ETV Bharat / city

ಸಂಪತ್​​​ರಾಜ್ ಬಂಧನವೇ ಗಲಭೆ ಪ್ರಕರಣಕ್ಕೆ ಮಹತ್ವದ ತಿರುವು: ಬಸವರಾಜ್​ ಬೊಮ್ಮಾಯಿ

ಒಂದು ತಿಂಗಳಿನಿಂದ ಸಿಸಿಬಿ ಅಧಿಕಾರಿಗಳ ಕೈಗೆ ಸಿಗದೆ ತಪ್ಪಿಸಿಕೊಂಡು ಅಲೆಯುತ್ತಿದ್ದ ಮಾಜಿ ಮೇಯರ್​ ಸಂಪತ್ ​ರಾಜ್ ಕೊನೆಗೂ ಸಿಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿದ್ದು, ಇಂದು ಅವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುತ್ತದೆ.

Home minister basavaraj bommayi
ಗೃಹ ಸಚಿವ ಬಸವರಾಜ್​ ಬೊಮ್ಮಾಯಿ
author img

By

Published : Nov 17, 2020, 12:07 PM IST

ಬೆಂಗಳೂರು: ಮಾಜಿ ಮೇಯರ್ ಸಂಪತ್ ರಾಜ್ ಬಂಧನದಿಂದ ಡಿ.ಜೆ. ಹಳ್ಳಿ ಮತ್ತು ಕೆ.ಜಿ. ಹಳ್ಳಿ ಗಲಭೆ ಪ್ರಕರಣದ ತನಿಖೆಗೆ ಮಹತ್ವದ ತಿರುವು ಸಿಕ್ಕಂತಾಗಿದೆ. ವಿಚಾರಣೆಯಿಂದ ಹೊರಬರುವ ಮಾಹಿತಿಗಳಿಂದ ಗಲಭೆಗೆ ಕಾರಣ ಯಾರು ಎಂಬುದು ಸ್ಪಷ್ಟ ಚಿತ್ರಣ ಸಿಗಲಿದೆ ಎಂದು ಗೃಹ ಸಚಿವ ಬಸವರಾಜ್​ ಬೊಮ್ಮಾಯಿ ಹೇಳಿದ್ದಾರೆ.

ಗೃಹ ಸಚಿವ ಬಸವರಾಜ್​ ಬೊಮ್ಮಾಯಿ

ಆರ್.ಟಿ.ನಗರದ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಪತ್​​​​ರಾಜ್ ಕೊರೊನಾ ನೆಪವೊಡ್ಡಿ ಬ್ಯಾಪ್ಟಿಸ್ಟ್ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಅಲ್ಲಿಂದ ತಲೆಮರೆಸಿಕೊಂಡಿದ್ದರು. ನಿನ್ನೆ ರಾತ್ರಿ ಅವರನ್ನು ಬಂಧಿಸಲಾಗಿದೆ. ಇಂದು‌ ನ್ಯಾಯಾಲಯದ ಎದುರು ಹಾಜರುಪಡಿಸಲಾಗುತ್ತದೆ. ಅದಾದ ಬಳಿಕ ಹೆಚ್ಚಿನ ತನಿಖೆ ನಡೆಯಲಿದೆ ಎಂದರು.

ಇದನ್ನೂ ಓದಿ...ಸಿಸಿಬಿ ವಶದಲ್ಲಿ ಸಂಪತ್ ರಾಜ್: ತಲೆಮರೆಸಿಕೊಂಡು ಮಾಜಿ ಮೇಯರ್​ ಇದ್ದಿದ್ದೆಲ್ಲಿ ಗೊತ್ತಾ?

ETV Bharat Logo

Copyright © 2024 Ushodaya Enterprises Pvt. Ltd., All Rights Reserved.