿಚಾರಣೆ ವೇಳೆ ರಾಜ್ಯದಲ್ಲಿ ಗೋಶಾಲೆ ಆರಂಭಿಸಲು ಮತ್ತು ನಿರ್ವಹಣೆ ಮಾಡಲು ಯಾವ ಮಾರ್ಗಸೂಚಿ ರಚನೆ ಮಾಡಲಾಗಿದೆ ಎಂಬ ಬಗ್ಗೆ ಮಾಹಿತಿ ನೀಡಬೇಕು. ಜೊತೆಗೆ, ಬಿಡಾಡಿ ಪ್ರಾಣಿಗಳ ಕಲ್ಯಾಣಕ್ಕಾಗಿ ಯಾವುದಾದರೂ ಯೋಜನೆ ರೂಪಿಸಲಾಗಿದೆಯೇ ಎಂಬ ಬಗ್ಗೆಯೂ ವಿವರಣೆ ನೀಡಬೇಕು ಎಂದು ಸರ್ಕಾರಕ್ಕೆ ಮೌಖಿಕವಾಗಿ ಸೂಚಿಸಿದೆ.

ಜಾಹೀರಾತು : ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.