ಬೆಂಗಳೂರು: ವೀಕೆಂಡ್ ಕರ್ಫ್ಯೂ, ನೈಟ್ ಕರ್ಫ್ಯೂ ಹೇರಿರುವುದಕ್ಕೆ ಹೋಟೆಲ್, ರೆಸ್ಟೋರೆಂಟ್, ಕಲ್ಯಾಣ ಮಂಟಪಗಳ ಮಾಲೀಕರು, ಬಾರ್, ಪಬ್ ಮಾಲೀಕರ ಸಂಘಗಳಿಂದ ವಿರೋಧ ವ್ಯಕ್ತವಾಗಿದೆ. ಮುಂದಿನ ದಿನಗಳಲ್ಲಿ ಸರ್ಕಾರ ತನ್ನ ನಿರ್ಧಾರವನ್ನು ಹಿಂಪಡೆಯದಿದ್ದರೆ ಕರ್ಫ್ಯೂ ಉಲ್ಲಂಘಿಸುವ ಎಚ್ಚರಿಕೆ ನೀಡಿದ್ದಾರೆ.
ಈ ಕುರಿತು ನಗರದ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಪ್ರವೀಣ್ ಶೆಟ್ಟಿ ಹಾಗೂ ಬೆಂಗಳೂರು ಹೋಟೆಲ್ ಉದ್ದಿಮದಾರರ ಸಂಘದ ಪಿ.ಸಿ.ರಾವ್ ಮತ್ತು ಹಲವು ಸಂಘಟನೆಗಳ ಮುಖಂಡರು ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.
ವೀಕೆಂಡ್ ಕರ್ಫ್ಯೂ ವೇಳೆ ಶೇ.50ರಷ್ಟು ಅವಕಾಶ, ನೈಟ್ ಕರ್ಫ್ಯೂ ವೇಳೆ ಹೋಟೆಲ್ಗಳಿಗೆ ಶೇ.50 ಅವಕಾಶ ಕೊಡಬೇಕು. ಈ ನಿಟ್ಟಿನಲ್ಲಿ ನಾವೆಲ್ಲರೂ ಸರ್ಕಾರಕ್ಕೆ ಒಕ್ಕೂರಲಿನಿಂದ ಒತ್ತಾಯ ಮಾಡುತ್ತೇವೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಕೋವಿಡ್ ಅನ್ನೋದು ಒಂದು ಮೆಡಿಕಲ್ ಮಾಫಿಯಾ: ಅಗ್ನಿ ಶ್ರೀಧರ್