ETV Bharat / city

ವೀಕೆಂಡ್ ಕರ್ಫ್ಯೂ: ಗೃಹ ಸಚಿವ ಬಸವರಾಜ ಬೊಮ್ಮಾಯಿ ಸಿಟಿ ರೌಂಡ್ಸ್ - Bangalore news

ವೀಕೆಂಡ್ ಕರ್ಫ್ಯೂಗಾಗಿ ಜಾರಿಗೊಳಿಸಲಾಗಿರುವ ಬಿಗಿ ಕ್ರಮಗಳನ್ನು ಇಂದು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಪರಿಶೀಲಿಸಿದರು.

Basavaraj Bommayi
Basavaraj Bommayi
author img

By

Published : Apr 24, 2021, 4:52 PM IST

Updated : Apr 24, 2021, 5:29 PM IST

ಬೆಂಗಳೂರು: ವೀಕೆಂಡ್ ಕರ್ಫ್ಯೂ ಹಿನ್ನೆಲೆಯಲ್ಲಿ ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಬೆಂಗಳೂರು ನಗರ ಪ್ರದಕ್ಷಿಣೆ ಮಾಡಿದರು.

ವೀಕೆಂಡ್ ಕರ್ಫ್ಯೂಗಾಗಿ ಜಾರಿಗೊಳಿಸಲಾಗಿರುವ ಬಿಗಿ ಕ್ರಮಗಳನ್ನು ಪರಿಶೀಲಿಸಿದರು. ಚಾಲುಕ್ಯ ಸರ್ಕಲ್, ಕೆ.ಆರ್ ಸರ್ಕಲ್, ಸದಾ ಜನಜಂಗುಳಿ ಇರುವ ಕೆ.ಆರ್ ಮಾರುಕಟ್ಟೆ ಪ್ರದೇಶಕ್ಕೆ ಭೇಟಿ ಮಾಡಿ ಅಲ್ಲಿನ ವ್ಯವಸ್ಥೆ ಗಮನಿಸಿದರು. ಇದೇ ಸಂದರ್ಭದಲ್ಲಿ ಮಹಿಳೆಯೊಬ್ಬರು ಮಾಸ್ಕ್ ಧರಿಸದೇ ಇರುವುದನ್ನು ಗಮನಿಸಿದ ಬೊಮ್ಮಾಯಿ, ಆ ಮಹಿಳೆಗೆ ಮಾಸ್ಕ್ ನೀಡಿ ಅದನ್ನು ಹಾಕಿಕೊಳ್ಳುವಂತೆ ಸಲಹೆ ನೀಡಿದರು. ಮಾಸ್ಕ್ ಬಳಕೆ ಮಾಡಿ ಕೊರೊನಾದಿಂದ ದೂರ ಇರುವಂತೆ ಆ ಮಹಿಳೆಗೆ ಸಚಿವರು ಮನವರಿಕೆ ಮಾಡಿಕೊಟ್ಟರು.

ಗೃಹ ಸಚಿವ ಬಸವರಾಜ ಬೊಮ್ಮಾಯಿ ಸಿಟಿ ರೌಂಡ್ಸ್

ನಂತರ ಚಾಮರಾಜಪೇಟೆ, ಸೌತ್ ಎಂಡ್ ಸರ್ಕಲ್ ಮುಂತಾದ ಪ್ರದೇಶಗಳಿಗೆ ಸಚಿವ ಬೊಮ್ಮಾಯಿ ಭೇಟಿ ನೀಡಿ, ಕರ್ಫ್ಯೂ ಬಗ್ಗೆ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲಪಂತ್, ಸಿಸಿಬಿ ಮುಖ್ಯಸ್ಥ ಸಂದೀಪ್ ಪಾಟೀಲ್ ಉಪಸ್ಥಿತರಿದ್ದರು.

Last Updated : Apr 24, 2021, 5:29 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.