ETV Bharat / city

'ಲಾಕ್​ಡೌನ್​ ಮುಂದುವರೆಸಿ, ಜೊತೆಗೆ..': ಇಲ್ಲಿವೆ ಪ್ರಧಾನಿಯೊಂದಿಗಿನ ವಿಡಿಯೊ ಸಂವಾದದ ಹೈಲೈಟ್ಸ್​​​​

ಪ್ರಧಾನಿ ಮೋದಿಯೊಂದಿಗೆ ಲಾಕ್​ಡೌನ್​ ವಿಚಾರವಾಗಿ ವಿಡಿಯೊ ಸಂವಾದ ನಡೆಸಿದ ಸಿಎಂ ಬಿಎಸ್​ವೈ ಲಾಕ್​ಡೌನ್​ ಮುಂದುವರೆಸುವಂತೆ ಮನವಿ ಮಾಡಿದ್ದಾರೆ.

video conference
ವಿಡಿಯೋ ಸಂವಾದ
author img

By

Published : May 11, 2020, 8:05 PM IST

Updated : May 11, 2020, 10:03 PM IST

ಬೆಂಗಳೂರು: ರಾಜ್ಯದ ಹಣಕಾಸು ಸ್ಥಿತಿ ಸರಿಯಿಲ್ಲದಿದ್ದರೂ ಯಾವುದೇ ರೀತಿಯ ಆರ್ಥಿಕ ಪ್ಯಾಕೆಜ್​​​ಗೆ ಬೇಡಿಕೆ ಇಡದೇ ಕೇವಲ ಲಾಕ್​ಡೌನ್ ಕುರಿತು ರಾಜ್ಯದ ಅಭಿಪ್ರಾಯ ಹಾಗೂ ಇತರ ಮನವಿಯನ್ನು ಸಲ್ಲಿಸಿ ಪ್ರಧಾನಿಯೊಂದಿಗೆ ಸಿಎಂ ಬಿಎಸ್​ವೈ ಸಂವಾದವನ್ನು ಮುಗಿಸಲಾಯಿತು.

ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆಗೆ ಪ್ರಧಾನಿ ನರೇಂದ್ರ ಮೋದಿ ನಡೆಸಿದ ವಿಡಿಯೋ ಸಂವಾದದ ಸರದಿಯಲ್ಲಿ 19ನೇಯವರಾಗಿ ಸಿಎಂ ಬಿ.ಎಸ್.ಯಡಿಯೂರಪ್ಪ ಮೋದಿ ಜೊತೆ ಮಾತುಕತೆ ನಡೆಸಿದರು. ಈಗಿರುವ ಲಾಕ್ ಡೌನ್ ಸಡಿಲಿಕೆ ಮುಂದುವರೆಸುವಂತೆ ಸಿಎಂ ಮನವಿ ಮಾಡಿದರು. ಇದರ ಜೊತೆಗೆ ಇನ್ನೂ ಹಲವಾರು ಸಲಹೆಗಳನ್ನು ನೀಡಿದರು ಅವುಗಳೆಂದರೆ

  • ಕಂಟೇನ್​ಮೆಂಟ್ ವಲಯ ಹೊರತುಪಡಿಸಿ, ಇತರ ಸ್ಥಳಗಳಲ್ಲಿ ವಾಣಿಜ್ಯ ಚಟುವಟಿಕೆಗಳು ಹಾಗೂ ಸಾರ್ವಜನಿಕ ಸಾರಿಗೆಗೆ ಅನುಮತಿ ನೀಡಬೇಕು. ಇದರಿಂದ ಆರ್ಥಿಕ ಚಟುವಟಿಕೆಗಳಿಗೆ ಉತ್ತೇಜನ ನೀಡಲು ಸಾಧ್ಯವಾಗುವುದಲ್ಲದೆ, ರಾಜ್ಯಗಳು ಹಣಕಾಸು ಬಿಕ್ಕಟ್ಟಿನಿಂದ ಹೊರಬರಲು ಸಾಧ್ಯವಾಗುತ್ತದೆ.
  • ಕನಿಷ್ಠ ಮೇ ಅಂತ್ಯದವರೆಗೆ ದೇಶದಲ್ಲಿ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಪ್ರಯಾಣಗಳನ್ನು ಪ್ರಾರಂಭಿಸಬಾರದು. ಅಂತಾರಾಷ್ಟ್ರೀಯ, ಅಂತಾರಾಜ್ಯ ಪ್ರಯಾಣಿಕರನ್ನು ಕಡ್ಡಾಯವಾಗಿ 14 ದಿನಗಳ ಕ್ವಾರಂಟೈನ್​​ಗೆ ಒಳಪಡಿಸಬೇಕು.
  • ಅಂತಾರಾಜ್ಯ ಪ್ರಯಾಣಿಕರು ತಾವು ಹೊರಡುವ ಸ್ಥಳದಲ್ಲಿ ಆರೋಗ್ಯ ಪ್ರಮಾಣ ಪತ್ರವನ್ನು ಸ್ಥಳೀಯ ಆರೋಗ್ಯ ಅಧಿಕಾರಿಗಳಿಂದ ಪಡೆದುಕೊಳ್ಳಬೇಕು. ಆರೋಗ್ಯ ಪ್ರಮಾಣ ಪತ್ರ ಹೊಂದಿಲ್ಲದವರನ್ನು ಕಡ್ಡಾಯವಾಗಿ ಕ್ವಾರಂಟೈನ್ ನಲ್ಲಿ ಇರಿಸಬೇಕು.
  • ಕೋವಿಡ್ 19 ಹಿನ್ನೆಲೆಯಲ್ಲಿ ಇತರ ವೈದ್ಯಕೀಯ ಚಿಕಿತ್ಸೆಗಳು ನಿರ್ಲಕ್ಷ್ಯಕ್ಕೆ ಒಳಗಾಗಿವೆ. ಖಾಸಗಿ ಆಸ್ಪತ್ರೆಗಳು, ಚಿಕಿತ್ಸಾಲಯಗಳು ಕೊರೊನಾರಹಿತ ರೋಗಿಗಳ ಚಿಕಿತ್ಸೆಗಾಗಿ ಕಾರ್ಯನಿರ್ವಹಿಸುವ ಕುರಿತು ಕೇಂದ್ರ ಸರ್ಕಾರ ಕಟ್ಟುನಿಟ್ಟಿನ ಆದೇಶ ಹೊರಡಿಸಬೇಕು.
  • ಸೋಂಕು ಪರೀಕ್ಷೆ ನಡೆಸುವ ಕುರಿತು ಒಂದು ಸಮಗ್ರ ಮಾರ್ಗಸೂಚಿಗಳನ್ನು ಹೊರಡಿಸಬೇಕು. ಪ್ರತಿ 10 ಲಕ್ಷಕ್ಕೆ ಕನಿಷ್ಠ ಎಷ್ಟು ಪರೀಕ್ಷೆ ನಡೆಸಬೇಕು ಎಂದು ಈ ಮಾರ್ಗಸೂಚಿಯಲ್ಲಿ ಸ್ಪಷ್ಟಪಡಿಸಬೇಕು. ಕೇವಲ ಸೋಂಕಿನ ಲಕ್ಷಣ ಹೊಂದಿರುವವರು ಮತ್ತು ಆಸ್ಪತ್ರೆಗೆ ದಾಖಲಾಗುವ ಅಗತ್ಯ ಹೊಂದಿರುವವರಿಗೆ ಮಾತ್ರ ಪರೀಕ್ಷೆ ನಡೆಸಬೇಕು.
  • ಸೋಂಕಿಗೆ ಚಿಕಿತ್ಸೆ ನೀಡಲು ಟೆಲಿ ಮೆಡಿಸಿನ್ ಅನ್ನು ವ್ಯಾಪಕವಾಗಿ ಬಳಸಬೇಕು. ತೀವ್ರ ರೋಗ ಲಕ್ಷಣ ಹೊಂದಿರುವವರನ್ನು ಮಾತ್ರ ಆಸ್ಪತ್ರೆಗೆ ದಾಖಲಿಸಬೇಕು.
  • ಸಾಮಾಜಿಕ ಅಂತರ, ಮಾಸ್ಕ್ ಬಳಕೆ, ಕೈತೊಳೆಯವುದು, ವೈಯಕ್ತಿಕ ಮತ್ತು ಸಾಮುದಾಯಿಕ ಶುಚಿತ್ವ ಕಾಪಾಡಿಕೊಳ್ಳುವುದು ಮೊದಲಾದ ಅಭ್ಯಾಸಗಳ ಮೂಲಕ ಹೊಸ ಜೀವನ ಶೈಲಿಯನ್ನು ರೂಢಿಸಿಕೊಳ್ಳುವುದು.
  • 60 ವರ್ಷಕ್ಕೂ ಮೇಲ್ಪಟ್ಟವರು ಮತ್ತು 10 ವರ್ಷದೊಳಗಿನವರು ಮನೆಯೊಳಗೇ ಸುರಕ್ಷಿತವಾಗಿರುವಂತೆ ಸಲಹೆ ನೀಡಬೇಕು.

Last Updated : May 11, 2020, 10:03 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.