ETV Bharat / city

ಕರ್ನಾಟಕ ಹಿಜಾಬ್​ ವಿವಾದ: ಹೈಕೋರ್ಟ್​​ನಲ್ಲಿಂದು ಮತ್ತೆ ವಿಚಾರಣೆ - ಹೈಕೋರ್ಟ್​ ಹಿಜಾಬ್​

ಕರ್ನಾಟಕದಲ್ಲಿ ಉಂಟಾಗಿರುವ ಹಿಜಾಬ್ ವಿವಾದ ಸಂಬಂಧಿಸಿ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಇಂದು ಮಧ್ಯಾಹ್ನ 2.30 ಕ್ಕೆ ಮುಂದೂಡಿದೆ. ಬುಧವಾರ ಸರ್ಕಾರ ಹಾಗೂ ಮಧ್ಯಂತರ ಅರ್ಜಿದಾರರ ವಾದವನ್ನು ಹೈಕೋರ್ಟ್ ಆಲಿಸಲಿದೆ.

Karnataka High court Hijab
Karnataka High court Hijab
author img

By

Published : Feb 9, 2022, 5:42 AM IST

ಬೆಂಗಳೂರು: ಕಳೆದ ಕೆಲ ದಿನಗಳಿಂದ ರಾಜ್ಯದಲ್ಲಿ ಹಿಜಾಬ್ ವಿವಾದ ತೀವ್ರ ಸ್ವರೂಪ ಪಡೆದುಕೊಂಡಿದೆ. ರಾಜ್ಯದ ಬಹುತೇಕ ಎಲ್ಲ ಕಾಲೇಜುಗಳಿಗೆ ಹಿಜಾಬ್ ವರ್ಸಸ್​ ಕೇಸರಿ ವಿವಾದ ವ್ಯಾಪಿಸಿದ್ದು, ಈಗಾಗಲೇ ರಾಜಕೀಯ ತಿರುವು ಸಹ ಪಡೆದುಕೊಂಡಿದೆ. ಇದೇ ವಿಚಾರವಾಗಿ ಹೈಕೋರ್ಟ್​​ನಲ್ಲಿ ವಿಚಾರಣೆ ನಡೆಯುತ್ತಿದ್ದು, ಇಂದು ಕೂಡ ವಾದ-ಪ್ರತಿವಾದ ಮುಂದುವರೆಯಲಿದೆ.

ನ್ಯಾಯಮೂರ್ತಿ ಕೃಷ್ಣ ಎಸ್.‌ದಿಕ್ಷೀತ್ ಅವರಿದ್ದ ಏಕ ಸದಸ್ಯ ಪೀಠದ ಮುಂದೆ ಇಂದು ವಿಚಾರಣೆ ನಡೆಯಲಿದೆ. ಹಿಜಾಬ್ ಧರಿಸಲು ಅವಕಾಶ ಕಲ್ಪಿಸುವಂತೆ ಕೋರಿರುವ ಅರ್ಜಿದಾರರ ಪರ ದೇವದತ್ ಕಾಮತ್ ವಾದ ಮಂಡಿಸಿದ್ದು, ಸರ್ಕಾರದ ಪರ ಅಡ್ವೋಕೇಟ್ ಜನರಲ್ ಪ್ರಭುಲಿಂಗ ಕೆ. ನಾವದಗಿ ವಾದ ಮಂಡಿಸಿದ್ದಾರೆ. ವಾದ-ಪ್ರತಿವಾದ ಆಲಿಸಿರುವ ನ್ಯಾಯಮೂರ್ತಿಗಳು ವಿಚಾರಣೆಯನ್ನು ಇಂದು ಮಧ್ಯಾಹ್ನ 2.30ಕ್ಕೆ ಮುಂದೂಡಿದ್ದಾರೆ.

ಇದನ್ನೂ ಓದಿರಿ: 'ಹಿಜಾಬ್​ ಕಾರಣಕ್ಕಾಗಿ ಹೆಣ್ಣು ಮಕ್ಕಳಿಗೆ ಶಾಲಾ ಪ್ರವೇಶ ನೀಡದಿರುವುದು ಅತ್ಯಂತ ಭೀಕರ':ಹಿಜಾಬ್​ ವಿವಾದಕ್ಕೆ ಮಲಾಲಾ ಪ್ರತಿಕ್ರಿಯೆ

ಹಿಜಾಬ್​ ಧರಿಸಿ ತರಗತಿಗಳಿಗೆ ಹಾಜರಾಗಿರುವುದನ್ನ ಪ್ರಶ್ನೆ ಮಾಡಿ ಉಡುಪಿಯ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜ್​ ಆಡಳಿತ ಮಂಡಳಿ ಆದೇಶ ಹೊರಡಿಸಿದ್ದು, ಇದನ್ನ ಪ್ರಶ್ನೆ ರಿಟ್ ಅರ್ಜಿ ಸಲ್ಲಿಕೆಯಾಗಿದೆ. ಇದರ ಜೊತೆಗೆ ಇತರೆ ನಾಲ್ಕು ಅರ್ಜಿಗಳು ಸಲ್ಲಿಕೆಯಾಗಿದ್ದು, ಅವುಗಳ ವಿಚಾರಣೆ ಸಹ ಇಂದು ಮುಂದುವರೆಯಲಿದೆ.

ಹಿಜಾಬ್ ವಿವಾದ ರಾಜ್ಯದಲ್ಲಿ ತಾರಕಕ್ಕೆ ಏರಿದ್ದು, ನಿನ್ನೆ ಹೈಕೋರ್ಟ್​ನಲ್ಲಿ​ ಮಹತ್ವದ ವಿಚಾರಣೆ ನಡೆಯಿತು. ಅರ್ಜಿದಾರರು ಸಲ್ಲಿಕೆ ಮಾಡಿರುವ ನಾಲ್ಕೂ ಅರ್ಜಿಗಳ ವಿಚಾರಣೆಯನ್ನು ಹೈಕೋರ್ಟ್ ಕೈಗೆತ್ತಿಕೊಂಡಿದ್ದು,ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್‌ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸುತ್ತಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.