ETV Bharat / city

ಮಾದಕ ವಸ್ತು ತಡೆ ಕಾಯ್ದೆಯಡಿ ಜಪ್ತಿಯಾದ ವಾಹನಗಳ ಹಿಂದಿರುಗಿಸುವಿಕೆ: ಹೈಕೋರ್ಟ್‌ ಹೇಳಿದ್ದೇನು?

ಮಾದಕ ವಸ್ತುಗಳ ಸಾಗಣೆಗೆ ಬಳಸಿದ ಆರೋಪದಡಿ ಜಪ್ತಿ ಮಾಡಿದ ವಾಹನಗಳನ್ನು ವಾರಸುದಾರರಿಗೆ ಹಿಂದಿರುಗಿಸುವ ಅಧಿಕಾರವನ್ನು ಮ್ಯಾಜಿಸ್ಟ್ರೇಟ್‌ ಅಥವಾ ವಿಶೇಷ ನ್ಯಾಯಾಲಯಗಳು ಹೊಂದಿವೆ ಎಂದು ಹೈಕೋರ್ಟ್‌ ಹೇಳಿದೆ.

ಹೈಕೋರ್ಟ್
ಹೈಕೋರ್ಟ್
author img

By

Published : May 19, 2022, 6:59 AM IST

ಬೆಂಗಳೂರು: ಮಾದಕ ವಸ್ತುಗಳ ನಿಯಂತ್ರಣ ಕಾಯ್ದೆ (ಎನ್‌ಡಿಪಿಎಸ್‌) ಅಡಿ ಜಪ್ತಿ ಮಾಡಿದ ವಾಹನಗಳನ್ನು ಅವುಗಳ ಮಾಲೀಕರಿಗೆ ಹಿಂದಿರುಗಿಸುವ ಅಧಿಕಾರವನ್ನು ಮ್ಯಾಜಿಸ್ಟ್ರೇಟ್‌ ಅಥವಾ ವಿಶೇಷ ನ್ಯಾಯಾಲಯಗಳು ಹೊಂದಿವೆ ಎಂದು ಹೈಕೋರ್ಟ್‌ ತೀರ್ಪು ನೀಡಿದೆ.

ನಗರದ ಬನಶಂಕರಿ ನಿವಾಸಿ ಜಿ. ಶ್ರೀಕೃಷ್ಣ ಎಂಬುವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ.ಬಿ.ವೀರಪ್ಪ ಹಾಗೂ ನ್ಯಾ.ಎಸ್.ರಾಚಯ್ಯ ಅವರಿದ್ದ ವಿಭಾಗೀಯ ಪೀಠ ಈ ತೀರ್ಪು ಪ್ರಕಟಿಸಿತು. ಪ್ರಕರಣದಲ್ಲಿ ಅರ್ಜಿದಾರರ ಪರ ವಾದ ಮಂಡಿಸಿದ್ದ ಹಿರಿಯ ವಕೀಲ ಸಂದೇಶ್‌ ಚೌಟ ಮತ್ತು ಎಸ್‌.ಸುನಿಲ್‌ ಕುಮಾರ್‌ ಇಂತಹ ಪ್ರಕರಣಗಳಲ್ಲಿ ಪೊಲೀಸರಿಗೆ ವಾಹನಗಳನ್ನು ಬಿಡುಗಡೆಗೊಳಿಸಲು ನೀಡಿರುವ ಅಧಿಕಾರ ಭ್ರಷ್ಟಾಚಾರಕ್ಕೆ ನಾಂದಿ ಹಾಡುತ್ತದೆ ಎಂದು ಆಕ್ಷೇಪಿಸಿದ್ದರು.

ಅಲ್ಲದೇ, ಮಾದಕ ವಸ್ತುಗಳ ಸಾಗಣೆಗೆ ಬಳಸಿದ ಆರೋಪದಡಿ ಜಪ್ತಿ ಮಾಡಿದ ವಾಹನಗಳನ್ನು ವಾರಸುದಾರರಿಗೆ ಮಧ್ಯಂತರ ಅವಧಿಯಲ್ಲಿ ಹಿಂದಿರುಗಿಸುವ ಬಗ್ಗೆ ಕೇಂದ್ರದ ಅಧಿಸೂಚನೆಯಲ್ಲಿ ಯಾವುದೇ ವಿವರವಿಲ್ಲ. ಇಂತಹ ವಾಹನಗಳನ್ನು ಬಿಡುಗಡೆ ಮಾಡುವ ಅಧಿಕಾರ ವಿಚಾರಣಾ ನ್ಯಾಯಾಲಯಗಳಿಗೆ ಇದೆ ಎಂದು ದೇಶದ 18 ಹೈಕೋರ್ಟ್‌ಗಳು ತೀರ್ಪು ನೀಡಿವೆ ಎಂದಿದ್ದರು. ಅರ್ಜಿದಾರರ ವಾದ ಪರಿಗಣಿಸಿರುವ ವಿಭಾಗೀಯ ಪೀಠ ಮ್ಯಾಜಿಸ್ಟ್ರೇಟ್ ಅಥವಾ ವಿಶೇಷ ನ್ಯಾಯಾಲಯಗಳಿಗೆ ಈ ಅಧಿಕಾರವಿದೆ ಎಂಬ ವಾದವನ್ನು ಪುರಸ್ಕರಿಸಿದೆ.

ಮಾದಕ ವಸ್ತುಗಳ ಸಾಗಣೆ ವೇಳೆ ಜಪ್ತಿ ಮಾಡಿದ ವಾಹನಗಳನ್ನು ಅವುಗಳ ವಾರಸುದಾರರಿಗೆ ಬಿಡುಗಡೆ ಮಾಡುವ ಕುರಿತಂತೆ ಹೈಕೋರ್ಟ್ ಏಕಸದಸ್ಯ ಪೀಠಗಳು ಭಿನ್ನ ತೀರ್ಪು ನೀಡಿದ್ದವು. ನ್ಯಾ.ಜಾನ್ ಮೈಕಲ್ ಕುನ್ಹಾ ಅವರಿದ್ದ ಪೀಠ ವಾಹನಳನ್ನು ವಾರಸುದಾರರಿಗೆ ಬಿಡುಗಡೆ ಮಾಡುವ ಅಧಿಕಾರ ವಿಚಾರಣಾ ನ್ಯಾಯಾಲಯಕ್ಕೆ ಇದೆ ಎಂದಿತ್ತು. ಮತ್ತೊಂದು ಪ್ರಕರಣದಲ್ಲಿ ನ್ಯಾ.ಸೂರಜ್‌ ಗೋವಿಂದರಾಜು ಅವರಿದ್ದ ಪೀಠ, ವಾಹನ ಬಿಡುಗಡೆ ಮಾಡುವ ಅಧಿಕಾರ ಪೊಲೀಸ್‌ ನೇತೃತ್ವದ ವಿಲೇವಾರಿ ಸಮಿತಿಗೆ ಇದೆ ಎಂದು ತೀರ್ಪು ನೀಡಿತ್ತು. ಈ ವಿಭಿನ್ನ ನಿಲುವುಗಳ ಕುರಿತ ಗೊಂದಲ ನಿವಾರಿಸಲು ವಿಭಾಗೀಯ ಪೀಠ ರಚಿಸಲಾಗಿತ್ತು.

ಇದನ್ನೂ ಓದಿ: ಮ್ಯಾಜಿಸ್ಟ್ರೇಟ್ ದೂರು ವಿಚಾರಣೆಗೆ ಪರಿಗಣಿಸಿದಾಗ ಪೊಲೀಸರು ತನಿಖೆ ನಿರಾಕರಿಸುವಂತಿಲ್ಲ: ಹೈಕೋರ್ಟ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.