ಬೆಂಗಳೂರು: ಉಡುಪಿಯ ಪೇಜಾವರ ಶ್ರೀಗಳ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆಂಬ ಆರೋಪ ಸಂಬಂಧ ಬಸವನಗುಡಿ ಠಾಣೆಯಲ್ಲಿ ನಾದಬ್ರಹ್ಮ ಹಂಸಲೇಖ ವಿರುದ್ಧ ದಾಖಲಾಗಿದ್ದ ಪ್ರಕರಣಕ್ಕೆ ಹೈಕೋರ್ಟ್ ತಡೆ ನೀಡಿದೆ.
ಬಸವನಗುಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದ ಸಂಬಂಧ ಗಂಗರಾಜು ಹಂಸಲೇಖ ಅವರು ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿ ಪ್ರಕರಣ ರದ್ದು ಮಾಡುವಂತೆ ಮನವಿ ಮಾಡಿದ್ದರು. ಇಂದು ಅರ್ಜಿ ವಿಚಾರಣೆ ನಡೆಸಿದ ಕೋರ್ಟ್, ಡಾ. ಮುರಳೀಧರ್ ದೂರಿನಡಿ ದಾಖಲಾಗಿದ್ದ ಪ್ರಕರಣಕ್ಕೆ ತಡೆ ನೀಡಿದೆ.
ಮತ್ತೊಬ್ಬ ಅರ್ಜಿದಾರ ಎಸ್.ಎನ್. ಅರವಿಂದ ದೂರಿನ ಸಂಬಂಧ ಹಾಗೂ ಪ್ರತಿವಾದಿಗಳಿಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ವಕೀಲ ಕಾಶಿನಾಥ್, ಸಿ ಎಸ್ ದ್ವಾರಕನಾಥ್ ಹಂಸಲೇಖ ಅವರ ಪರ ವಾದ ಮಂಡಿಸಿದ್ರು.
ಇದನ್ನೂ ಓದಿ: ಪೇಜಾವರ ಶ್ರೀಗಳ ವಿರುದ್ಧ ಅವಹೇಳಕಾರಿ ವಿಚಾರ: ವಿಚಾರಣೆಗೆ ಆಗಮಿಸಿದ ಹಂಸಲೇಖ, ಸ್ಥಳದಲ್ಲಿ ಗದ್ದಲ