ETV Bharat / city

ಸಾಮೂಹಿಕ ಅತ್ಯಾಚಾರ ಪ್ರಕರಣ ಬೇಧಿಸಲು ಸರ್ವಪ್ರಯತ್ನ; ಕಾಂಗ್ರೆಸ್‌ ರಾಜಕೀಯ ಮಾಡಬಾರದು: ಗೃಹಸಚಿವ - Mysuru latest news

Mysuru Gang Rape ಮೈಸೂರಿನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣ ತಲೆತಗ್ಗಿಸುವಂಥದ್ದು. ನಾಳೆ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸುತ್ತೇನೆ. ಈ ಪ್ರಕರಣ ಬೇಧಿಸಲು ಎಲ್ಲಾ ರೀತಿಯ ಪ್ರಯತ್ನ ಮಾಡಲಾಗುತ್ತಿದೆ ಎಂದು ಗೃಹ ಸಚಿವರು ತಿಳಿಸಿದರು.

Home minister on Mysore Gang  rape
Mysuru Gang Rape: ಆರೋಪಿಗಳ ಪತ್ತೆಗೆ ಹೊಸ ತಂಡ ರಚನೆ ಭರವಸೆ ನೀಡಿದ ಗೃಹಸಚಿವರು
author img

By

Published : Aug 26, 2021, 1:01 PM IST

ಬೆಂಗಳೂರು: ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ ಸಂಬಂಧ ಈಗಾಗಲೇ ಎಫ್ಐಆರ್ ದಾಖಲಿಸಿಕೊಂಡಿರುವ ಪೊಲೀಸರು ತಲೆಮರೆಸಿಕೊಂಡಿರುವ ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚಿಸಿರುವುದಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಪೊಲೀಸರು ನಿರಂತರವಾಗಿ ಕೆಲಸ ಮಾಡುತ್ತಿದ್ದಾರೆ.‌ ಇಂದು ಸಂಜೆ ಮೈಸೂರಿಗೆ ತೆರಳುತ್ತಿದ್ದೇನೆ‌. ನಾಳೆ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸುತ್ತೇನೆ. ಪ್ರಕರಣ ಬೇಧಿಸಲು ಎಲ್ಲಾ ರೀತಿಯ ಪ್ರಯತ್ನ ಮಾಡಲಾಗುತ್ತಿದೆ. ಬೆಂಗಳೂರಿನಿಂದ ಹಿರಿಯ ಅಧಿಕಾರಿ ಪ್ರತಾಪ್ ರೆಡ್ಡಿ ಅವರನ್ನು ಮೈಸೂರಿಗೆ ಕಳುಹಿಸಲಾಗಿದೆ. ತನಿಖೆಗೆ ಬೇರೆ-ಬೇರೆ ತಂಡಗಳನ್ನು ರಚಿಸಲಾಗಿದೆ‌ ತಲೆಮರೆಸಿಕೊಂಡಿರುವ ಆರೋಪಿಗಳ ಬಂಧನಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದರು.

ಮೈಸೂರು ಪ್ರಮುಖವಾದ ಪ್ರವಾಸಿ ತಾಣ. ಸಾವಿರಾರು ಜನ ಪ್ರವಾಸಿಗರು ಅಲ್ಲಿಗೆ ಬರುತ್ತಾರೆ. ಈ ಘಟನೆ ದುರದೃಷ್ಟಕರ, ತಲೆತಗ್ಗಿಸುವಂತಹದ್ದು. ನಾಳೆ ಇಡೀ ದಿನ ಮೈಸೂರಿನಲ್ಲೇ ಇರುತ್ತೇನೆ, ಪೊಲೀಸ್ ಅಧಿಕಾರಿಗಳ ಜೊತೆ ಸಭೆಗಳನ್ನು ನಡೆಸುತ್ತೇನೆ ಎಂದು ಗೃಹ ಸಚಿವರು ಮಾಹಿತಿ ನೀಡಿದರು‌.

ಪೊಲೀಸರು ತಕ್ಷಣವೇ ಕಾರ್ಯೋನ್ಮುಖರಾಗಿದ್ದಾರೆ. ವಿದ್ಯಾರ್ಥಿನಿಯನ್ನು ಆಸ್ಪತ್ರೆಗೆ ಸೇರಿಸುವುದರಿಂದ ಹಿಡಿದು ಎಲ್ಲವನ್ನೂ ನಿಭಾಯಿಸಿದ್ದಾರೆ. ಘಟನೆ ನಡೆದ 24 ಗಂಟೆಯೊಳಗೆ ಎಫ್‌ಐಆರ್ ದಾಖಲಾಗಿದೆ. ವಿದ್ಯಾರ್ಥಿನಿ ಮೂಲತಃ ಮಹಾರಾಷ್ಟ್ರದವರು ಎಂಬ ಮಾಹಿತಿಯಿದೆ. ಅವರ ತಂದೆ, ತಾಯಿ ಸಹ ಆಗಮಿಸಿದ್ದಾರೆ ಎಂದು ಮಾಹಿತಿ ನೀಡಿದರು.

'ಕಾಂಗ್ರೆಸ್ ರಾಜಕೀಯ ಮಾಡಬಾರದು'

ಅತ್ಯಾಚಾರ‌ ಪ್ರಕರಣ ಸಂಬಂಧ ಕಾಂಗ್ರೆಸ್ ರಾಜಕೀಯ ಮಾಡಬಾರದು. ಇದು ರಾಜಕೀಯ ಮಾಡುವ ಘಟನೆಯೂ ಅಲ್ಲ. ಕಾಂಗ್ರೆಸ್ ಅವಧಿಯಲ್ಲಿ ಏನು ಸುಖವಾಗಿತ್ತಾ? ಇಂತಹ ಘಟನೆಗಳು ಆಗಿರಲಿಲ್ವಾ?, ಅವರ ಅವಧಿಯಲ್ಲೂ ನಡೆದಿತ್ತು. ಬಿಜೆಪಿ ಸರ್ಕಾರ ಇದೆ ಎಂಬ ಕಾರಣಕ್ಕೆ ಆರೋಪ ಮಾಡುತ್ತಿದ್ದಾರೆ. ರಾಜಕೀಯ ಲಾಭ ಪಡೆಯುವುದು ಸರಿಯಲ್ಲ ಎಂದು ಗೃಹ ಸಚಿವರು ಹೇಳಿದರು.

ಜೈಲುಗಳಲ್ಲಿ ಅಕ್ರಮ ‌ಚಟುವಟಿಕೆ ನಡೆಯುತ್ತಿರುವ ವಿಚಾರ ಪ್ರತಿಕ್ರಿಯಿಸಿ, ಸಚಿವರು ಇದು ನನ್ನ ಗಮನಕ್ಕೂ ಬಂದಿದೆ. ಮಾಧ್ಯಮಗಳನ್ನ ನೋಡಿ ಮಾಹಿತಿ ತಿಳಿದುಕೊಂಡಿದ್ದೇನೆ. ಮುಂದಿನ ದಿನಗಳಲ್ಲಿ ಕಟ್ಟುನಿಟ್ಟಿನ ಕ್ರಮಕೈಗೊಳ್ಳಲಾಗುವುದು. ಸಾಧ್ಯವಾದಷ್ಟು ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲಾಗುವುದು ಎಂದು ಭರವಸೆ ನೀಡಿದರು.

ಇದನ್ನೂ ಓದಿ: ಜಿಲ್ಲಾ ಭೂದಾಖಲೆಗಳ ಉಪನಿರ್ದೇಶಕಿ ಕುಸುಮಲತಾ ಮನೆ, ಕಚೇರಿ ಮೇಲೆ ಎಸಿಬಿ ದಾಳಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.