ETV Bharat / city

'ಕರ್ಫ್ಯೂ ಉಲ್ಲಂಘಿಸಿ ಪಾದಯಾತ್ರೆ ಆರಂಭಿಸಿರುವ ಕಾಂಗ್ರೆಸ್‌ ನಾಯಕರ ವಿರುದ್ಧ ಜಿಲ್ಲಾಡಳಿತದಿಂದ ಕ್ರಮ' - Araga jnanendra reaction in Bengaluru

ಕಾವೇರಿ ನದಿ ನೀರಿನ ನಮ್ಮ ಹಕ್ಕಿನ ಪಾಲು ಪಡೆಯಲು ವಿಫಲರಾದ ಕಾಂಗ್ರೆಸ್ ನಾಯಕರು ಸಂಗಮದ ದಂಡೆಯಲ್ಲಿ ಮಂಡಿಯೂರಿ ಜನತೆಯ ಕ್ಷಮೆ ಯಾಚಿಸಬೇಕು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಆಗ್ರಹಿಸಿದ್ದಾರೆ.

Home Minister Araga jnanendra
ಗೃಹ ಸಚಿವ ಆರಗ ಜ್ಞಾನೇಂದ್ರ
author img

By

Published : Jan 9, 2022, 11:57 AM IST

ಬೆಂಗಳೂರು: ವೀಕೆಂಡ್ ಕರ್ಫ್ಯೂ ಜಾರಿಯಲ್ಲಿದ್ದರೂ ಪಾದಯಾತ್ರೆ ಆರಂಭಿಸಿರುವ ಕಾಂಗ್ರೆಸ್ ನಾಯಕರ ವಿರುದ್ಧ ಜಿಲ್ಲಾಡಳಿತ ಕ್ರಮ ಕೈಗೊಳ್ಳುತ್ತದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.

ಕುಮಾರ ಕೃಪಾ ಅತಿಥಿಗೃಹದ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊ‌ನಾ ಸೋಂಕಿನ ವಾತಾವರಣದ ನಡುವೆಯೂ ಕಾನೂನನ್ನು ಲೆಕ್ಕಿಸದೆ ಪಾದಯಾತ್ರೆ ಕಾರ್ಯಕ್ರಮ ಹಮ್ಮಿಕೊಂಡಿರುವ ಕಾಂಗ್ರೆಸ್ ನಾಯಕರ ನಡವಳಿಕೆ ಅತ್ಯಂತ ಬೇಜವಾಬ್ದಾರಿಯಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಶಾಂತಿ ಹಾಗೂ ಕಾನೂನು ಸುವ್ಯವಸ್ಥೆಯನ್ನು ಜಿಲ್ಲಾಡಳಿತ ನೋಡಿಕೊಳ್ಳುತ್ತಿದೆ. ಕಾಂಗ್ರೆಸ್ ನಾಯಕರು ನೀರಿನ ಮೇಲೆ ರಾಜಕೀಯ ಮಾಡಲು ಹೊರಟಿದ್ದಾರೆ. ಆದರೆ ಜನರು ಬುದ್ದಿವಂತರು. ಇವರ ನಾಟಕವನ್ನು ಅರ್ಥ ಮಾಡಿಕೊಂಡಿದ್ದಾರೆ. ಮೇಕೆದಾಟು ಯೋಜನೆ ವಿಷಯದಲ್ಲಿ ಕಾಂಗ್ರೆಸ್ ನಾಯಕರು ಅಧಿಕಾರದಲ್ಲಿದ್ದಾಗ ನಿರ್ಲಕ್ಷ್ಯ ವಹಿಸಿದ್ದಾರೆ. ಈಗ ಮುಂದಿನ ಚುನಾವಣೆ ದೃಷ್ಟಿಯಿಂದ ಪಾದಯಾತ್ರೆ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ ಎಂದು ದೂರಿದರು.

ಮೇಕೆದಾಟು ಯೋಜನೆಯನ್ನು ಅನುಷ್ಠಾನಗೊಳಿಸಲು ನಮ್ಮ ಸರ್ಕಾರ ಬದ್ದ. ಇದರಲ್ಲಿ ಯಾವುದೇ ಸಂಶಯ ಬೇಡ. ಈ ವಿವಾದ ಪ್ರಸ್ತುತ ಸರ್ವೋಚ್ಚ ನ್ಯಾಯಾಲಯದ ಮುಂದಿದೆ. ಕಾಂಗ್ರೆಸ್ ನಾಯಕರು ಅಧಿಕಾರದಲ್ಲಿದ್ದಾಗ 5 ವರ್ಷದಲ್ಲಿ ಕೇವಲ ಡಿಪಿಆರ್ ಸಲ್ಲಿಸಿದ್ದು ಬಿಟ್ಟರೆ ಬೇರೆ ಏನೂ ಮಾಡಲಿಲ್ಲ ಎಂದು ಆರೋಪಿಸಿದರು.

ಕಾವೇರಿ ನದಿ ನೀರಿನ ನಮ್ಮ ಹಕ್ಕಿನ ಪಾಲು ಪಡೆಯಲು ವಿಫಲರಾದ ಕಾಂಗ್ರೆಸ್ ನಾಯಕರು ಸಂಗಮದ ದಂಡೆಯಲ್ಲಿ ಮಂಡಿಯೂರಿ ಜನತೆಯ ಕ್ಷಮೆ ಯಾಚಿಸಬೇಕು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್​ ಮೇಕೆದಾಟು ಪಾದಯಾತ್ರೆಗೆ ಮಲ್ಲಿಕಾರ್ಜುನ ಖರ್ಗೆ ಚಾಲನೆ

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.