ಬೆಂಗಳೂರು : ನಗರದ ಜ್ಞಾನ ಭಾರತಿ ಪೊಲೀಸರು ಕಾರ್ಯಾಚರಣೆ ನಡೆಸಿ ಮನೆಗಳ್ಳತನ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿದ್ದಾರೆ.
ಕೃಷ್ಣಗಿರಿ ಜಿಲ್ಲೆಯ ಮೋಹನ್ ರಾಜ್ ಬಂಧಿತ ಆರೋಪಿ. ಈತ ಜ್ಞಾನ ಭಾರತಿ ಠಾಣೆ ವ್ಯಾಪ್ತಿಯಲ್ಲಿ ಮೂರು ಮನೆಗಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದ. ಇದೀಗ ಬಂಧಿತನಿಂದ 4 ಲಕ್ಷ ರೂ. ಮೌಲ್ಯದ 100 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ.