ETV Bharat / city

ಅಕ್ರಮವಾಗಿ ಗಡಿ ಪ್ರವೇಶಿಸಿದ್ದ 15 ಇರಾನಿ ಮೀನುಗಾರರ ಬಿಡುಗಡೆಗೊಳಿಸಿದ ಹೈಕೋರ್ಟ್ - ನ್ಯಾಯಮೂರ್ತಿ ಸೂರಜ್ ಗೋಂವಿಂದರಾಜ್

ದೇಶದ ಜಲ ಗಡಿ ರೇಖೆ ದಾಟಿ ಬಂದು ಲಕ್ಷದ್ವೀಪದ ಬಳಿ ಮೀನುಗಾರಿಕೆ ಮಾಡುತ್ತಿದ್ದ ಇರಾನ್ ದೇಶದ 15 ಮೀನುಗಾರರನ್ನು 2019ರ ಅಕ್ಟೋಬರ್ 21ರಂದು ನೌಕಾಪಡೆ ವಶಕ್ಕೆ ಪಡೆದುಕೊಂಡಿತ್ತು. ಬಂಧನಕ್ಕೆ ಒಳಗಾಗಿದ್ದ 15 ಮಂದಿ ಇರಾನಿ ಪ್ರಜೆಗಳ ವಿರುದ್ಧ ದಾಖಲಿಸಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿ ಆದೇಶಿಸಿದೆ.

High Court released 15 Iranian citizens
15 ಮಂದಿ ಇರಾನಿ ಪ್ರಜೆಗಳ ಬಿಡುಗಡೆಗೊಳಿಸಿದ ಹೈಕೋರ್ಟ್
author img

By

Published : Jan 8, 2021, 5:26 PM IST

ಬೆಂಗಳೂರು: ದೇಶದ ಜಲ ಗಡಿಯೊಳಗೆ ಅಕ್ರಮವಾಗಿ ಪ್ರವೇಶಿಸಿದ ಆರೋಪದಡಿ ಬಂಧನಕ್ಕೆ ಒಳಗಾಗಿದ್ದ 15 ಮಂದಿ ಇರಾನಿ ಪ್ರಜೆಗಳ ವಿರುದ್ಧ ದಾಖಲಿಸಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿದೆ.

ಪ್ರಕರಣ ರದ್ದುಪಡಿಸುವಂತೆ ಕೋರಿ ಅಬೂಬಕರ್ ಅನ್ಸಾರಿ ಮಿಯಾ, ಮೂಸಾ ದೆಹದಾನಿ ಸೇರಿ 15 ಮಂದಿ ಇರಾನಿ ಪ್ರಜೆಗಳು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಸೂರಜ್ ಗೋಂವಿಂದರಾಜ್ ಅವರಿದ್ದ ಏಕಸದಸ್ಯ ಪೀಠ ವಿಚಾರಣೆ ನಡೆಸಿತು. ಬಳಿಕ ಅರ್ಜಿಗಳನ್ನು ಭಾಗಶ: ಮಾನ್ಯ ಮಾಡಿ ಬಂಧಿತರ ವಿರುದ್ಧದ ಪ್ರಕರಣವನ್ನು ರದ್ದುಪಡಿಸಿತು.

ದೇಶದ ಜಲ ಗಡಿ ರೇಖೆ ದಾಟಿ ಬಂದು ಲಕ್ಷದ್ವೀಪದ ಬಳಿ ಮೀನುಗಾರಿಕೆ ಮಾಡುತ್ತಿದ್ದ ಇರಾನ್ ದೇಶದ 15 ಮೀನುಗಾರರನ್ನು 2019ರ ಅಕ್ಟೋಬರ್ 21ರಂದು ನೌಕಾಪಡೆ ವಶಕ್ಕೆ ಪಡೆದುಕೊಂಡಿತ್ತು. ಈ ಸಂಬಂಧ ಕೋಸ್ಟ್‌ ಗಾರ್ಡ್ ಡೆಪ್ಯೂಟಿ ಕಮಾಂಡೆಂಟ್ ಹಾಗೂ ಬೋರ್ಡಿಂಗ್ ಅಧಿಕಾರಿ ಕುಲದೀಪ್ ಶರ್ಮಾ ನೀಡಿದ ದೂರಿನ ಮೇರೆಗೆ ಕರಾವಳಿ ಕಾವಲು ಪಡೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.

ಮೀನುಗಾರರಾದ ಅಬೂಬಕರ್ ಅನ್ಸಾರಿ ಮಿಯಾ, ಮೂಸಾ ದೆಹದಾನಿ, ಅಜಂ ಅನ್ಸಾರಿ, ಶಿದ್ ಬಾಚೂ, ಅಬ್ದುಲ್ ಮಜೀದ್, ಮಜೀದ್ ರೆಹಮಾನ್ ದಾವೂದ್, ಮಹಮ್ಮದ್ ಇಸಾಕ್, ಕರೀಂ ಬಕ್ಸ್ ದೂರ್ಜಾದೆ, ಮಹಮ್ಮದ್ ಬಲೂಚ್, ಬಮನ್, ಅಬ್ದುಲ್ ಗನಿ ಬಾರ್ಪೂ, ನಸೀರ್ ಭದ್ರುಚ್, ಅನ್ವರ್ ಬಲೂಚ್ ನಭೀ ಬಕ್ಷ ಮತ್ತು ಯೂಸುಫ್ ಜಹಾನಿ ಅವರನ್ನು ಬಂಧಿಸಲಾಗಿತ್ತು. ಇವರ ವಿರುದ್ಧ ಮಂಗಳೂರಿನ 3ನೇ ಜೆಎಂಎಫ್‌ಸಿ ಕೋರ್ಟ್‌ನಲ್ಲಿ ವಿಚಾರಣೆ ನಡೆದಿತ್ತು. ಕೊರೊನಾ ಹಿನ್ನೆಲೆಯಲ್ಲಿ ಎಲ್ಲರನ್ನೂ ಬೆಂಗಳೂರು ಕಾರಾಗೃಹಕ್ಕೆ ವರ್ಗಾಯಿಸಲಾಗಿತ್ತು.

ಬಂಧನದ ಬಳಿಕ ಮೀನುಗಾರರು ತಮ್ಮ ವಿರುದ್ಧದ ಪ್ರಕರಣವನ್ನು ರದ್ದುಪಡಿಸಿ ಬಿಡುಗಡೆ ಮಾಡುವಂತೆ ಕೋರಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿದಾರರ ಪರ ವಾದ ಮಂಡಿಸಿದ್ದ ವಕೀಲರು, ಮೀನುಗಾರರು ದೇಶದ ಜಲ ಗಡಿಯೊಳಗೆ ಅರಿವಿಲ್ಲದೇ ಪ್ರವೇಶಿಸಿದ್ದಾರೆ. ಉದ್ದೇಶಪೂರ್ವಕವಾಗಿ ಅಥವಾ ದುರುದ್ದೇಶದಿಂದ ಬಂದಿಲ್ಲವಾದ್ದರಿಂದ ಮೀನುಗಾರರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿರುವುದು ಸರಿಯಲ್ಲ. ಭಾರತದ ಮೀನುಗಾರರು ಕೂಡ ಹಲವು ಬಾರಿ ವಿದೇಶಿ ಜಲ ಗಡಿ ಪ್ರವೇಶಿದ್ದಾರೆ.

ಈ ಸಂದರ್ಭಗಳಲ್ಲಿ ಆ ದೇಶಗಳು ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಿದ ನಿದರ್ಶನಗಳು ವಿರಳ. ಆದ್ದರಿಂದ ಇರಾನಿ ದೇಶದ ಮೀನುಗಾರರ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದುಪಡಿಸಬೇಕು ಎಂದು ಮನವಿ ಮಾಡಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.