ಬೆಂಗಳೂರು : ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪಕ್ಕೆ ಸಿಲುಕಿರುವ ಉಪನ್ಯಾಸಕನಿಗೆ ನೀಡಿದ್ದ ಜಾಮೀನನ್ನು ಹೈಕೋರ್ಟ್ ರದ್ದುಪಡಿಸಿ ಆದೇಶಿಸಿದೆ. ಸಂತ್ರಸ್ತೆಯ ಪೋಷಕರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಚ್.ಪಿ ಸಂದೇಶ್ ಅವರಿದ್ಧ ಪೀಠ ಆರೋಪಿ ಉಪನ್ಯಾಸಕ ಗುರುರಾಜ್ಗೆ ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯ ನೀಡಿದ್ದ ಜಾಮೀನನ್ನು ರದ್ದುಪಡಿಸಿ ಆದೇಶಿಸಿದೆ.
2018ರಲ್ಲಿ ಸುಬ್ರಹ್ಮಣ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅತ್ಯಾಚಾರವೆಸಗಿ ನಗ್ನ ಫೋಟೋ ಸೆರೆ ಹಿಡಿದಿದ್ದ ಆರೋಪದ ಮೇರೆಗೆ ಸಂತ್ರಸ್ತ ಬಾಲಕಿಯ ಪೋಷಕರು 2021ರಲ್ಲಿ ದೂರು ದಾಖಲಿಸಿದ್ದರು. ಎಫ್ಐಆರ್ ದಾಖಲಿಸಿದ್ದ ಪೊಲೀಸರು ಆರೋಪಿ ಉಪನ್ಯಾಸಕನನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು.
ಬಂಧನಕ್ಕೆ ಒಳಗಾದ ಎರಡೇ ದಿನದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆರೋಪಿ ಉಪನ್ಯಾಸಕ ಗುರುರಾಜ್ಗೆ ಜಾಮೀನು ನೀಡಿ ಆದೇಶಿಸಿತ್ತು. ಈ ಆದೇಶ ಪ್ರಶ್ನಿಸಿ ಸಂತ್ರಸ್ತ ಬಾಲಕಿಯ ಪೋಷಕರು ಆರೋಪಿಗೆ ನೀಡಿರುವ ಜಾಮೀನು ರದ್ದುಪಡಿಸುವಂತೆ ಕೋರಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.
ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಆರೋಪಿ ಎಲ್. ಗುರುರಾಜ್ ಅವರಿಗೆ ವಿಚಾರಣಾ ನ್ಯಾಯಾಲಯ ನೀಡಿದ್ದ ಜಾಮೀನು ರದ್ದುಗೊಳಿಸಿ ಆದೇಶಿಸಿದೆ.
ಇದನ್ನೂ ಓದಿ: 5 ವರ್ಷದ ಮಕ್ಕಳಿಗೆ ಮಾಸ್ಕ್ ಬೇಕಿಲ್ಲ, ಸ್ಟಿರಾಯ್ಡ್ ಬಳಕೆ ಕಡಿತಗೊಳಿಸಿ.. ಕೇಂದ್ರದಿಂದ ಕೊರೊನಾ ಮಾರ್ಗಸೂಚಿ ಪರಿಷ್ಕರಣೆ