ETV Bharat / city

ಮೇಲ್ಮನವಿ ವಜಾಗೊಳಿಸಿದ ಹೈಕೋರ್ಟ್.. ಡಿ.12ರಂದು ರಾಜ್ಯ ಒಕ್ಕಲಿಗರ ಸಂಘದ ಚುನಾವಣೆ..

ಸಂಘಕ್ಕೆ ಚುನಾವಣೆ ನಡೆಸಲು ಇದೇ ಹೈಕೋರ್ಟ್ ಹಲವು ಬಾರಿ ನಿರ್ದೇಶಿಸಿದೆ. ಅಲ್ಲದೇ ಚುನಾವಣಾ ಫಲಿತಾಂಶವು ನ್ಯಾಯಾಲಯದ ಅಂತಿಮ ತೀರ್ಪಿಗೆ ಒಳಪಟ್ಟಿರುತ್ತದೆ ಎಂದು ಏಕಸದಸ್ಯ ಪೀಠ ಸ್ಪಷ್ಟಪಡಿಸಿದೆ. ಹೀಗಾಗಿ, ಮಧ್ಯಪ್ರವೇಶಿಸುವ ಅವಶ್ಯಕತೆ ಕಂಡು ಬರುತ್ತಿಲ್ಲ ಎಂದು ತಿಳಿಸಿ ಅರ್ಜಿಯನ್ನು ವಜಾಗೊಳಿಸಿತು..

Karnataka Vokkaliga association election, ಕರ್ನಾಟಕ ಒಕ್ಕಲಿಗರ ಸಂಘದ ಚುನಾವಣೆ
ಕರ್ನಾಟಕ ಒಕ್ಕಲಿಗರ ಸಂಘದ ಚುನಾವಣೆ
author img

By

Published : Dec 10, 2021, 7:18 PM IST

ಬೆಂಗಳೂರು : ರಾಜ್ಯ ಒಕ್ಕಲಿಗರ ಸಂಘಕ್ಕೆ ನಿಗದಿತ ವೇಳಾಪಟ್ಟಿಯಂತೆ ಡಿ.12ರಂದು ಚುನಾವಣೆ ನಡೆಸಲು ಹೈಕೋರ್ಟ್ ಏಕಸದಸ್ಯ ಪೀಠ ನೀಡಿರುವ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ಮತದಾರರ ಪಟ್ಟಿಯನ್ನು ಸಂಘದ ಬೈಲಾ ಪ್ರಕಾರ ತಯಾರಿಸಿಲ್ಲ. ಸಂಘದ ಸದಸ್ಯರ ಪಟ್ಟಿಯನ್ನು ಪರಿಷ್ಕರಿಸಿಲ್ಲ ಎಂದು ಆರೋಪಿಸಿ ಕೃಷ್ಣೇಗೌಡ ಎಂಬುವರು ಸಲ್ಲಿಸಿದ್ದ ಮೇಲ್ಮನವಿಯನ್ನು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ಕೆಲ ಕಾಲ ವಾದ ಆಲಿಸಿದ ಪೀಠ, ಸದಸ್ಯರ ಪಟ್ಟಿಯನ್ನು ಪರಿಷ್ಕರಿಸಬೇಕಾದರೆ ಸಾಕಷ್ಟು ಸಮಯ ಹಿಡಿಯುತ್ತದೆ ಎಂದು ಸ್ವತಃ ಆಡಳಿತಾಧಿಕಾರಿ ಏಕಸದಸ್ಯ ಪೀಠದ ಎದುರು ಸಲ್ಲಿಸಿರುವ ಆಕ್ಷೇಪಣಾ ಪತ್ರದಲ್ಲಿ ಒಪ್ಪಿಕೊಂಡಿದ್ದಾರೆ. ಅಲ್ಲದೇ 2018ರ ಜುಲೈನಲ್ಲಿ ಕರಡು ಮತದಾರರ ಪಟ್ಟಿ ಸಿದ್ಧಪಡಿಸಲಾಗಿತ್ತು.

ಅದಕ್ಕೆ ಬಂದ 156 ಆಕ್ಷೇಪಣೆಗಳನ್ನು ಇತ್ಯರ್ಥಪಡಿಸಲಾಗಿದೆ. 2021ರ ಏಪ್ರಿಲ್‌ನಲ್ಲಿ ಅಂತಿಮ ಮತದಾರರ ಪಟ್ಟಿ ಪ್ರಕಟಿಸಲಾಗಿದೆ. ಹೀಗಾಗಿ, ನಿಯಮದಂತೆ ಮತದಾರರ ಪಟ್ಟಿ ಪ್ರಕಟಿಸಲಾಗಿಲ್ಲ ಎಂಬ ವಾದ ಒಪ್ಪಲಾಗದು ಎಂದು ಅಭಿಪ್ರಾಯಪಟ್ಟಿತು.

ಅಲ್ಲದೇ, ಕಾಲಮಿತಿಯೊಳಗೆ ನಿಯಮಾನುಸಾರ ಮತದಾರರ ಪಟ್ಟಿ ತಯಾರಿಸಲಾಗಿದೆ. ಕರಡು ಮತದಾರರ ಪಟ್ಟಿ ಹಾಗೂ ಅಂತಿಮ ಮತದಾರರ ಪಟ್ಟಿ ಪ್ರಕಟಿಸಿದಾಗ ಆಕ್ಷೇಪ ಎತ್ತದ ಮೇಲ್ಮನವಿದಾರರು ಈಗ ಪ್ರಶ್ನೆ ಮಾಡುತ್ತಿದ್ದಾರೆ. ಇದು ಕಾನೂನಿನ ದೃಷ್ಟಿಯಲ್ಲಿ ಒಪ್ಪಿತವಲ್ಲ.

ಸಂಘಕ್ಕೆ ಚುನಾವಣೆ ನಡೆಸಲು ಇದೇ ಹೈಕೋರ್ಟ್ ಹಲವು ಬಾರಿ ನಿರ್ದೇಶಿಸಿದೆ. ಅಲ್ಲದೇ ಚುನಾವಣಾ ಫಲಿತಾಂಶವು ನ್ಯಾಯಾಲಯದ ಅಂತಿಮ ತೀರ್ಪಿಗೆ ಒಳಪಟ್ಟಿರುತ್ತದೆ ಎಂದು ಏಕಸದಸ್ಯ ಪೀಠ ಸ್ಪಷ್ಟಪಡಿಸಿದೆ. ಹೀಗಾಗಿ, ಮಧ್ಯಪ್ರವೇಶಿಸುವ ಅವಶ್ಯಕತೆ ಕಂಡು ಬರುತ್ತಿಲ್ಲ ಎಂದು ತಿಳಿಸಿ ಅರ್ಜಿಯನ್ನು ವಜಾಗೊಳಿಸಿತು.

(ದಾವಣಗೆರೆ: ಶಿಕ್ಷಕನ ತಲೆಗೆ ಬಕೆಟ್ ತೊಡಿಸಿ ವಿಕೃತ ಮನಸ್ಸಿನ ವಿದ್ಯಾರ್ಥಿಗಳ ಪುಂಡಾಟ)

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.