ETV Bharat / city

ಹಿಜಾಬ್-ಕೇಸರಿ ವಿವಾದ: 3 ದಿನ ಹೈಸ್ಕೂಲ್-ಕಾಲೇಜುಗಳಿಗೆ ಮಾತ್ರ ರಜೆ, ಪ್ರಾಥಮಿಕ ಶಾಲೆಗಳಿಗೆ ಅಲ್ಲ - protest against hijab kesari

ವಿದ್ಯಾರ್ಥಿಗಳು ಶಾಂತಿ, ಸೌಹಾರ್ದತೆ ಕಾಪಾಡಬೇಕು ಎಂದು ಸಿಎಂ ಬೊಮ್ಮಾಯಿ ಹಾಗೂ ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥ್‌ ನಾರಾಯಣ ಮನವಿ ಮಾಡಿದ್ದಾರೆ..

3 ದಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ ಸರ್ಕಾರ

author img

By

Published : Feb 8, 2022, 4:45 PM IST

Updated : Feb 8, 2022, 6:18 PM IST

ಬೆಂಗಳೂರು : ರಾಜ್ಯದಲ್ಲಿ ಹಿಜಾಬ್, ಕೇಸರಿ ಶಾಲು ವಿವಾದದ ಕಿಡಿ ವ್ಯಾಪಿಸುತ್ತಿರುವುದರಿಂದ ಮೂರು ದಿನಗಳ ಕಾಲಎಲ್ಲಾ ಹೈಸ್ಕೂಲು-ಕಾಲೇಜುಗಳಿಗೆ ರಜೆ ಘೋಷಿಸಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಆದೇಶ ಹೊರಡಿಸಿದ್ದಾರೆ.

ನವದೆಹಲಿಯಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯದಲ್ಲಿ ಸಮವಸ್ತ್ರ ವಿವಾದ ಕುರಿತ ನಡೆಯುತ್ತಿರುವ ಬೆಳವಣಿಗೆಗಳನ್ನು ಗಮನಿಸಿ ಶಾಲಾ ಕಾಲೇಜುಗಳಿಗೆ ಮೂರು ದಿನ ರಜೆ ಘೋಷಿಸಿದ್ದು, ರಾಜ್ಯದಲ್ಲಿ ಶಾಂತಿ ಕಾಪಾಡುವಂತೆ ಮನವಿ ಮಾಡಿದ್ದಾರೆ. ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಹಾಗೂ ರಾಜ್ಯದ ಸಮಸ್ತ ಜನತೆ ಸೇರಿ ಸಂಬಂಧಿಸಿದ ಎಲ್ಲರೂ ಸಹಕಾರ ನೀಡಬೇಕು ಎಂದು ಮನವಿ ಮಾಡಿದ್ದಾರೆ.

ಡಾ. ಅಶ್ವತ್ಥ್‌ ನಾರಾಯಣ

ಸದ್ಯ ಮೂರು ದಿನ ರಜೆ ಘೋಷಿಸಲಾಗಿದೆ. ಬೆಂಗಳೂರಿಗೆ ವಾಪಸ್ಸಾಗುತ್ತಿದ್ದಂತೆ ಕಾನೂನು ಸುವ್ಯವಸ್ಥೆ ಬಗ್ಗೆ ಹಿರಿಯ ಅಧಿಕಾರಿಗಳು, ಶಿಕ್ಷಣ ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಸಿ ಮುಂದಿನ ನಿರ್ಧಾರ ಪ್ರಕಟಿಸುವುದಾಗಿ ಸಿಎಂ ತಿಳಿಸಿದ್ದಾರೆ.

ನಾಳೆಯಿಂದ ಮೂರು ದಿನಗಳ ಕಾಲ ರಾಜ್ಯಾದ್ಯಂತ ಎಲ್ಲಾ ಹೈಸ್ಕೂಲ್ ಮತ್ತು ಪಿಯು ಕಾಲೇಜು ಮತ್ತು ಡಿಗ್ರಿ ಕಾಲೇಜು ಮತ್ತು ಇಂಜಿನಿಯರಿಂಗ್ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥನಾರಾಯಣ ತಿಳಿಸಿದ್ದಾರೆ.

ವಿಕಾಸಸೌಧದಲ್ಲಿ ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಹಿಜಾಬ್ ವಿಚಾರದಲ್ಲಿ ಸರ್ಕಾರ ಈಗಾಗಲೇ ತನ್ನ ನಿರ್ಧಾರ ಹೇಳಿದೆ. ಆದರೂ ಕೆಲವು ಕಡೆ ಸ್ಥಿತಿ ಗಂಭೀರವಾಗಿದೆ. ಇದರ ಬಗ್ಗೆ ಹೈಕೋರ್ಟ್​ನಲ್ಲಿ ವಿಚಾರಣೆ ನಡೆಯುತ್ತಿದೆ ಎಂದು ಹೇಳಿದರು.

ಸರ್ಕಾರದ ಆದೇಶ ಪ್ರತಿ
ಸರ್ಕಾರದ ಆದೇಶ ಪ್ರತಿ

ವಿದ್ಯಾರ್ಥಿಗಳು ಪಟ್ಟು ಹಿಡಿದಿರುವುದರಿಂದ ಈ ರೀತಿಯ ಪ್ರತಿಭಟನೆಗಳು ನಡೆಯುತ್ತಿವೆ. ವಿದ್ಯಾರ್ಥಿಗಳಲ್ಲಿ ಮನವಿ ಮಾಡಿಕೊಂಡ ಸಚಿವರು, ಶಾಂತಿ ಸೌಹಾರ್ದತೆ ಕಾಪಾಡಿ, ಕಾನೂನನ್ನು ಕೈಗೆತ್ತಿಕೊಳ್ಳಬೇಡಿ ಎಂದು ಮನವಿ ಮಾಡಿದರು. ಈ ವಿಚಾರದ ಬಗ್ಗೆ ಈಗಾಗಲೇ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ. ನ್ಯಾಯಾಲಯ ಯಾವ ತೀರ್ಪು ನೀಡಲಿದೆಯೋ ಅದಕ್ಕೆ ಸರ್ಕಾರ ಬದ್ದವಾಗಿದೆ ಎಂದು ಹೇಳಿದರು.

ರಾಜ್ಯದಲ್ಲಿ ನಾಳೆ ಎಂದಿನಂತೆ ನಡೆಯಲಿದೆ ಪ್ರಾಥಮಿಕ ತರಗತಿ..
ರಾಜ್ಯದಲ್ಲಿ ಪ್ರಾಥಮಿಕ ತರಗತಿ 1 ರಿಂದ 7ನೇ ತರಗತಿ, ಯುಕೆಜಿ, ಎಲ್​ಕೆಜಿ ತರಗತಿಗಳು ಎಂದಿನಂತೆ ನಡೆಯಲಿದ್ದು, ರಜೆ ಇರುವುದಿಲ್ಲ.

Last Updated : Feb 8, 2022, 6:18 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.