ETV Bharat / city

ರಾಷ್ಟ್ರೀಯ ತುರ್ತು ಸಹಾಯವಾಣಿಯಲ್ಲಿ ಲೋಪ : ಸರ್ಕಾರದ ಪ್ರತಿಕ್ರಿಯೆ ಕೇಳಿದ ಹೈಕೋರ್ಟ್ - ಸರ್ಕಾರದ ಪ್ರತಿಕ್ರಿಯೆ ಕೇಳಿದ ಹೈಕೋರ್ಟ್

ಅರ್ಜಿದಾರರು ಸಂಕಷ್ಟದಲ್ಲಿರುವ ವ್ಯಕ್ತಿಗಳು ರಾಷ್ಟ್ರೀಯ ತುರ್ತು ಸಹಾಯವಾಣಿ 112ಕ್ಕೆ ಕರೆ ಮಾಡಿದಾಗ ಅದನ್ನು ಸ್ವೀಕರಿಸಲು ಸಾಕಷ್ಟು ವಿಳಂಬವಾಗುತ್ತಿದೆ. ಕರೆ ಮಾಡಿದ ಬಳಿಕವೂ ಹಲವು ನಿಮಿಷಗಳ ಕಾಲ ಕರೆ ಕಾಯ್ದಿರಿಸಲಾಗುತ್ತದೆ. ಇದರಿಂದಾಗಿ ದೂರು ದಾಖಲಿಸಲು ವಿಳಂಬವಾಗುತ್ತಿದೆ. ತುರ್ತು ಸಂದರ್ಭಗಳಲ್ಲಿ ಅಗತ್ಯ ನೆರವು ಲಭ್ಯವಾಗುತ್ತಿಲ್ಲ ಎಂದು ದೂರಿದ್ದಾರೆ..

ರಾಷ್ಟ್ರೀಯ ತುರ್ತು ಸಹಾಯವಾಣಿಯಲ್ಲಿ ಲೋಪ
ರಾಷ್ಟ್ರೀಯ ತುರ್ತು ಸಹಾಯವಾಣಿಯಲ್ಲಿ ಲೋಪ
author img

By

Published : Apr 5, 2022, 4:08 PM IST

ಬೆಂಗಳೂರು : ತುರ್ತು ಸಂದರ್ಭಗಳಲ್ಲಿ ನೆರವು ನೀಡಲು ಸರ್ಕಾರ ರೂಪಿಸಿರುವ ಇಂಟರಾಕ್ಟಿವ್ ವಾಯ್ಸ್ ರೆಸ್ಪಾನ್ಸ್ (ಐವಿಆರ್) ವ್ಯವಸ್ಥೆ ಅಥವಾ (112) ರಾಷ್ಟ್ರೀಯ ತುರ್ತು ಸಹಾಯವಾಣಿ ಸಂಖ್ಯೆ ಸಂಪರ್ಕಿಸಲು ವಿಳಂಬವಾಗುತ್ತಿದೆ ಎಂದು ಆಕ್ಷೇಪಿಸಿ ಸಲ್ಲಿರುವ ಅರ್ಜಿ ಸಂಬಂಧ ಪ್ರತಿಕ್ರಿಯೆ ನೀಡುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.

ಬೆಂಗಳೂರಿನ ನಾಗದೇವನಹಳ್ಳಿ ನಿವಾಸಿ ಎನ್‌ಟಿ ಅರುಣ್ ಕುಮಾರ್ ಎಂಬುವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಹಾಗೂ ನ್ಯಾಯಮೂರ್ತಿ ಎಸ್.ಆರ್ ಕೃಷ್ಣಕುಮಾರ್ ಅವರಿದ್ಧ ವಿಭಾಗೀಯ ಪೀಠ ರಾಜ್ಯ ಸರ್ಕಾರದ ಪ್ರತಿಕ್ರಿಯೆ ಕೇಳಿತು.

ಅರ್ಜಿದಾರರು ಸಂಕಷ್ಟದಲ್ಲಿರುವ ವ್ಯಕ್ತಿಗಳು ರಾಷ್ಟ್ರೀಯ ತುರ್ತು ಸಹಾಯವಾಣಿ 112ಕ್ಕೆ ಕರೆ ಮಾಡಿದಾಗ ಅದನ್ನು ಸ್ವೀಕರಿಸಲು ಸಾಕಷ್ಟು ವಿಳಂಬವಾಗುತ್ತಿದೆ. ಕರೆ ಮಾಡಿದ ಬಳಿಕವೂ ಹಲವು ನಿಮಿಷಗಳ ಕಾಲ ಕರೆ ಕಾಯ್ದಿರಿಸಲಾಗುತ್ತದೆ. ಇದರಿಂದಾಗಿ ದೂರು ದಾಖಲಿಸಲು ವಿಳಂಬವಾಗುತ್ತಿದೆ. ತುರ್ತು ಸಂದರ್ಭಗಳಲ್ಲಿ ಅಗತ್ಯ ನೆರವು ಲಭ್ಯವಾಗುತ್ತಿಲ್ಲ ಎಂದು ದೂರಿದ್ದಾರೆ.

ಅಲ್ಲದೇ, ಸಹಾಯವಾಣಿ ಸಂಪರ್ಕಿಸಲು ಕಷ್ಟವಾಗುತ್ತಿದೆ. ಲೋಪ ಸರಿಪಡಿಸಲು ಸರ್ಕಾರ ಹಾಗೂ ಪೊಲೀಸ್ ಇಲಾಖೆಗೆ ನಿರ್ದೇಶಿಸಬೇಕು ಎಂದು ಅರ್ಜಿದಾರರು ಮನವಿ ಮಾಡಿದ್ದಾರೆ. ಈ ಕುರಿತಂತೆ ರಾಜ್ಯ ಸರ್ಕಾರದ ಪ್ರತಿಕ್ರಿಯೆ ಕೇಳಿರುವ ಪೀಠ, ಏಪ್ರಿಲ್ 11ಕ್ಕೆ ವಿಚಾರಣೆ ಮುಂದೂಡಿದೆ.

ಇದನ್ನೂ ಓದಿ: ಬೆಂಗಳೂರು : ಧ್ವನಿವರ್ಧಕ ವಿಚಾರವಾಗಿ ಮಸೀದಿಗಳಿಗೇ ಅತಿ ಹೆಚ್ಚು ನೋಟಿಸ್

ETV Bharat Logo

Copyright © 2025 Ushodaya Enterprises Pvt. Ltd., All Rights Reserved.