ETV Bharat / city

ಹೊಸಕೋಟೆ ಏತ ನೀರಾವರಿ ಯೋಜನೆ ಕಾಮಗಾರಿ 2022ರ ಆಗಸ್ಟ್ ಒಳಗೆ ಪೂರ್ಣ: ಡಿಸಿಎಂ ಕರಾಜೋಳ ಭರವಸೆ

ಕೆ.ಆರ್.ಪುರಂ ಎಸ್.ಟಿ.ಪಿ.ಯಿಂದ ಹೊಸಪೇಟೆ ತಾಲೂಕಿನ 38 ಕೆರೆಗಳಿಗೆ 149.85 ಕೋಟಿ ರೂ. ಮೊತ್ತದ ಪರಿಷ್ಕೃತ ಯೋಜನೆಗೆ ಚಾಲನೆ ನೀಡಲಾಗಿದೆ. ಕಾಮಗಾರಿಗಳು 2021ರ ಫೆಬ್ರವರಿಯಲ್ಲಿ ಆರಂಭವಾಗಿವೆ. ಈ ಯೋಜನೆ ಜಾರಿಯಿಂದ ಹೊಸಕೋಟೆ ತಾಲೂಕಿನ 38 ಕೆರೆಗಳಿಗೆ ನೀರು ತುಂಬಿಸಬಹುದಾಗಿದೆ. 2022ರ ಆಗಸ್ಟ್ ಒಳಗೆ ಯೋಜನೆ ಪೂರ್ಣಗೊಳಿಸುವುದಾಗಿ ಡಿಸಿಎಂ ಗೋವಿಂದ ಕಾರಜೋಳ ಭರವಸೆ ನೀಡಿದರು.

hosakote-irrigation-project-works-will-complete-by-2022-august
ವಿಧಾನಸಭೆ
author img

By

Published : Mar 16, 2021, 5:17 PM IST

ಬೆಂಗಳೂರು: ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ 38 ಕೆರೆಗಳಿಗೆ ಕೆ.ಆರ್.ಪುರಂ ಎಸ್‌ಟಿಪಿಯಿಂದ ಸಂಸ್ಕರಿಸಿದ ತ್ಯಾಜ್ಯ ನೀರನ್ನು ತುಂಬಿಸುವ ಏತ ನೀರಾವರಿ ಯೋಜನೆ ಕಾಮಗಾರಿಗಳನ್ನು 2022ರ ಆಗಸ್ಟ್ ಒಳಗೆ ಪೂರ್ಣಗೊಳಿಸಲಾಗುವುದು ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ ವಿಧಾನಸಭೆಯಲ್ಲಿ ತಿಳಿಸಿದರು.

ಸದನದಲ್ಲಿ ಪ್ರಶ್ನೋತ್ತರ ವೇಳೆ ಕಾಂಗ್ರೆಸ್ ಬೆಂಬಲಿತ ಸದಸ್ಯ ಶರತ್ ಬಚ್ಚೇಗೌಡ ಅವರ ಪ್ರಶ್ನೆಗೆ ಸಣ್ಣ ನೀರಾವರಿ ಸಚಿವ ಮಾಧುಸ್ವಾಮಿ ಅವರ ಪರವಾಗಿ ಉತ್ತರಿಸಿದ ಅವರು, ಕೆ.ಆರ್.ಪುರಂ ಎಸ್.ಟಿ.ಪಿ.ಯಿಂದ ಹೊಸಪೇಟೆ ತಾಲೂಕಿನ 38 ಕೆರೆಗಳಿಗೆ 149.85 ಕೋಟಿ ರೂ. ಮೊತ್ತದ ಪರಿಷ್ಕೃತ ಯೋಜನೆಗೆ ಚಾಲನೆ ನೀಡಲಾಗಿದೆ. ಕಾಮಗಾರಿಗಳು 2021ರ ಫೆಬ್ರವರಿಯಲ್ಲಿ ಆರಂಭವಾಗಿವೆ ಎಂದು ಹೇಳಿದರು.

ಹೊಸಕೋಟೆ ಏತ ನೀರಾವರಿ ಯೋಜನೆ ಕಾಮಗಾರಿ 2022ರ ಆಗಸ್ಟ್ ಒಳಗೆ ಪೂರ್ಣ

ಈ ಯೋಜನೆ ಜಾರಿಯಿಂದ ಹೊಸಕೋಟೆ ತಾಲೂಕಿನ 38 ಕೆರೆಗಳಿಗೆ ನೀರು ತುಂಬಿಸಬಹುದಾಗಿದೆ. 2022ರ ಆಗಸ್ಟ್ ಒಳಗೆ ಯೋಜನೆ ಪೂರ್ಣಗೊಳಿಸುವುದಾಗಿ ಹೇಳಿದರು. ಈ ಯೋಜನೆಯ ಕಾಮಗಾರಿ ಪ್ರಗತಿಯನ್ನು ಆಗಾಗ ಪರಿಶೀಲನೆ ನಡೆಸಲಾಗುತ್ತಿದೆ. ಪರಿಶೀಲನೆ ಸಂದರ್ಭದಲ್ಲಿ ಶಾಸಕ ಶರತ್ ಬಚ್ಚೇಗೌಡ ಅವರು ಪಾಲ್ಗೊಳ್ಳಬಹುದು. ಏನೇ ಆದರೂ ಆಗಸ್ಟ್ 2022ಕ್ಕೆ ಕಾಮಗಾರಿಗಳು ಪೂರ್ಣಗೊಳ್ಳಲಿವೆ. ಕೊರೊನಾ ಕಾರಣದಿಂದ ಕಾಮಗಾರಿ ವಿಳಂಬವಾಗಿದೆ. ಆದಷ್ಟು ಶೀಘ್ರದಲ್ಲಿ ಕೆಲಸ ಮುಗಿಸುತ್ತೇವೆ ಎಂದು ಸ್ಪಷ್ಟಪಡಿಸಿದರು.

ನಾರಾಯಣಪುರ ಬಲದಂಡೆ ನಾಲೆ ನವೀಕರಣದಲ್ಲಿ ಯಾವುದೇ ಅವ್ಯವಹಾರ ನಡೆದಿಲ್ಲ

ನಾರಾಯಣಪುರ ಬಲದಂಡೆ ನಾಲೆ ನವೀಕರಣ ಕಾಮಗಾರಿಯಲ್ಲಿ ಯಾವುದೇ ಅವ್ಯವಹಾರ ನಡೆದಿಲ್ಲ ಅಥವಾ ಕಳಪೆಯಾಗಿಲ್ಲ ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ ವಿಧಾನಸಭೆಯಲ್ಲಿ ಸ್ಪಷ್ಟಪಡಿಸಿದರು.

ಇಂದು ಪ್ರಶ್ನೋತ್ತರ ವೇಳೆಯಲ್ಲಿ ಬಸವನಗೌಡ ದದ್ದಲ್ ಪ್ರಶ್ನೆಗೆ ಮುಖ್ಯಮಂತ್ರಿಗಳ ಪರವಾಗಿ ಉತ್ತರಿಸಿದ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಸರ್ಕಾರ ಯಾವುದೇ ಕಾಮಗಾರಿ ಕೈಗೊಳ್ಳುವ ಮುನ್ನ ತಾಂತ್ರಿಕ ಸಮಿತಿ ಒಪ್ಪಿಗೆ ಪಡೆದು ಇ-ಟೆಂಡರ್ ಮೂಲಕ ಗುತ್ತಿಗೆದಾರರನ್ನು ಆಯ್ಕೆ ಮಾಡಲಾಗುತ್ತದೆ. ಗುತ್ತಿಗೆದಾರರಿಗೆ ಅನುಕೂಲ ಮಾಡಿಕೊಡಲು ಕಾಮಗಾರಿ ಅಂದಾಜು ವೆಚ್ಚ ಹೆಚ್ಚಿಸಲಾಗಿದೆ ಎಂಬ ಆರೋಪದಲ್ಲಿ ಯಾವುದೇ ಹುರುಳಿಲ್ಲ. ಇದು ಸತ್ಯಕ್ಕೆ ದೂರವಾದ ಸಂಗತಿ ಎಂದರು.

ಟೆಂಡರ್ ಪಾರದರ್ಶಕವಾಗಿದ್ದು, ಮೂರ್ನಾಲ್ಕು ಹಂತಗಳಲ್ಲಿ ಕಾಮಗಾರಿ ಪರಿಶೀಲನೆಗೊಳಗಾಗುತ್ತದೆ. ಕಾಮಗಾರಿ ಕಳಪೆಯಲ್ಲ ಎಂದು ಹೇಳಿದರು. ಇದಕ್ಕೂ ಮುನ್ನ ಮಾತನಾಡಿದ ಕಾಂಗ್ರೆಸ್ ಶಾಸಕ ಅಮರೇಗೌಡ ಬಯ್ಯಾಪುರ, ಕಾಲುವೆ ನಿರ್ಮಾಣದಲ್ಲಿ ಅವ್ಯವಹಾರವಾಗಿದ್ದು, ಕಾಮಗಾರಿ ವೆಚ್ಚ 500ರಿಂದ 900 ಕೋಟಿಗೆ ಹೆಚ್ಚಳವಾಗಿದೆ. ಹೀಗಾಗಿ ತನಿಖೆಗೆ ಒಳಪಡಿಸಬೇಕೆಂದು ಆಗ್ರಹಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.