ಬೆಂಗಳೂರು: ತುಮಕೂರು ಜಿಲ್ಲೆ ಶಿರಾ ತಾಲೂಕಿನ ಗುರುಗುಂಡ ಬ್ರಹ್ಮೇಶ್ವರ ಮಠದ ಆಸ್ತಿಯ ಅಕ್ರಮ ವರ್ಗಾವಣೆ ಆರೋಪ ಸಂಬಂಧ ನಂಜಾವಧೂತ ಸ್ವಾಮೀಜಿ ವಿರುದ್ಧ ದಾಖಲಿಸಿರುವ ಪ್ರಕರಣ ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ.
ಶಿರಾದ ಹೆಚ್ಚುವರಿ ಸಿವಿಲ್ ನ್ಯಾಯಾಲಯದಲ್ಲಿ ದಾಖಲಿಸಿರುವ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಮಠಾಧೀಶರಾದ ಗಿರೀಶ್ ಕುಮಾರ್ ಅಲಿಯಾಸ್ ನಂಜಾವಧೂತ ಸ್ವಾಮೀಜಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿ ನ್ಯಾ.ಹೆಚ್.ಪಿ.ಸಂದೇಶ್ ಅವರಿದ್ದ ಏಕ ಸದಸ್ಯ ಪೀಠ ಆದೇಶಿಸಿದೆ.
ಆದರೆ, ದೂರು ದಾಖಲಿಸುವ ಮುನ್ನ ಸರ್ಕಾರದ ಪೂರ್ವಾನುಮತಿ ಪಡೆಯದ ಹಿನ್ನೆಲೆಯಲ್ಲಿ ತಹಶೀಲ್ದಾರ್ ಪಾಥರಾಜ್ ವಿರುದ್ಧದ ಪ್ರಕರಣವನ್ನು ರದ್ದುಗೊಳಿಸಿದೆ.
ಕೃಷ್ಣಪ್ಪ ಎಂಬುವರು ಶಿರಾ ತಾಲೂಕಿನ ಪಟ್ಟನಾಯಕನಹಳ್ಳಿಯಲ್ಲಿ ಮಠಕ್ಕೆ ಸೇರಿದ ಆಸ್ತಿಯನ್ನು ಸ್ವಾಮೀಜಿ ಅಕ್ರಮವಾಗಿ ತಮ್ಮ ಹೆಸರಿಗೆ ಮಾಡಿಸಿಕೊಂಡಿದ್ದಾರೆ. ಅವರು ವಿಲ್ ರದ್ದುಪಡಿಸಿದ ಕೋರ್ಟ್ ಆದೇಶ ಮುಚ್ಚಿಟ್ಟು ತಮ್ಮ ಹೆಸರಿಗೆ ಮಠದ ಖಾತಾ ಮಾಡಿಸಿಕೊಂಡಿದ್ದು, ಅವರ ವಿರುದ್ಧ ಕ್ರಿಮಿನಲ್ ಕ್ರಮ ಜರುಗಿಸಬೇಕು ಎಂದು ಸ್ಥಳೀಯ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದಾರೆ. (ಇದನ್ನೂ ಓದಿ: ಬಿಟ್ ಕಾಯಿನ್ ಎಟಿಎಂ ಸ್ಥಾಪಿಸಿದವರ ವಿರುದ್ಧದ ಕ್ರಿಮಿನಲ್ ಕೇಸ್ ಹೈಕೋರ್ಟ್ನಿಂದ ರದ್ದು)
ನಂಜಾವಧೂತ ಸ್ವಾಮೀಜಿ ವಿರುದ್ಧದ ಪ್ರಕರಣ ರದ್ದುಪಡಿಸಲು ನಿರಾಕರಿಸಿದ ಹೈಕೋರ್ಟ್ - ನಂಜಾವಧೂತ ಸ್ವಾಮೀಜಿ ಪ್ರಕರಣ