ETV Bharat / city

ರಾಜಿ ಮೂಲಕ ಪೋಕ್ಸೋ ಪ್ರಕರಣ ಇತ್ಯರ್ಥ ಕೋರಿ ಅರ್ಜಿ ರದ್ದು: ಪರಿಶೀಲನೆಗೆ ಮುಂದಾದ ಹೈಕೋರ್ಟ್

ಪ್ರಕರಣದ ಆರೋಪಿ ಹಾಗೂ ದೂರುದಾರರ ಪುತ್ರಿ ಇಬ್ಬರೂ ಅಪ್ರಾಪ್ತರಾಗಿದ್ದಾರೆ. ಇಬ್ಬರ ನಡುವೆ ಆಪ್ತತೆ ಹುಟ್ಟಿದ ಬಳಿಕ ಪ್ರಕರಣ ದಾಖಲಾಗಿದೆ. ಈಗ ಕಕ್ಷಿದಾರರು ರಾಜಿ ಮೂಲಕ ಪ್ರಕರಣ ಇತ್ಯರ್ಥಪಡಿಸಿಕೊಳ್ಳಲು ನಿರ್ಧರಿಸಿದ್ದು, ಕಾನೂನು ಪ್ರಕ್ರಿಯೆ ಕೈಬಿಡಲು ಕೋರಿದ್ದಾರೆ. ಆದರೆ, ಈ ಬಗ್ಗೆ ಪರಿಶೀಲನೆ ನಡೆಸುವ ಅಗತ್ಯವಿದೆ ಎಂದು ಹೈಕೋರ್ಟ್ ಹೇಳಿದೆ.

High Court
ಹೈಕೋರ್ಟ್
author img

By

Published : Apr 27, 2022, 8:12 AM IST

ಬೆಂಗಳೂರು: ಅಪ್ರಾಪ್ತರ ವಿರುದ್ಧ ಅಪ್ರಾಪ್ತರೇ ಲೈಂಗಿಕ ದೌರ್ಜನ್ಯ ಆರೋಪ ಮಾಡಿದಾಗ ಪೋಕ್ಸೊ ಕಾಯ್ದೆ ಅಡಿ ದಾಖಲಿಸುವ ಪ್ರಕರಣವನ್ನು ಪರಸ್ಪರ ರಾಜಿ ಪರಿಗಣಿಸಿ ರದ್ದುಪಡಿಸಬಹುದೇ ಎಂಬ ಬಗ್ಗೆ ಪರಿಶೀಲನೆ ನಡೆಸುವ ಅಗತ್ಯವಿದೆ ಎಂದು ಹೈಕೋರ್ಟ್ ಹೇಳಿದೆ. ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಅಪ್ರಾಪ್ತ ಪುತ್ರನ ವಿರುದ್ಧ ದಾಖಲಿಸಿರುವ ಪ್ರಕರಣ ರದ್ದು ಕೋರಿ ತಂದೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಎಂ.ನಾಗಪ್ರಸನ್ನ ಅವರಿದ್ದ ಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿದೆ. ಅಲ್ಲದೇ, ಬಾಲಕನ ವಿರುದ್ಧದ ಪ್ರಕರಣದ ತನಿಖೆಗೆ ಮಧ್ಯಂತರ ತಡೆ ನೀಡಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ವಾದ - ಪ್ರತಿವಾದ ಆಲಿಸಿದ ಪೀಠ, ಪ್ರಕರಣದ ಆರೋಪಿ ಹಾಗೂ ದೂರುದಾರರ ಪುತ್ರಿ ಇಬ್ಬರೂ ಅಪ್ರಾಪ್ತರಾಗಿದ್ದಾರೆ. ಇಬ್ಬರ ನಡುವೆ ಆಪ್ತತೆ ಹುಟ್ಟಿದ ಬಳಿಕ ಪ್ರಕರಣ ದಾಖಲಾಗಿದೆ. ಈಗ ಕಕ್ಷಿದಾರರು ರಾಜಿ ಮೂಲಕ ಪ್ರಕರಣ ಇತ್ಯರ್ಥಪಡಿಸಿಕೊಳ್ಳಲು ನಿರ್ಧರಿಸಿದ್ದು, ಕಾನೂನು ಪ್ರಕ್ರಿಯೆ ಕೈಬಿಡಲು ಕೋರಿದ್ದಾರೆ. ಈ ವಿಚಾರವನ್ನು ನ್ಯಾಯಾಲಯ ಪರಿಗಣಿಸುವ ಅವಶ್ಯಕತೆ ಇದ್ದು, ಬೇಸಿಗೆ ರಜೆಯ ಬಳಿಕ ವಿಚಾರಣೆ ನಡೆಸಲಾಗುವುದು ಎಂದು ತಿಳಿಸಿ ಪ್ರಕರಣದ ತನಿಖೆಗೆ ತಡೆಯಾಜ್ಞೆ ನೀಡಿ, ವಿಚಾರಣೆಯನ್ನು ಮೇ 24ಕ್ಕೆ ಮುಂದೂಡಿದೆ.

ವಕೀಲರ ವಾದ: ಅರ್ಜಿದಾರರ ಪರ ವಾದ ಮಂಡಿಸಿದ್ದ ವಕೀಲರು, ತನಿಖೆ ಹೆಸರಲ್ಲಿ ಈಗಾಗಲೇ ಸಾಕಷ್ಟು ಕಿರುಕುಳವಾಗಿದೆ. ಅಪ್ರಾಪ್ತರಿಬ್ಬರ ಭವಿಷ್ಯದ ದೃಷ್ಟಿಯಿಂದ ಹಲವು ಸುತ್ತಿನ ಕೌನ್ಸೆಲಿಂಗ್ ಬಳಿಕ ಪ್ರಕರಣ ಸುಖಾಂತ್ಯಗೊಳಿಸಲು ನಿರ್ಧರಿಸಿದ್ದಾರೆ. ಸಾಂವಿಧಾನಿಕ ಪೀಠಗಳು ರಾಜಿ ಪರಿಗಣಿಸಿ ಹಲವು ಪ್ರಕರಣಗಳಲ್ಲಿ ತನಿಖೆ ರದ್ದುಪಡಿಸಿವೆ. ಆದ್ದರಿಂದ, ತನಿಖಾ ಪ್ರಕ್ರಿಯೆ ಕೈಬಿಡಲು ಆದೇಶಿಸಬೇಕು ಎಂದು ಮನವಿ ಮಾಡಿದ್ದಾರೆ. ಪ್ರಾಸಿಕ್ಯೂಷನ್ ಪರ ವಕೀಲರು 'ಪೋಕ್ಸೋ ಕಾಯ್ದೆಯಡಿ ದಾಖಲಾಗಿರುವ ಅಪರಾಧ ಪ್ರಕರಣವಾದ್ದರಿಂದ, ಇಲ್ಲಿ ಸಂಧಾನಕ್ಕೆ ಅವಕಾಶವಿಲ್ಲ' ಎಂದು ವಾದ ಮಂಡಿಸಿದ್ದಾರೆ.

ಪ್ರಕರಣದ ಹಿನ್ನೆಲೆ: 2022ರ ನವೆಂಬರ್ 21ರಂದು ಕಾಲೇಜಿಗೆ ತೆರಳಿದ್ದ ಮಗಳು ಮನೆಗೆ ವಾಪಸ್ ಬಂದಿಲ್ಲ ಎಂದು ಅಪ್ರಾಪ್ತ ಬಾಲಕಿಯ ತಂದೆ ಪೊಲೀಸರಿಗೆ ದೂರು ನೀಡಿದ್ದರು. ದೂರಿನ ಮೇರೆಗೆ ಪೊಲೀಸರು ಆರೋಪಿ ಮತ್ತು ಸಂತ್ರಸ್ತೆಯ ಮೊಬೈಲ್ ಕರೆ ಬೆನ್ನಟ್ಟಿ ಇಬ್ಬರನ್ನೂ ಪತ್ತೆ ಹಚ್ಚಿದ್ದರು. ಬಳಿಕ, ಆರೋಪಿ ಬಾಲಕನ ವಿರುದ್ಧ ಪೋಕ್ಸೋ ಕಾಯ್ದೆಯ ಸೆಕ್ಷನ್ 5, 6 ಮತ್ತು ಐಪಿಸಿ ಸೆಕ್ಷನ್ 376, 363 ಅಡಿ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದರು. ಇದೀಗ ಎರಡೂ ಕಡೆಯವರು ಪ್ರಕರಣ ಇತ್ಯರ್ಥಪಡಿಸಿಕೊಳ್ಳಲು ಮುಂದಾಗಿದ್ದು, ವಿಚಾರಣೆ ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಇದನ್ನೂ ಓದಿ: ಬುದ್ಧಿಮಾಂದ್ಯ ಮಕ್ಕಳು ಜನಿಸಿದ್ದಕ್ಕೆ ಪತ್ನಿಗೆ ಕಿರುಕುಳ: ಪತಿ, ಅತ್ತೆ, ನಾದಿನಿಗೆ ಹೈಕೋರ್ಟ್ ಶಿಕ್ಷೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.