ETV Bharat / city

ಅಕ್ರಮ ವಿದೇಶ ಪ್ರಜೆಗಳ ಪತ್ತೆ : ಗಡಿಪಾರಿಗೆ ಸಮಿತಿ ರಚಿಸಿದ‌ ಗೃಹ ಇಲಾಖೆ - ವಿದೇಶಿ ಪ್ರಜೆಗಳನ್ನು ಪತ್ತೆ

ರಾಜ್ಯದಲ್ಲಿ ನಾಪತ್ತೆಯಾಗಿರುವ ಹಾಗೂ ಅಕ್ರಮವಾಗಿ ನೆಲೆಸಿರುವ ವಿದೇಶಿ ಪ್ರಜೆಗಳನ್ನು ಪತ್ತೆ ಹಚ್ಚಲು ಈ ಸಮಿತಿ ಕಾರ್ಯೋನ್ಮುಖವಾಗಲಿದೆ. ಪತ್ತೆಯಾಗುವ ಅಕ್ರಮ ವಿದೇಶಿಗರು ಯಾವ ದೇಶದವರು ಎಂಬುದು ಪತ್ತೆ ಮಾಡಿ ಆ ದೇಶಕ್ಕೆ ಅವರನ್ನು ಗಡಿಪಾರು ಮಾಡಲು ಕ್ರಮಕೈಗೊಳ್ಳಲಾಗುತ್ತದೆ ಎಂದು ಗೃಹ ಇಲಾಖೆ ತಿಳಿಸಿದೆ..

home-department
ಗೃಹ ಇಲಾಖೆ
author img

By

Published : Jul 16, 2021, 10:06 PM IST

ಬೆಂಗಳೂರು : ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿ ಪ್ರಜೆಗಳನ್ನು ಪತ್ತೆ ಹಚ್ಚಿ ಅವರನ್ನು ಅವರ ದೇಶಕ್ಕೆ ಗಡಿಪಾರು ಮಾಡಲು ಒಳಾಡಳಿತ ಇಲಾಖೆ ಪ್ರಧಾನ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದೆ. ಪ್ರತಿ ತಿಂಗಳು ಪತ್ತೆಯಾದ ಮತ್ತು ಗಡಿಪಾರು ಮಾಡಲಾಗಿರುವ ವಿದೇಶಿ ಪ್ರಜೆಗಳ ಕುರಿತು ಕೇಂದ್ರ ಗೃಹ ಇಲಾಖೆಗೆ ವರದಿ ಸಲ್ಲಿಸುವುದಾಗಿ ರಾಜ್ಯದ ಗೃಹ ಇಲಾಖೆ ಮಾಹಿತಿ ನೀಡಿದೆ.

Home Department
ಗೃಹ ಇಲಾಖೆ ಪತ್ರಿಕಾ ಪ್ರಕಟಣೆ

ಒಳಾಡಳಿತ ಇಲಾಖೆ ಪ್ರಧಾನ ಕಾರ್ಯದರ್ಶಿಗಳು ಈ ಸಮಿತಿಯ ಅಧ್ಯಕ್ಷರಾಗಿದ್ದಾರೆ. ಪ್ರಾದೇಶಿಕ ವಿದೇಶಿ ನೋಂದಣಾಧಿಕಾರಿ, ರಾಜ್ಯ ಗುಪ್ತವಾರ್ತೆ ಪೊಲೀಸ್ ಅಧೀಕ್ಷಕರು, ಸಂಬಂಧಪಟ್ಟ ಜಿಲ್ಲಾ ಪೊಲೀಸ್ ಅಧೀಕ್ಷಕರು, ಎನ್ಐಸಿ ಸಮಿತಿಯ ಸದಸ್ಯರಾಗಿರುತ್ತಾರೆ.

ರಾಜ್ಯದಲ್ಲಿ ನಾಪತ್ತೆಯಾಗಿರುವ ಹಾಗೂ ಅಕ್ರಮವಾಗಿ ನೆಲೆಸಿರುವ ವಿದೇಶಿ ಪ್ರಜೆಗಳನ್ನು ಪತ್ತೆ ಹಚ್ಚಲು ಈ ಸಮಿತಿ ಕಾರ್ಯೋನ್ಮುಖವಾಗಲಿದೆ. ಪತ್ತೆಯಾಗುವ ಅಕ್ರಮ ವಿದೇಶಿಗರು ಯಾವ ದೇಶದವರು ಎಂಬುದು ಪತ್ತೆ ಮಾಡಿ ಆ ದೇಶಕ್ಕೆ ಅವರನ್ನು ಗಡಿಪಾರು ಮಾಡಲು ಕ್ರಮಕೈಗೊಳ್ಳಲಾಗುತ್ತದೆ ಎಂದು ಗೃಹ ಇಲಾಖೆ ತಿಳಿಸಿದೆ.

ಈ ಪತ್ತೆ ಕಾರ್ಯಕ್ಕೆ ವಿದೇಶಿ ನೋಂದಣಾಧಿಕಾರಿಗಳ ಸಹಾಯ ಪಡೆದುಕೊಳ್ಳಬೇಕಾಗುತ್ತದೆ. ಈ ಬಗ್ಗೆ ಎಲ್ಲ ಜಿಲ್ಲೆಗಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸಂದೇಶ ರವಾನಿಸಲಾಗುವುದು ಎಂದು ಗೃಹ ಇಲಾಖೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.