ETV Bharat / city

13,487 ಕೋಟಿ ಬಂಡವಾಳ ಹೂಡಿಕೆಗೆ ಸಮ್ಮತಿ.. 6 ಸಾವಿರಕ್ಕೂ ಹೆಚ್ಚು ಜನರಿಗೆ ಉದ್ಯೋಗಾವಕಾಶ - ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆ

ರಾಜ್ಯದಲ್ಲಿ ಬಂಡವಾಳ ಹೂಡಲು ಉನ್ನತ ಮಟ್ಟದ ಸಮಿತಿ ಸಮ್ಮತಿಸಿದೆ. ಈ ಅನುಮೋದನೆಯಿಂದ 13,487.11 ಕೋಟಿ ಬಂಡವಾಳ ಹೂಡಿಕೆಯಾಗಲಿದ್ದು, ಅಂದಾಜು 6256 ಜನರಿಗೆ ಉದ್ಯೋಗಾವಕಾಶಗಳು ಲಭ್ಯವಾಗಲಿವೆ.

BSY
BSY
author img

By

Published : May 12, 2021, 6:28 PM IST

ಬೆಂಗಳೂರು: ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಇಂದು ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ 56ನೇ ಸಭೆ ಜರುಗಿತು. ಈ ಸಭೆಯಲ್ಲಿ 9 ಹೊಸ ಯೋಜನೆಗಳಿಗೆ ಹಾಗೂ ಹೆಚ್ಚುವರಿ ಬಂಡವಾಳ ಯೋಜನೆಗೆ ಅನುಮೋದನೆ ನೀಡಲಾಗಿದೆ.

ಈ ಅನುಮೋದನೆಯಿಂದ 13,487.11 ಕೋಟಿ ಬಂಡವಾಳ ಹೂಡಿಕೆಯಾಗಲಿದ್ದು, ಅಂದಾಜು 6256 ಜನರಿಗೆ ಉದ್ಯೋಗಾವಕಾಶ ಲಭ್ಯವಾಗಲಿದೆ.

ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್‌ ಶೆಟ್ಟರ್‌, ಕೃಷಿ ಇಲಾಖೆ ಸಚಿವರಾದ ಬಿ ಸಿ ಪಾಟೀಲ್, ಕಾರ್ಮಿಕ ಇಲಾಖೆ ಸಚಿವರಾದ ಶಿವರಾಂ ಮುಖ್ಯ ಕಾರ್ಯದರ್ಶಿ ರವಿಕುಮಾರ್, ಅಪರ ಮುಖ್ಯ ಕಾರ್ಯದರ್ಶಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ರಾಜ್ ಕುಮಾರ್ ಖತ್ರಿ, ಕೈಗಾರಿಕಾ ಅಭಿವೃದ್ಧಿ ಆಯುಕ್ತೆ ಗುಂಜನ್ ಕೃಷ್ಣ, ಕೆಐಎಡಿಬಿ ಸಿಇಒ ಶಿವಶಂಕರ್, ಕರ್ನಾಟಕ ಉದ್ಯೋಗ ಮಿತ್ರ ಎಂ ಡಿ ರೇವಣ್ಣ ಗೌಡ ಸೇರಿದಂತೆ ಪ್ರಮುಖ ಅಧಿಕಾರಿಗಳು ಪಾಲ್ಗೊಂಡಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.