ETV Bharat / city

ವಾಹನ ಟೋಯಿಂಗ್ ಮಾಡುವಾಗ ನಿಯಮಾವಳಿ ಪಾಲಿಸಿ : ಟ್ರಾಫಿಕ್ ಪೊಲೀಸರಿಗೆ ಗೃಹ ಸಚಿವರ ಸೂಚನೆ

author img

By

Published : Sep 3, 2021, 6:43 PM IST

ಟ್ರಾಫಿಕ್ ಪೊಲೀಸರು ವಾಹನವನ್ನು ಹೊತ್ತೊಯ್ಯುವ ಸಮಯದಲ್ಲಿ ವಾಹನದ ಮಾಲೀಕರು ಸ್ಥಳದಲ್ಲಿದ್ದರೆ 'ನೋ ಪಾರ್ಕಿಂಗ್' ಶುಲ್ಕದ ಹಣವನ್ನು ಮಾತ್ರ ಪಡೆದುಕೊಳ್ಳಬೇಕು. ವಾಹನವನ್ನು ಅಲ್ಲಿಯೇ ಅವರಿಗೆ ಬಿಟ್ಟು ಕೊಡಬೇಕು ಮತ್ತು ಟೋಯಿಂಗ್ ಮಾಡಬಾರದು..

araga jnanendra directs police over vehicle towing
ಗೃಹ ಸಚಿವ

ಬೆಂಗಳೂರು : ನಗರದಲ್ಲಿ ಟ್ರಾಫಿಕ್ ನಿಯಮ ಉಲ್ಲಂಘನೆ ನೆಪದಲ್ಲಿ ವಾಹನ ಟೋಯಿಂಗ್ ಸಿಬ್ಬಂದಿಯಿಂದ ಸಾರ್ವಜನಿಕರಿಗೆ ಆಗುತ್ತಿರುವ ಕಿರುಕುಳದ ಬಗ್ಗೆ ಕೇಳಿ ಬಂದ ಆರೋಪಗಳ ಹಿನ್ನೆಲೆಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಇಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ಹಾಗೂ ಹೆಚ್ಚುವರಿ ಪೊಲೀಸ್ ಆಯುಕ್ತ (ಸಂಚಾರ) ರವಿಕಾಂತೇಗೌಡರ ಜೊತೆ ಸಭೆ ನಡೆಸಿದರು.

ಇನ್ನು, ಮುಂದೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಕ್ರಮ ತೆಗೆದುಕೊಳ್ಳುವಂತೆ ಸಭೆಯಲ್ಲಿ ಟ್ರಾಫಿಕ್ ಪೊಲೀಸರಿಗೆ ನಿರ್ದೇಶನ ನೀಡಿದ್ದಾರೆ. ಯಾವುದೇ ವಾಹನವನ್ನು ಟೋಯಿಂಗ್ ಮಾಡುವ ಮೊದಲು ಸ್ಥಳದಲ್ಲಿದ್ದ ಟ್ರಾಫಿಕ್ ಪೊಲೀಸರು ವಾಹನ ಮಾಲೀಕರ ಗಮನ ಸೆಳೆಯಲು ಸೈರನ್ ಅಥವಾ ಹಾರ್ನ್ ಮಾಡಬೇಕು ಹಾಗೂ ವಾಹನ ಟೋಯಿಂಗ್ ಮಾಡಬೇಕಾದ ಸಂದರ್ಭದಲ್ಲಿ ತೆಗೆದುಕೊಳ್ಳಬೇಕಾದ ಎಲ್ಲಾ ನಿಯಮಾವಳಿಗಳನ್ನು ಚಾಚೂ ತಪ್ಪದೆ ಅನುಸರಿಸಬೇಕು ಎಂದು ಸೂಚಿಸಿದ್ದಾರೆ.

ಇದನ್ನೂ ಓದಿ: ಮಳೆ ನೀರಿನಿಂದ ಅನಾಹುತ ಆಗದಂತೆ ಪಾಲಿಕೆ ಮುನ್ನೆಚ್ಚರಿಕೆ ವಹಿಸಿದೆ: ಸಚಿವ ಅಶ್ವತ್ಥನಾರಾಯಣ

ಟ್ರಾಫಿಕ್ ಪೊಲೀಸರು ವಾಹನವನ್ನು ಹೊತ್ತೊಯ್ಯುವ ಸಮಯದಲ್ಲಿ ವಾಹನದ ಮಾಲೀಕರು ಸ್ಥಳದಲ್ಲಿದ್ದರೆ 'ನೋ ಪಾರ್ಕಿಂಗ್' ಶುಲ್ಕದ ಹಣವನ್ನು ಮಾತ್ರ ಪಡೆದುಕೊಳ್ಳಬೇಕು. ವಾಹನವನ್ನು ಅಲ್ಲಿಯೇ ಅವರಿಗೆ ಬಿಟ್ಟು ಕೊಡಬೇಕು ಮತ್ತು ಟೋಯಿಂಗ್ ಮಾಡಬಾರದು.

ಟೋಯಿಂಗ್ ಸಿಬ್ಬಂದಿ ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸಬೇಕು ಹಾಗೂ ಟೋಯಿಂಗ್ ಮಾಡಲಾಗುವ ವಾಹನಗಳನ್ನು ಅತ್ಯಂತ ಜಾಗರೂಕತೆಯಿಂದ ಯಾವುದೇ ಹಾನಿಗೊಳಗಾಗದಂತೆಯೂ ನೋಡಿಕೊಳ್ಳಬೇಕು ಎಂದು ಸಚಿವರು ನಿರ್ದೇಶಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.