ಹುಬ್ಬಳ್ಳಿ: ಕಳ್ಳತನದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ 21 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪತ್ತೆ ಹಚ್ಚುವಲ್ಲಿ ಇಲ್ಲಿನ ಶಹರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.
ಹಳೇ ಪ್ರಕರಣದ ಹಿನ್ನೆಲೆಯಲ್ಲಿ ಆರೋಪಿಯು ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಶಹರ ಠಾಣೆ ಇನ್‌ಸ್ಪೆಕ್ಟರ್ ಆನಂದ ಒನಕುದರಿ ಇವರ ನೇತೃತ್ವದ ತಂಡ ಗೋವಾ ರಾಜ್ಯದಲ್ಲಿ ಆರೋಪಿಯನ್ನು ಪತ್ತೆ ಮಾಡಿ ರಾತ್ರಿ ನ್ಯಾಯಾಲಯಕ್ಕೆ ಹಾಜರುಪಡಿಸಿದೆ.
ಸದ್ಯ ಆರೋಪಿ ನ್ಯಾಯಾಂಗ ಬಂಧನದಲ್ಲಿದ್ದಾನೆ. ಆರೋಪಿ ಪತ್ತೆ ಹಚ್ಚಿದ ಇನ್‌ಸ್ಪೆಕ್ಟರ್ ನೇತೃತ್ವದ ತಂಡದ ಕಾರ್ಯವನ್ನು ಪೊಲೀಸ್ ಆಯುಕ್ತ ಲಾಭೂರಾಮ್ ಅವರು ಶ್ಲಾಘಿಸಿದ್ದಾರೆ.