ETV Bharat / city

ಹಿಜಾಬ್ ನಿರ್ಬಂಧದ ಆದೇಶ ಎತ್ತಿಹಿಡಿದ ಹೈಕೋರ್ಟ್: ನ್ಯಾಯಪೀಠ ಪ್ರಕಟಿಸಿದ ತೀರ್ಪಿನ ಸಾರಾಂಶ ಹೀಗಿದೆ

ಹಿಜಾಬ್ ಪ್ರಕರಣ ಸಂಬಂಧ ಹೈಕೋರ್ಟ್ ಮಹತ್ವದ ತೀರ್ಪು ಪ್ರಕಟಿಸಿದೆ.

High court Verdict on Hijab Row
High court Verdict on Hijab Row
author img

By

Published : Mar 15, 2022, 10:37 AM IST

Updated : Mar 15, 2022, 12:38 PM IST

ಬೆಂಗಳೂರು: ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿರ್ಬಂಧಿಸಿರುವ ಕ್ರಮ ಹಾಗೂ ಸರ್ಕಾರ ಸಮವಸ್ತ್ರ ಸಂಹಿತೆ ನಿಗದಿ ಮಾಡಿದ ಆದೇಶ ರದ್ದುಕೋರಿ ಸಲ್ಲಿಸಿದ್ದ ಅರ್ಜಿಗಳನ್ನು ಹೈಕೋರ್ಟ್ ವಜಾಗೊಳಿಸಿದೆ.

ತರಗತಿಗೆ ಹಿಜಾಬ್ ಧರಿಸಿ ಬಾರದಂತೆ ನಿರ್ಬಂಧಿಸಿರುವ ಕ್ರಮ ಪ್ರಶ್ನಿಸಿ ಉಡುಪಿಯ ಸರ್ಕಾರಿ ಮಹಿಳಾ ಪದವಿಪೂರ್ವ ಕಾಲೇಜು ವಿದ್ಯಾರ್ಥಿನಿ ಸೇರಿದಂತೆ ಇತರ ವಿದ್ಯಾರ್ಥಿನಿಯರು ಹಾಗೂ ಅವರ ಪೋಷಕರು ಅರ್ಜಿ ಸಲ್ಲಿಸಿದ್ದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕು ಪ್ರಮುಖ ವಿವಾದಾಂಶಗಳನ್ನು ಪರಿಗಣನೆಗೆ ತೆಗೆದುಕೊಂಡು ಹೈಕೋರ್ಟ್ ತ್ರಿಸದಸ್ಯ ಪೀಠ ಐತಿಹಾಸಿಕ ತೀರ್ಪು ಪ್ರಕಟಿಸಿದೆ. ತೀರ್ಪಿನಲ್ಲಿ ಅರ್ಜಿದಾರರ ಯಾವ ಹಕ್ಕುಗಳನ್ನು ಕೂಡ ಸರ್ಕಾರದ ಆದೇಶ ಅಥವಾ ಶಿಕ್ಷಣ ಸಂಸ್ಥೆಗಳು ಹಿಜಾಬ್ ನಿರ್ಬಂಧಿಸಿದ ಕ್ರಮ ಉಲ್ಲಂಘಿಸಿಲ್ಲ ಎಂದು ಸ್ಪಷ್ಟಪಡಿಸಿದೆ.

ಮುಖ್ಯನ್ಯಾಯಮೂರ್ತಿ ರಿತುರಾಜ್ ಅವಸ್ಥಿ, ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಹಾಗೂ ನ್ಯಾಯಮೂರ್ತಿ ಖಾಜಿ ಜೈಬುನ್ನೀಸಾ ಮೊಹಿಯುದ್ದೀನ್ ಅವರಿದ್ದ ಪೀಠ ಪ್ರಕಟಿಸಿದ ತೀರ್ಪಿನ ಸಾರಾಂಶ ಹೀಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ನಾವು ನಾಲ್ಕು ಅಂಶಗಳ ಪ್ರಶ್ನೆಗಳನ್ನು ಪರಿಗಣಿಸಿದ್ದೆವು.

1) ಇಸ್ಲಾಂನ ನಂಬಿಕೆಯಂತೆ ಹಿಜಾಬ್ ಅಥವಾ ಸ್ಕಾರ್ಫ್ ಧರಿಸುವುದು ಕಡ್ಡಾಯ ಧಾರ್ಮಿಕ ಆಚರಣೆಯೇ ಹಾಗೂ ಸಂವಿಧಾನದ ವಿಧಿ 25ರ ಅಡಿ ರಕ್ಷಿಸಲ್ಪಟ್ಟಿದೆಯೇ?

ಹಿಜಾಬ್ ಇಸ್ಲಾಂನ ಕಡ್ಡಾಯ ಧಾರ್ಮಿಕ ಆಚರಣೆಯಲ್ಲ. ಇಸ್ಲಾಂ ನಂಬಿಕೆಯಂತೆ ಮುಸ್ಲಿಂ ಮಹಿಳೆಯರು ಹಿಜಾಬ್ ಧರಿಸುವುದು ಕಡ್ಡಾಯ ಧಾರ್ಮಿಕ ಆಚರಣೆಯಲ್ಲ.

2) ಶಿಕ್ಷಣ ಸಂಸ್ಥೆಗಳಲ್ಲಿ ಸಮವಸ್ತ್ರ ನಿಗದಿ ಮಾಡಿರುವುದು ಸಂವಿಧಾನದ ವಿಧಿ 19(1)(ಎ) ಅಡಿ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹಾಗೂ ವಿಧಿ 21ರ ಅಡಿ ನೀಡಲಾಗಿರುವ ಖಾಸಗಿ ಹಕ್ಕನ್ನು ನಿರ್ಬಂಧಿಸಲಿದೆಯೇ?

ನಮ್ಮ ಅಭಿಪ್ರಾಯದಂತೆ ಶಿಕ್ಷಣ ಸಂಸ್ಥೆಗಳಲ್ಲಿ ಸಮವಸ್ತ್ರ ನಿಗದಿ ಮಾಡಲು ಸರ್ಕಾರಕ್ಕೆ ಅಧಿಕಾರವಿದೆ. ಕೆಲವೊಂದು ವಿಚಾರಗಳಲ್ಲಿ ನಿರ್ಬಂಧಗಳನ್ನು ವಿಧಿಸಲು ಸರ್ಕಾರಕ್ಕೆ ಸಾಂವಿಧಾನಿಕ ಹಕ್ಕಿದೆ. ಇದನ್ನು ವಿದ್ಯಾರ್ಥಿಗಳು ಆಕ್ಷೇಪಿಸಲಾಗದು.

3) ರಾಜ್ಯ ಸರ್ಕಾರ 2022ರ ಫೆಬ್ರವರಿ 5ರಂದು ಸಮವಸ್ತ್ರ ಸಂಹಿತೆ ನಿಗದಿಪಡಿಸುವ ಸಂಬಂಧ ಶಿಕ್ಷಣ ಸಂಸ್ಥೆಗಳಿಗೆ ಸೂಚಿಸಿ ಹೊರಡಿಸರುವ ಆದೇಶ ನಿಯಮಬಾಹಿರವೇ ಹಾಗೂ ಇದು ಸಂವಿಧಾನದ ವಿಧಿ 14 ಮತ್ತು 15ನ್ನು ಉಲ್ಲಂಘಿಸಲಿದೆಯೇ?

ಸಮವಸ್ತ್ರ ನಿಗದಿ ಮಾಡುವ ಅಧಿಕಾರ ಸರ್ಕಾರಕ್ಕಿದೆ. ಅದರಂತೆ 2022ರ ಫೆ.5ರ ಸರ್ಕಾರದ ಆದೇಶವನ್ನು ಅಂಸಿಧುಗೊಳಿಸುವ ಯಾವುದೇ ಕಾನೂನಾತ್ಮಕ ಅಂಶಗಳಿಲ್ಲ.

4) ಉಡುಪಿ ಕಾಲೇಜಿನಲ್ಲಿ ಸಮವಸ್ತ್ರ ನಿಗದಿ ಮಾಡಿ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸಿ ಬರದಂತೆ ನಿರ್ಬಂಧಿಸಿರುವ ಕ್ರಮದಲ್ಲಿ ಕಾಲೇಜಿಗೆ ನಿರ್ದೇಶನ ನೀಡುವ ಅಗತ್ಯವಿದೆಯೇ?

ಶಿಕ್ಷಣ ಸಂಸ್ಥೆಗಳ ವಿರುದ್ಧ ವಿಚಾರಣೆ ನಡೆಸುವಂತೆ ಕೋರಿ ಹಾಗೂ ಸಮವಸ್ತ್ರ ಸಂಹಿತೆ ಹೇರದಂತೆ ನಿರ್ದೇಶನ ಕೋರಿರುವ ಮನವಿಯನ್ನು ಪರಿಗಣಿಸಲಾಗದು. ಹೀಗಾಗಿ ಕಾಲೇಜಿನ ವಿರುದ್ಧ ಯಾವುದೇ ನಿರ್ದೇಶನ ನೀಡುವ ಅಗತ್ಯವಿಲ್ಲ.

ಹೀಗೆ ನಾಲ್ಕು ಪ್ರಶ್ನೆಗಳಿಗೂ ಉತ್ತರ ನಕಾರಾತ್ಮಕವಾಗಿ ಕಂಡುಬಂದಿವೆ. ಆದ್ದರಿಂದ ಎಲ್ಲ ಅರ್ಜಿಗಳನ್ನು ವಜಾಗೊಳಿಸುವ ಮೂಲಕ ಇತ್ಯರ್ಥಪಡಿಸಲಾಗುತ್ತಿದೆ ಎಂದು ಹೈಕೋರ್ಟ್ ತೀರ್ಪು ಪ್ರಕಟಿಸಿದೆ.

Last Updated : Mar 15, 2022, 12:38 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.