ETV Bharat / city

ಕಚೇರಿಯಲ್ಲಿ ಕುಳಿತುಕೊಳ್ಳದೆ, ಸ್ಥಳಕ್ಕೆ ತೆರಳಿ ಸರ್ವೆ ನಡೆಸಿ : ಬಿಬಿಎಂಪಿಗೆ ಹೈಕೋರ್ಟ್ ತಾಕೀತು - ರಾಜ್ಯದಲ್ಲಿರುವ ಅನಧಿಕೃತ ಧಾರ್ಮಿಕ ಕಟ್ಟಡ

ಪಾಲಿಕೆ ವ್ಯಾಪ್ತಿಯಲ್ಲಿರುವ ಪ್ರತಿ ಧಾರ್ಮಿಕ ಕಟ್ಟಡಕ್ಕೆ ಅಧಿಕಾರಿಗಳು ಖುದ್ದು ಭೇಟಿ ಕೊಟ್ಟು ಸ್ಥಳ ಪರಿಶೀಲನೆ ನಡೆಸದಿದ್ದರೆ ಸಮೀಕ್ಷೆ ನಿಖರ ಹಾಗೂ ಪೂರ್ಣ ಆಗುವುದಿಲ್ಲ. ಆದ್ದರಿಂದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ಕೊಟ್ಟು ಸರ್ವೆ ನಡೆಸಬೇಕು. ಈ ಕುರಿತ ವರದಿಯನ್ನು ಫೆ.26ರೊಳಗೆ ವಿವರವಾದ ಪ್ರಮಾಣಪತ್ರದ ಜೊತೆ ಸಲ್ಲಿಸಬೇಕು..

high-court-tell-the-bbmp
ಬಿಬಿಎಂಪಿಗೆ ಹೈಕೋರ್ಟ್ ತಾಕೀತು
author img

By

Published : Jan 29, 2021, 3:31 PM IST

ಬೆಂಗಳೂರು : ನಗರದಲ್ಲಿರುವ ಅನಧಿಕೃತ ಧಾರ್ಮಿಕ ಕಟ್ಟಡಗಳ ತೆರವು ವಿಚಾರಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಸಲ್ಲಿಸಿರುವ ಸರ್ವೆ ವರದಿಗೆ ಆಕ್ಷೇಪ ವ್ಯಕ್ತಪಡಿಸಿರುವ ಹೈಕೋರ್ಟ್, ಅಧಿಕಾರಿಗಳು ಕಚೇರಿಯಲ್ಲಿ ಕುಳಿತು ಕೆಲಸ ಮಾಡುವುದಲ್ಲ. ಬದಲಿಗೆ ಸ್ಥಳ ಪರಿಶೀಲಿಸಬೇಕು ಎಂದು ತಾಕೀತು ಮಾಡಿದೆ.

ಓದಿ: ಸದನದಲ್ಲಿ ಗದ್ದಲ ಪ್ರಕರಣ: ಮಧ್ಯಂತರ ವರದಿಯಲ್ಲೇನಿದೆ ಗೊತ್ತಾ?

ರಾಜ್ಯದಲ್ಲಿರುವ ಅನಧಿಕೃತ ಧಾರ್ಮಿಕ ಕಟ್ಟಡಗಳನ್ನು ತೆರವು ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ದಾಖಲಿಸಿಕೊಂಡಿರುವ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್ ಓಕ ನೇತೃತ್ವದ ವಿಭಾಗೀಯ ಪೀಠ ಇಂದು ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ನ್ಯಾಯಾಲಯದ ನಿರ್ದೇಶನದಂತೆ ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾಗಿ ಪೀಠಕ್ಕೆ ವಿವರಣೆ ನೀಡಿದರು. ಪಾಲಿಕೆ ಅಧಿಕಾರಿಗಳು ಇದೇ ಜನವರಿ 21 ರಿಂದ 23ರ ನಡುವೆ ಸರ್ವೆ ನಡೆಸಿ, ನಗರದಲ್ಲಿ 1588 ಧಾರ್ಮಿಕ ಕಟ್ಟಡಗಳನ್ನು ಗುರುತಿಸಿದ್ದಾರೆ. ಇವುಗಳಲ್ಲಿ 1533 ಕಟ್ಟಡಗಳನ್ನು 2009ಕ್ಕಿಂತ ಮುಂಚೆ ನಿರ್ಮಿಸಲಾಗಿದೆ ಎಂದರು.

ಪಾಲಿಕೆ ಸಲ್ಲಿಸಿದ್ದ ವರದಿ ಹಾಗೂ ಆಯುಕ್ತರು ನೀಡಿದ ವಿವರಣೆ ತೃಪ್ತಿಕರವಾಗಿಲ್ಲದ ಹಿನ್ನೆಲೆ, ಪೀಠ ಆಯುಕ್ತರನ್ನು ಪ್ರಶ್ನಿಸಿ, ಸರ್ವೆ ಕಾರ್ಯವನ್ನು ಹೇಗೆ ನಡೆಸಿದ್ದೀರಿ..? ಯಾವ ಕ್ರಮಗಳನ್ನು ಅನುಸರಿಸಿದ್ದೀರಿ..?, ಅಧಿಕಾರಿಗಳಿಗೆ ಯಾವ ಕಾರಣಕ್ಕಾಗಿ ಸರ್ವೆ ನಡೆಸಲಾಗುತ್ತಿದೆ ಎಂಬ ಕುರಿತು ತಿಳುವಳಿಕೆ ನೀಡಿದ್ದೀರಾ.. ಈ ಸಂಬಂಧ ಯಾವುದಾದರೂ ಆದೇಶ ಹೊರಡಿಸಿದ್ದೀರಾ ಎಂದು ಪ್ರಶ್ನಿಸಿತು. ಇದಕ್ಕೆ ಸೂಕ್ತ ಉತ್ತರ ನೀಡಲು ವಿಫಲರಾದ ಆಯುಕ್ತರು ನಿಖರ ವರದಿ ಸಲ್ಲಿಸಲು 2 ವಾರ ಕಾಲಾವಕಾಶ ನೀಡಬೇಕು ಎಂದು ಮನವಿ ಮಾಡಿದರು.

ಇದ್ದಕ್ಕೆ ಬೇಸರ ವ್ಯಕ್ತಪಡಿಸಿದ ಪೀಠ, ಅಧಿಕಾರಿಗಳಿಗೆ ಸುಪ್ರೀಂಕೋರ್ಟ್ ಹಾಗೂ ಹೈಕೋರ್ಟ್ ನೀಡಿರುವ ತೀರ್ಪು, ನಿರ್ದೇಶನಗಳೇ ಅರ್ಥವಾಗಿಲ್ಲ. ಪಾಲಿಕೆ ಅಧಿಕಾರಿಗಳು ಕಚೇರಿಯಲ್ಲಿ ಕುಳಿತು ಸರ್ವೆ ಮಾಡುವುದಲ್ಲ. ಅನಧಿಕೃತ ಧಾರ್ಮಿಕ ಕಟ್ಟಡಗಳನ್ನು ಗುರುತಿಸಲು ಅಧಿಕಾರಿಗಳು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಬೇಕು.

ಪಾಲಿಕೆ ವ್ಯಾಪ್ತಿಯಲ್ಲಿರುವ ಪ್ರತಿ ಧಾರ್ಮಿಕ ಕಟ್ಟಡಕ್ಕೆ ಅಧಿಕಾರಿಗಳು ಖುದ್ದು ಭೇಟಿ ಕೊಟ್ಟು ಸ್ಥಳ ಪರಿಶೀಲನೆ ನಡೆಸದಿದ್ದರೆ ಸಮೀಕ್ಷೆ ನಿಖರ ಹಾಗೂ ಪೂರ್ಣ ಆಗುವುದಿಲ್ಲ. ಆದ್ದರಿಂದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ಕೊಟ್ಟು ಸರ್ವೆ ನಡೆಸಬೇಕು. ಈ ಕುರಿತ ವರದಿಯನ್ನು ಫೆ.26ರೊಳಗೆ ವಿವರವಾದ ಪ್ರಮಾಣಪತ್ರದ ಜೊತೆ ಸಲ್ಲಿಸಬೇಕು ಎಂದು ಆಯುಕ್ತರಿಗೆ ನಿರ್ದೇಶಿಸಿ, ವಿಚಾರಣೆಯನ್ನು ಫೆಬ್ರವರಿ 5ಕ್ಕೆ ಮುಂದೂಡಿತು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.