ETV Bharat / city

ಪಾದಯಾತ್ರೆಯಿಂದ ಸುಸ್ತಾಗಿದ್ದ ಸಿದ್ದರಾಮಯ್ಯ ಆರೋಗ್ಯ ವಿಚಾರಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ - ಜ್ವರದಿಂದ ಚೇತರಿಸಿಕೊಂಡು ಮತ್ತೆ ಪಾದಯಾತ್ರೆಗೆ ಸಿದ್ದರಾಮಯ್ಯ

ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ಆರಂಭಿಸಿರುವ ಪಾದಯಾತ್ರೆಯಲ್ಲಿ ಪಾಲ್ಗೊಂಡು ಆಯಾಸಗೊಂಡಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ದೂರವಾಣಿ ಕರೆ ಮಾಡಿ ಗೃಹ ಸಚಿವ ಆರಗ ಜ್ಞಾನೇಂದ್ರ ಯೋಗಕ್ಷೇಮ ವಿಚಾರಿಸಿದ್ದಾರೆ‌.

siddaramaiah
ಆರಗ ಜ್ಞಾನೇಂದ್ರ
author img

By

Published : Jan 12, 2022, 12:18 PM IST

ಬೆಂಗಳೂರು: ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ಆರಂಭಿಸಿರುವ ಪಾದಯಾತ್ರೆಯಲ್ಲಿ ಪಾಲ್ಗೊಂಡು ಆಯಾಸಗೊಂಡಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ದೂರವಾಣಿ ಕರೆ ಮಾಡಿ ಗೃಹ ಸಚಿವ ಆರಗ ಜ್ಞಾನೇಂದ್ರ ಯೋಗಕ್ಷೇಮ ವಿಚಾರಿಸಿದರು.

ಮೊದಲ ದಿನದ ಪಾದಯಾತ್ರೆಯಲ್ಲಿ ಭಾಗವಹಿಸಿ ಜ್ವರದ ಕಾರಣಕ್ಕೆ ಅರ್ಧಕ್ಕೆ ವಾಪಸ್​ ಆಗಿದ್ದ ಸಿದ್ದರಾಮಯ್ಯ ವಿಶ್ರಾಂತಿ ಪಡೆದು ನಿನ್ನೆ ಮತ್ತೆ ಪಾದಯಾತ್ರೆಯಲ್ಲಿ ಭಾಗವಹಿಸಿದ್ದರು. ಹೀಗಾಗಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಆರೋಗ್ಯ ವಿಚಾರಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ ಆರೋಗ್ಯ ಕಾಪಾಡಿಕೊಳ್ಳಬೇಕು ಎಂಬ ಆಶಯ ವ್ಯಕ್ತಪಡಿಸಿದರು.

ಇದಕ್ಕೆ ಧನ್ಯವಾದ ತಿಳಿಸಿದ ಸಿದ್ದರಾಮಯ್ಯ ಅವರು, ಸಚಿವರ ಆರೋಗ್ಯದ ಬಗ್ಗೆಯೂ ವಿಚಾರಿಸಿಕೊಂಡರು.

ಇದನ್ನೂ ಓದಿ: ಇಂಡಿಯಲ್ಲಿ ಮದ್ಯ ಸೇವನೆಗೆ ಕರೆದು ಯುವಕನ ಕೊಲೆ.. ಪ್ರೇಯಸಿಯ ಸಹೋದರನಿಂದಲೇ ಕೃತ್ಯ

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.