ETV Bharat / city

ಜೂಜು ಮತ್ತು ಡ್ರಗ್ಸ್ ಮಟ್ಟ ಹಾಕಲು ಮತ್ತಷ್ಟು ಬಿಗಿ ಕ್ರಮ : ಗೃಹ ಸಚಿವ ಬೊಮ್ಮಾಯಿ - ವಿಧಾನಸಭೆ ಅಧಿವೇಶನ 2020

ಜೂಜಾಟ ಒಂದು ಸಾಮಾಜಿಕ ಪಿಡುಗಾಗಿದೆ. ಇದಕ್ಕೆ ಕಡಿವಾಣ ಹಾಕಲೇಬೇಕಾದ ಅಗತ್ಯವಿದೆ. ಹಿಂದಿನ ಸರ್ಕಾರಗಳಿಗಿಂತಲೂ ನಮ್ಮ ಸರ್ಕಾರ ಬಿಗಿಯಾದ ಕ್ರಮ ತೆಗೆದುಕೊಂಡಿದೆ. ಕಲಬುರ್ಗಿ, ಬೀದರ್, ರಾಯಚೂರು ಸೇರಿ ಗಡಿ ಭಾಗಗಳಲ್ಲಿ ರಿಕ್ರಿಯೇಷನ್ ಕ್ಲಬ್‍ಗಳು ಕಾನೂನು ಬಾಹಿರವಾಗಿ ನಡೆಯುತ್ತಿರುವುದು ಗಮನಕ್ಕೆ ಬಂದಿದೆ..

ಗೃಹ ಸಚಿವ ಬಸವರಾಜ ಬೊಮ್ಮಾಯಿ
ಗೃಹ ಸಚಿವ ಬಸವರಾಜ ಬೊಮ್ಮಾಯಿ
author img

By

Published : Dec 8, 2020, 3:24 PM IST

ಬೆಂಗಳೂರು : ರಾಜ್ಯದಲ್ಲಿ ಹೆಚ್ಚುತ್ತಿರುವ ಜೂಜಾಟ ಮತ್ತು ಡ್ರಗ್ಸ್ ಪ್ರಕರಣ ಹಿನ್ನೆಲೆಯಲ್ಲಿ ಬಿಗಿ ಕ್ರಮಕೈಗೊಳ್ಳಲು ಹಾಗೂ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳುವ ಸಂಬಂಧ ಕರ್ನಾಟಕ ಪೊಲೀಸ್ ಕಾಯ್ದೆಗೆ ತಿದ್ದುಪಡಿ ತರಲು ಉದ್ದೇಶಿಸಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ವಿಧಾನಸಭೆಯಲ್ಲಿ ತಿಳಿಸಿದ್ದಾರೆ.

ಪ್ರಶ್ನೋತ್ತರ ವೇಳೆ ಕಾಂಗ್ರೆಸ್​ ಸದಸ್ಯ ಈಶ್ವರ್ ಖಂಡ್ರೆ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ನಮ್ಮ ಸರ್ಕಾರ ಡ್ರಗ್ಸ್ ಮಾಫಿಯಾ ವಿರುದ್ಧ ಸಮರ ಸಾರಿದೆ. ಅನೇಕ ಒತ್ತಡಗಳು ನಮ್ಮ ಮೇಲೆ ಬಂದಿವೆ.

ಆದರೂ ನಾವು ಯಾವುದೇ ಒತ್ತಡಕ್ಕೆ ಮಣಿಯುವ ಪ್ರಶ್ನೆಯೇ ಇಲ್ಲ. ಈ ಪ್ರಕರಣಗಳಲ್ಲಿ ಭಾಗಿಯಾದವರಿಗೆ ಕಠಿಣ ಕಾನೂನು ಕ್ರಮ ಜರುಗಿಸಲು ಹಾಲಿ ಇರುವ ಕಾನೂನಿಗೆ ತಿದ್ದುಪಡಿ ತರಲಾಗುವುದು ಎಂದರು.

ಗೃಹ ಸಚಿವ ಬಸವರಾಜ ಬೊಮ್ಮಾಯಿ

ಕರ್ನಾಟಕ ಪೊಲೀಸ್ ಕಾಯ್ದೆಗೆ ತಿದ್ದುಪಡಿ ತರುವ ಸಂಬಂಧ ಈಗಾಗಲೇ ರಾಷ್ಟ್ರೀಯ ಕಾನೂನು ಕಾಲೇಜಿನ ಮುಖ್ಯಸ್ಥರ ಜೊತೆ ಮಾತುಕತೆ ನಡೆಸಲಾಗಿದೆ. ಶೀಘ್ರದಲ್ಲೇ ಈ ಕಾನೂನು ರಾಜ್ಯದಲ್ಲಿ ಜಾರಿಯಾಗಲಿದೆ. ಇದು ಕೇವಲ ಕಾನೂನಿನಿಂದ ಮಾತ್ರ ತಡೆಯಲು ಸಾಧ್ಯವಿಲ್ಲ. ಜನರಲ್ಲೂ ಜಾಗೃತಿ ಬರಬೇಕಿದೆ ಎಂದು ಹೇಳಿದರು.

ಡ್ರಗ್ಸ್ ಪ್ರಕರಣಗಳನ್ನು ಬೇರುಮಟ್ಟದಿಂದ ಕಿತ್ತು ಹಾಕುವುದು ನಮ್ಮ ಸರ್ಕಾರದ ಉದ್ದೇಶ. ಹೀಗಾಗಿ ಕೇಂದ್ರ ಸರ್ಕಾರಕ್ಕೆ ಬಿಗಿಯಾದ ಕಾನೂನು ತರಲು ಮಾತುಕತೆ ನಡೆಸಲಾಗಿದೆ. ಸರ್ಕಾರ ತೆಗೆದುಕೊಂಡಿರುವ ಕಾನೂನು ಕಾರ್ಯಾಚರಣೆ ನಿಲ್ಲುವುದಿಲ್ಲ ಎಂದರು.

ಎನ್‍ಡಿಪಿಎಸ್ ಕಾಯ್ದೆ ತಿದ್ದುಪಡಿ ಮಾಡುವ ಅಧಿಕಾರ ನಮಗಿಲ್ಲ. ಅದು ಸಂಸತ್‍ನಲ್ಲಿ ತಿದ್ದುಪಡಿ ಮಾಡಬೇಕು. ಈ ಕಾಯ್ದೆಯಡಿ ಕ್ರಮ ಜರುಗಿಸಲು ನಮಗೆ ಅವಕಾಶವಿದೆ. ಎನ್‍ಡಿಪಿಎಸ್ ಕಾಯ್ದೆಯಡಿ 2017ರಲ್ಲಿ 1126 ಪ್ರಕರಣ ದಾಖಲಾಗಿವೆ. ಇದರಲ್ಲಿ 1095 ಪ್ರಕರಣಗಳ ವಿರುದ್ಧ ಚಾರ್ಜ್‍ಶೀಟ್ ಸಲ್ಲಿಸಲಾಗಿದೆ. 197 ಪ್ರಕರಣಗಳಿಗೆ ಶಿಕ್ಷೆಯಾಗಿದೆ.

2018ರಲ್ಲಿ 1031 ಪ್ರಕರಣ ದಾಖಲಾಗಿದ್ರೆ, 951 ಪ್ರಕರಣಗಳ ವಿರುದ್ಧ ಚಾರ್ಜ್‌ಶೀಟ್ ದಾಖಲಾಗಿ 167 ಮಂದಿಗೆ ಶಿಕ್ಷೆಯಾಗಿದೆ. 2019ರಲ್ಲಿ 1161 ಪ್ರಕರಣಗಳ ಪೈಕಿ 1374 ಪ್ರಕರಣಗಳಿಗೆ ಚಾರ್ಜ್‌ಶೀಟಾಗಿದೆ. 256 ಪ್ರಕರಣಗಳಿಗೆ ಶಿಕ್ಷೆಯಾಗಿದೆ. 2020ರಲ್ಲಿ 3852 ಪ್ರಕರಣಗಳಲ್ಲಿ 2285 ಚಾರ್ಜ್‌ಶೀಟ್, 233 ಪ್ರಕರಣಗಳಿಗೆ ಶಿಕ್ಷೆಯಾಗಿವೆ ಎಂದು ಸಚಿವರು ಸದನಕ್ಕೆ ವಿವರಿಸಿದರು.

ಈವರೆಗೆ ಬೆಂಗಳೂರಿನಲ್ಲಿ ಮಾತ್ರ ಎಫ್​ಎಸ್‍ಎಲ್ ಇತ್ತು. ಇಲ್ಲಿ ವರದಿ ವಿಳಂಬವಾಗುತ್ತಿದ್ದ ಹಿನ್ನೆಲೆ ಇದಕ್ಕಾಗಿ ಆಧುನಿಕ ತಂತ್ರಜ್ಞಾನ ಅಳವಡಿಸಿಕೊಳ್ಳಲಾಗಿದೆ. ಡ್ರಗ್ಸ್ ಪ್ರಕರಣಗಳ ತನಿಖೆ ತೀವ್ರಗೊಳಿಸಲು ನಾರ್ಕೋಟಿಕ್ ಲ್ಯಾಬ್‍ಗಳನ್ನು ಹೆಚ್ಚಳ ಮಾಡಲಾಗುವುದು. ಮೈಸೂರು, ಮಂಗಳೂರು, ಬೆಳಗಾವಿ, ಕಲಬುರಗಿ ಮತ್ತು ಹುಬ್ಬಳಿ-ಧಾರವಾಡ ಅವಳಿ ನಗರಗಳಲ್ಲಿ ಲ್ಯಾಬ್ ತೆರೆಯಲಾಗುವುದು ಎಂದು ಹೇಳಿದರು.

ಓದಿ: ತಕ್ಷಣ ಪಿಂಚಣಿ ಹಣ ಬಿಡುಗಡೆ ಮಾಡಲು ಅಧಿಕಾರಿಗಳಿಗೆ ಸೂಚಿಸುತ್ತೇನೆ: ಸಿಎಂ ಅಭಯ

ಎನ್‍ಡಿಪಿಎಸ್ ಕಾಯ್ದೆಯಡಿ ಕೆಲವರನ್ನು ಬಂಧಿಸಿರುವ ಪರಿಣಾಮ ಈವರೆಗೂ ಯಾವುದೇ ನ್ಯಾಯಾಲಯದಿಂದ ಜಾಮೀನು ಸಿಕ್ಕಿಲ್ಲ. ಎನ್‍ಡಿಪಿಎಸ್ ಕಾಯ್ದೆಯಡಿ ಬಂಧಿಸಿದರೆ ಒಂದು ವರ್ಷ ಅವರಿಗೆ ಯಾವುದೇ ನ್ಯಾಯಾಲಯದಿಂದ ಜಾಮೀನು ಸಿಗುವುದಿಲ್ಲ. ನಮ್ಮ ಮೇಲೆ ಅನೇಕ ಕಡೆ ಒತ್ತಡಗಳು ಬಂದರೂ ನಾವು ಯಾರ ಮೇಲೂ ಕರುಣೆ ತೋರದೆ ನಿರ್ದಾಕ್ಷಿಣ್ಯವಾಗಿ ಕಾನೂನಿನ ಪ್ರಕಾರ ಏನು ಕ್ರಮ ತೆಗೆದುಕೊಳ್ಳಬೇಕೋ ಅದನ್ನು ತೆಗೆದುಕೊಂಡಿದ್ದೇವೆ. ಸರ್ಕಾರ ಈ ಪಿಡುಗಿನ ವಿರುದ್ಧ ಸಮರ ಸಾರಿದೆ. ಇದರಲ್ಲಿ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದರು.

ಜೂಜಾಟ ಒಂದು ಸಾಮಾಜಿಕ ಪಿಡುಗಾಗಿದೆ. ಇದಕ್ಕೆ ಕಡಿವಾಣ ಹಾಕಲೇಬೇಕಾದ ಅಗತ್ಯವಿದೆ. ಹಿಂದಿನ ಸರ್ಕಾರಗಳಿಗಿಂತಲೂ ನಮ್ಮ ಸರ್ಕಾರ ಬಿಗಿಯಾದ ಕ್ರಮ ತೆಗೆದುಕೊಂಡಿದೆ. ಕಲಬುರ್ಗಿ, ಬೀದರ್, ರಾಯಚೂರು ಸೇರಿ ಗಡಿ ಭಾಗಗಳಲ್ಲಿ ರಿಕ್ರಿಯೇಷನ್ ಕ್ಲಬ್‍ಗಳು ಕಾನೂನು ಬಾಹಿರವಾಗಿ ನಡೆಯುತ್ತಿರುವುದು ಗಮನಕ್ಕೆ ಬಂದಿದೆ.

ತಕ್ಷಣವೇ ಇದನ್ನು ಮುಚ್ಚಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಕೆಲವು ಕಡೆ ಸಿಂಥೆಟಿಕ್ ಡ್ರಗ್ಸ್‌ ಕೂಡ ಸಿಗುತ್ತಿದೆ. ಶಾಲಾ-ಕಾಲೇಜುಗಳ ಬಳಿ ಇದರ ಬಳಕೆ ಹೆಚ್ಚಾಗುತ್ತಿದೆ. ಇದರ ವಿರುದ್ಧ ಈಗಾಗಲೇ ಕಾರ್ಯಾಚರಣೆ ಪ್ರಾರಂಭಿಸಲಾಗಿದೆ ಎಂದು ತಿಳಿಸಿದರು.

ಹುಕ್ಕಾ ಬಾರ್​ಗಳ ಮೇಲೂ ಕ್ರಮ : ಮೈಸೂರು, ಬೆಂಗಳೂರು ಸೇರಿ ಹಲವು ಕಡೆ ಹುಕ್ಕಾ ಬಾರ್‌ಗಳು ಕೂಡ ತಲೆ ಎತ್ತಿರುವುದು ಗಮನಕ್ಕೆ ಬಂದಿದೆ. ಇವುಗಳ ಮೇಲೆ ನಿಗಾವಹಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದರು.

ವೀಸಾ ಅವಧಿ ಮುಗಿದು ಕಾನೂನು ಬಾಹಿರವಾಗಿ ಇದ್ದರೆ ಅಂಥವರ ಮೇಲೂ ಕ್ರಮ ತೆಗೆದುಕೊಳ್ಳಲು ಸೂಚಿಸಲಾಗಿದೆ. ನೈಜೀರಿಯಾ ಸೇರಿ ಬೇರೆ ಬೇರೆ ದೇಶಗಳ ಪ್ರಜೆಗಳು ರಾಜ್ಯದಲ್ಲಿ ಕಾನೂನು ಬಾಹಿರವಾಗಿ ನೆಲೆಸಿದ್ದರು. ಅಂತಹವರನ್ನು ಗಡಿಪಾರು ಮಾಡಲು ಕ್ರಮಕೈಗೊಳ್ಳಲಾಗಿದೆ ಎಂದರು. ಇದಕ್ಕೂ ಮುನ್ನ ಸದಸ್ಯರಾದ ಈಶ್ವರ್ ಖಂಡ್ರೆ, ನಾಗೇಂದ್ರ, ಪ್ರಿಯಾಂಕ ಖರ್ಗೆ ಸೇರಿ ಮತ್ತಿತರರು ಮಾತನಾಡಿ, ಡ್ರಗ್ಸ್ ಮಾಫಿಯಾ ಬೇರುಮಟ್ಟದಿಂದ ಕಿತ್ತು ಹಾಕಬೇಕೆಂದು ಒತ್ತಾಯಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.